ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೆ ಹಕ್ಕೊತ್ತಾಯ
ಮಿನಿವಿಧಾನಸೌಧದ ಬಳಿ ಅನಿರ್ದಿಷ್ಟಾವಧಿ ಧರಣಿ
Team Udayavani, May 10, 2022, 9:34 AM IST
ಧಾರವಾಡ: ರಾಜ್ಯದ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ, ಮಾಧ್ಯಮಿಕ ಶಿಕ್ಷಕ ಸಂಘ, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ನಗರದ ಮಿನಿವಿಧಾನಸೌಧದ ಬಳಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರದಿಂದ ಆರಂಭಗೊಂಡಿದೆ.
ನಗರದ ಕಲಾಭವನ ಬಳಿ ಸಮಾವೇಶಗೊಂಡ ಅನುದಾನಿತ ಪಿಂಚಣಿ ವಂಚಿತ ನೌಕರರು, ಡಿಸಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ಕೈಗೊಂಡು ಮನವಿ ಸಲ್ಲಿಸಿದರು.
ಹೋರಾಟಕ್ಕೆ ಬೆಂಬಲ ಸೂಚಿಸಿದ ರಾಜ್ಯ ಶಿಕ್ಷಕರ ಉಪನ್ಯಾಸಕರ ಸಂಘದ ಕ್ರಿಯಾಸಮಿತಿ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ 01-04-2006ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಯಾವುದೇ ಪಿಂಚಣಿ ಸೌಲಭ್ಯ ಇಲ್ಲ. ಎನ್‌ಪಿಎಸ್ ಅಥವಾ ಒಪಿಎಸ್ ಎರಡೂ ಇಲ್ಲ ಎಂದರು.
ಪಿಂಚಣಿ ಸೌಲಭ್ಯ ದೊರೆಯದೆ ಈಗಾಗಲೇ ಸರಿಸುಮಾರು 2000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ. ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕವಾಗಿ ಮರಣ ಹೊಂದಿದ್ದಾರೆ. ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ. ರಾಜ್ಯದ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಪಿಂಚಣಿ ವ್ಯವಸ್ಥೆಗೆ ಒಳಪಡದೆ ಸುಮಾರು 60,000 ನೌಕರರು ದುಡಿಯುತ್ತಿದ್ದಾರೆ. ಇಡೀ ದೇಶದಲ್ಲಿ ಕೇವಲ ಕರ್ನಾಟಕದಲ್ಲಿ ಮಾತ್ರ ಈ ತಾರತಮ್ಯ ಇರುವುದು ದುರಂತ. ಸರ್ಕಾರದ ಈ ಅನ್ಯಾಯವನ್ನು ಖಂಡಿಸಿ ಈಗಾಗಲೇ ರಾಜ್ಯಾದ್ಯಂತ ಅನೇಕ ಹೋರಾಟಗಳನ್ನು ಮಾಡಿ ಗಮನ ಸೆಳೆಯಲಾಗಿದೆ. ಆದರೂ ಸರಕಾರ ಪಿಂಚಿತ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುತ್ತಿಲ್ಲ ಎಂದು ದೂರಿದರು.
ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಮಾತನಾಡಿ, ಸರಕಾರ ಪಿಂಚಣಿ ಬೇಡಿಕೆ ಈಡೇರಿಸದೆ ಹೋದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ|ಕೆ.ಹನುಮಂತಪ್ಪ, ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ. ಗೋಪಿನಾಥ, ಪ್ರಮುಖರಾದ ಮೋಹನ ಸಿದ್ಧಾಂತಿ, ಆನಂದ ಕುಲಕರ್ಣಿ, ಟಿ.ರವಿಕುಮಾರ, ಜಾಲಮಂಗಲ ನಾಗರಾಜ, ರಿಯಾಜಹ್ಮದ ಸನದಿ, ಎಸ್.ಎಲ್. ಜಾಧವ, ವೀರಭದ್ರಸ್ವಾಮಿ, ಹೊಸದುರ್ಗ ಪ್ರಕಾಶ, ಶಿವಾನಂದ ಹಿರೇಕುರುಬರ, ಲಕ್ಷ್ಮೀಪುತ್ರ ಕಿರಣಹಳ್ಳಿ, ಮುತ್ತುರಾಜ ಮತ್ತಿಕೊಪ್ಪ, ಡಾ| ಎಚ್.ವಿ.ಬೆಳಗಲಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.