ಎಸ್ಸೆಸ್ಸೆಲಿ ಪರೀಕ್ಷೆ ಫಲಿತಾಂಶ ಉನ್ನತೀಕರಿಸಿ: ಸಚಿವ ಮಹೇಶ
Team Udayavani, Aug 17, 2018, 4:15 PM IST
ಗದಗ: ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಉನ್ನತೀಕರಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಿಸಲು ಪ್ರಯತ್ನಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು ಅ ಧಿಕಾರಿಗಳಿಗೆ ಸಲಹೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ 2018ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಶೇ.67.52ರಷ್ಟು ದಾಖಲಾಗಿದೆ. 12870 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 8690 ಮಕ್ಕಳು ಉತ್ತೀಣರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಸಕ್ತ 2019ನೇ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಉನ್ನತೀಕರಿಸಬೇಕು. ಈ ನಿಟ್ಟಿನಲ್ಲಿ ಬಿಇಒ, ಸಬ್ಜೆಕ್ಟ್ ಇನ್ಸ್ ಪೆಕ್ಟರ್, ಶಿಕ್ಷಕರು ಹಾಗೂ ಮುಖ್ಯಗುರು ಹೆಚ್ಚಿನ ಆಸಕ್ತಿ ವಹಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರತ್ಯೇಕ ಬೋಧನೆ ಮಾಡಬೇಕು. ಮುಖ್ಯಗುರ ಕಾರ್ಯಾಗಾರ ಏರ್ಪಡಿಸಲು ಸಲಹೆ ನೀಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೂಲ ಸೌಕರ್ಯಗಳು, ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ, ಸಮವಸ್ತ್ರ ವಿತರಣೆ, ಆರ್‌ಟಿಎ ಕಾಯ್ದೆಯಡಿ ಶಾಲಾ ಮಕ್ಕಳ ದಾಖಲಾತಿ ಕುರಿತು ಚರ್ಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.