ಪ್ರಧಾನಮಂತ್ರಿ ಆವಾಸ್ ಯೋಜನೆಯಿಂದ ಎಲ್ಲರಿಗೂ ಸೂರು
Team Udayavani, Jul 20, 2018, 5:17 PM IST
ಮುಂಡರಗಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಿಂದ ದೇಶದ ಎಲ್ಲರಿಗೂ ಸೂರು ದೊರಕಲಿದೆ ಎಂದು ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ. ಬಂಡಿ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಕುಡಿಯುವ ನೀರಿನ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮುಂಡರಗಿ ತಾಲೂಕಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ 12 ಸಾವಿರ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಯೋಜನೆಯಲ್ಲಿ ಎಷ್ಟು ಜನ ಫಲಾನುಭವಿಗಳು ಆದರೂ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಜು.30ರೊಳಗೆ ಸಮರೋಪಾದಿಯಲ್ಲಿ ಫಲಾನುಭವಿಗಳಿಂದ ಮನೆ-ಮನೆಗೆ ತೆರಳಿ ಅರ್ಜಿ ಸ್ವೀಕರಿಸಬೇಕು. ಪ್ರತಿ ಗ್ರಾಮದಲ್ಲಿ ಡಂಗೂರ ಸಾರಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆ ಬಗ್ಗೆ ಮಾಹಿತಿ ನೀಡಬೇಕು. ಯಾವುದೇ ಜಾತಿ, ಪಕ್ಷ ನೋಡದೇ ಬೇಧಭಾವ ಮಾಡದೇ ಅರ್ಜಿ ಪಡೆಯಬೇಕು. ಜತೆಗೆ ಫಲಾನುಭವಿಗಳು ಅರ್ಜಿ ಜತೆಯಲ್ಲಿ ಆಧಾರ್ ಕಾರ್ಡ್ ನೀಡಿದರೇ ಸಾಕು. ಗ್ರಾಮ ಪಂಚಾಯಿತಿಯವರು ಆನ್‌ಲೈನ್ ಮೂಲಕ ಅರ್ಜಿ ಅಪ್‌ಲೋಡ್ ಮಾಡುತ್ತಾರೆ. ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದರೇ ಶಿಸ್ತಿನ ಕ್ರಮ ಕೈಕೊಳ್ಳಲಾಗುವುದು. ಜನಪ್ರತಿನಿಧಿಗಳು ಕೂಡ ಅಭಿವೃದ್ಧಿ ಅಧಿಕಾರಿಗಳಿಗೆ ಸಹಕಾರ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸಾಕಾರಗೊಳಿಸಲು ಮುಂದಾಗಬೇಕು ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತರಾಜ್ ಇಲಾಖೆ ಅಧಿಕಾರಿಗಳು ಪರಿಹರಿಸುವರು. ಬಹುಗ್ರಾಮ ಸಮಗ್ರ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಳೆದ ವರ್ಷದ ಅಂತ್ಯಕ್ಕೆ ಪೂರ್ಣಗೊಳಿಸಬೇಕಾಗಿತ್ತು ಎಂದು ಬಂಡಿ ಹೇಳಿದರು. ಚರ್ಚೆಯಲ್ಲಿ ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ, ಗ್ರಾಪಂ ಅಧ್ಯಕ್ಷ ಬಸವರಾಜ ಗಂಗಾವತಿ, ಮಾರುತಿ ಹೊಸಮನಿ, ತಾಪಂ ಸದಸ್ಯರಾದ ರುದ್ರಗೌಡ ಪಾಟೀಲ, ಕುಸುಮಾ ಮೇಟಿ, ಪುಷ್ಪಾ ಪಾಟೀಲ, ಭರಮಪ್ಪ ನಾಗನೂರು, ಅಭಿಯಂತರ ಆಕಾಶ ಪಾಲ್ಗೊಂಡಿದ್ದರು. ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಕುಡಿಯುವ ನೀರಿನ ಬಗ್ಗೆ ಉಭಯ ಶಾಸಕರಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಜಿಪಂ ಸದಸ್ಯರಾದ ಶಕುಂತಲಾ ಚವ್ಹಾಣ, ಶೋಭಾ ಮೇಟಿ, ತಾಪಂ ಉಪಾಧ್ಯಕ್ಷೆ ಹೇಮಾವತಿ ಕನ್ನಾರಿ, ವೆಂಕಪ್ಪ ಬಳ್ಳಾರಿ ಇದ್ದರು. ತಾಪಂ ಸಿ.ಆರ್. ಮುಂಡರಗಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.