ಹೋರಾಟಗಾರರ ತತ್ವಾದರ್ಶ ಅಳವಡಿಸಿಕೊಳ್ಳಿ 

Team Udayavani, Aug 16, 2018, 5:33 PM IST

16-agust-22.jpg

ರೋಣ: ನೂರಾರು ವರ್ಷಗಳ ಕಾಲ ನಮ್ಮನ್ನು ಜೀತದಾಳಗಿಸಿಕೊಂಡಿದ್ದ ಬ್ರಿಟಿಷರಿಂದ ಮುಕ್ತಗೊಳಿಸುವಲ್ಲಿ ಮಹಾನ ನಾಯಕರ ಪಾತ್ರ ಬಹುದೊಡ್ಡದು. ಮಹಾನ್‌ ದಾರ್ಶಿನಿಕರ ಮಾರ್ಗದರ್ಶನಲ್ಲಿ ಪ್ರತಿಯೊಬ್ಬರು ನಡೆಯಬೇಕು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್‌, ಪುರಸಭೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜರುಗಿದ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ರಿಟಿಷರಿಂದ ದೇಶವನ್ನು ಮುಕ್ತಗೊಳಿಸಿದ ನಂತರ ಹಲವು ವರ್ಷಗಳ ಕಾಲ ನಮ್ಮ ದೇಶ ಪರಾವಲಂಬಿಯಾಗಿತ್ತು. ಆದರೆ, ಈಗ ಸದ್ಯ 135 ಕೋಟಿ ಜನರಿಗೂ ಸಾಕಾಗುವಷ್ಟು ಆಹಾರ ಉತ್ಪಾದಿಸುವ ಮೂಲಕ ಸ್ವಾವಲಂಬಿಯಾಗಿದೆ. ಇದಕ್ಕೆ ಕಾರಣ ಈ ದೇಶವನ್ನು ಆಳಿದ ಸರ್ಕಾರದ ನೀತಿ ನಿಯಮಗಳು ಎಂದರು.

ಭಾರತ ದೇಶ ಎಲ್ಲ ರಂಗದಲ್ಲೂ ಯಾವ ದೇಶಕ್ಕೂ ಕಡಿಮೆ ಇಲ್ಲದಂತೆ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಭಯೋತ್ಪಾದಕ ಕೃತ್ಯಗಳನ್ನು ಶಮನ ಮಾಡುವಲ್ಲಿ ಸನ್ನದ್ಧವಾಗಿದೆ. ನಮ್ಮ ಸೈನಿಕರು ಶತ್ರು ರಾಷ್ಟ್ರಗಳ ದಾಳಿ ಎದುರಿಸಲು ಎಲ್ಲ ರೀತಿಯಾದ ಶಕ್ತಿ ಸಾಮರ್ಥ್ಯ ಹೊಂದಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ಮತ್ತು ದೇಶದ ಸೈನಿಕರ ಸೇವೆ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ್‌ ಅಜಿತ ಎಂ. ರೈ, ಪರಕೀಯರ ಕಪಿಮುಷ್ಠಿಯಿಂದ ದೇಶವನ್ನು ಬಂಧ ಮುಕ್ತಗೊಳಿಸಲು ದಿಟ್ಟತನದಿಂದ ಹೋರಾಡಿ, ತ್ಯಾಗ-ಬಲಿದಾನಗೈದ ಮಹಾನ್‌ ದಾರ್ಶಿನಿಕರನ್ನು ನಿತ್ಯ ನೆನೆಯಬೇಕು. ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಸ್ವಾತಂತ್ರ್ಯ ಹೋರಾಟಗಾರ ಎಸ್‌.ಎಲ್‌. ಪಲ್ಲೇದ ಅವರನ್ನು ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮುತ್ತಣ್ಣ ಲಿಂಗನಗೌಡ್ರ, ಅಶೋಕ ನವಲಗುಂದ, ಶಿವಾನಂದ ಜಿಡ್ಡಿವಾಗಿಲ, ಜಿಪಂ ಸದಸ್ಯ ಪಡಿಯಪ್ಪ ಪೂಜಾರ, ಬಸನಗೌಡ ಬಸನಗೌಡ್ರ, ತಾಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ಇಂದಿರಾ ತೇಲಿ, ಎಂ.ವಿ. ಚಳಗೇರಿ, ಸಿಪಿಐ ಜೆ.ಸಿ. ಪ್ರಕಾಶ, ಶಿವಣ್ಣ ನವಲಗುಂದ, ವಿವಿಧ ಇಲಾಖೆ ಅ ಧಿಕಾರಿಗಳು ಉಪಸ್ಥಿತರಿದ್ದರು. ಬಿಇಒ ನಂಜುಡಯ್ಯ ಸ್ವಾಗತಿಸಿದರು. ಅಕ್ಷರ ದಾಸೋಹ ಅಧಿಕಾರಿ ಎಸ್‌.ಎಸ್‌.ಅಂಗಡಿ ವಂದಿಸಿದರು.

ಟಾಪ್ ನ್ಯೂಸ್

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್‌ ಆರೋಪ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.