ರಾಯನಾಳದಲ್ಲಿ ಶೀಘ್ರ ಪಪೂ ಕಾಲೇಜ್ ಆರಂಭ
Team Udayavani, Jul 8, 2019, 2:14 PM IST
ಹುಬ್ಬಳ್ಳಿ: ರಾಯನಾಳದಲ್ಲಿ ಪದವಿ ಪೂರ್ವ ಕಾಲೇಜ್ ಹಾಗೂ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಕುಸುಮಾವತಿ ಎಸ್. ಶಿವಳ್ಳಿ ಅವರನ್ನು ಸನ್ಮಾನಿಸಲಾಯಿತು.
ಹುಬ್ಬಳ್ಳಿ: ರಾಯನಾಳ ಗ್ರಾಮದಲ್ಲಿ ಶೀಘ್ರವೇ ಸರಕಾರಿ ಪದವಿ ಕಾಲೇಜ್ ಪ್ರಾರಂಭಿಸಲಾಗುವುದು ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜ್ ಹಾಗೂ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾಗಿರುವ ನೂತನ ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಯನಾಳ ಸುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ಈಗಾಗಲೇ ಗ್ರಾಮದಲ್ಲಿ ಶ್ರೀ ರೇವಣಸಿದ್ಧೇಶ್ವರ ಕರ್ನಾಟಕ ಪಬ್ಲಿಕ್ ಶಾಲೆ (ಪದವಿ ಪೂರ್ವ ಕಾಲೇಜ್) ಇರುವುದರಿಂದ ಈಗ ಸರಕಾರಿ ಪದವಿ ಕಾಲೇಜ್ ಸ್ಥಾಪನೆಯು ಅಗತ್ಯವಾಗಿದೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣದ ಉನ್ನತೀಕರಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ರಾಯನಾಳ ಸೇರಿದಂತೆ ಕುಂದಗೋಳ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೂ ಸಮರ್ಪಕ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಪಂ ಸದಸ್ಯೆ ದೇವಕ್ಕ ಸವ್ವಾಸೆ, ಗ್ರಾಪಂ ಅಧ್ಯಕ್ಷ ಗುರುನಾಥ ಹಾನಗಲ್ಲ, ಎಸ್‌ಆರ್‌ಎಸ್ ಕಾಲೇಜ್ ವಿಭಾಗದ ಎಸ್‌ಡಿಎಂಸಿ ಉಪಾಧ್ಯಕ್ಷ ಸೂರ್ಯನಾರಾಯಣ ಅರ್ಜಿ, ಪ್ರಾಚಾರ್ಯ ಸೈಯದ ಫಯಾಜ ಅಹ್ಮದ್ ಮೊದಲಾದವರಿದ್ದರು.
ಇದೇ ಸಂದರ್ಭದಲ್ಲಿ ಶಾಸಕಿ ಕುಸುಮಾವತಿ ಅವರನ್ನು ರಾಯನಾಳ ಗ್ರಾಪಂ ಸದಸ್ಯರು, ಶಾಲಾ ಆಡಳಿತ ಮಂಡಳಿಯವರು, ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಶಾಸಕರು ಕೆಇಬಿ ನಿವೃತ್ತ ಅಧಿಕಾರಿ ಐ.ಎನ್. ಹೆಸರೂರ, ಗಂಗಿವಾಳ ಶಾಲೆಯ ಮುಖ್ಯಾಧ್ಯಾಪಕಿ ಎಸ್.ಜಿ. ನಾಗನೂರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಹುಬ್ಬಳ್ಳಿ ಗ್ರಾಮೀಣ ಘಟಕದ ಸದಸ್ಯ, ರಾಯನಾಳ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಂ.ಎಫ್. ಪಾಟೀಲ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಶ್ರೀಕಾಂತಯ್ಯ ಹಿರೇಮಠ ನಿರೂಪಿಸಿದರು. ಮಾಂತೇಶ ಕೋರಿಶೆಟ್ಟರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.