ಹುಬ್ಬಳ್ಳಿ ಹೊಸ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ನಾಳೆ
Team Udayavani, Aug 11, 2018, 5:29 PM IST
ಹುಬ್ಬಳ್ಳಿ: ನಗರದ ತಿಮ್ಮ ಸಾಗರದಲ್ಲಿನ ನೂತನ ನ್ಯಾಯಾಲಯ ಸಂಕೀರ್ಣದ ಉದ್ಘಾಟನಾ ಸಮಾರಂಭ ಆ.12ರಂದು ನಡೆಯಲಿದೆ ಎಂದು ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ್ಯಾಯಾಲಯ ಸಂಕೀರ್ಣವನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೀಪಕ ಮಿಶ್ರಾ ಆ.12ರಂದು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ, ಎಸ್. ಅಬ್ದುಲ್ ನಜೀರ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ ಮಾಹೇಶ್ವರಿ, ನ್ಯಾಯಮೂರ್ತಿ ರವಿ ಮಳಿಮಠ, ಧಾರವಾಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಬೂದಿಹಾಳ ಆರ್.ಬಿ., ವಿಧಾನ ಪರಿಷತ್ತು ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಸಂಸದ ಪ್ರಹ್ಲಾದ ಜೋಶಿ ಸೇರಿದಂತೆ ಒಟ್ಟು 36 ನ್ಯಾಯಮೂರ್ತಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ವಕೀಲರ ಸಂಘ 100 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ಏಷ್ಯಾದಲ್ಲಿಯೇ ಮಾದರಿಯಾದ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಏಳು ಅಂತಸ್ತುಗಳ ನ್ಯಾಯಾಲಯ ಸಂಕೀರ್ಣದಲ್ಲಿ ಮೊದಲಿನ ಎರಡು ಅಂತಸ್ತು ಪಾರ್ಕಿಂಗ್‌ಗೆ ಮೀಸಲಿಡಲಾಗಿದೆ ಎಂದರು. ಸಂಘದ ಪದಾಧಿಕಾರಿಗಳಾದ ಎಸ್.ವಿ. ಕೊಪ್ಪರ, ಜಯರಾಜ ಪಾಟೀಲ, ಸುಮೀತ ಶೆಟ್ಟರ, ದೇವರಾಜ ಗೌಡರ, ವಿಠ್ಠಲ ಸೋಮನಕೊಪ್ಪ, ಕಾಮಧೇನು ಆರ್.ಎಚ್., ಸವಿತಾ ಹಾನಗಲ್ಲ, ಶೋಭಾ ಹಬೀಬ, ಬಿ.ವಿ. ಕೋರಿಮಠ, ಸದಾನಂದ ದೊಡಮನಿ, ಮಂಜುನಾಥ ಕಟ್ಟಿ ಸುದ್ದಿಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.