ಉಸಿರಾಡಲೂ ಬಿಡದೆ ಐಟಿ ಬುಲಾವ್: ಡಿಕೆಶಿ
ಅಧಿಕಾರ ಅವರದ್ದಿದೆ,ಹೇಗೆ ಬೇಕು ಹಾಗೆ ಮಾಡಲಿ; ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಎಐಸಿಸಿಯಿಂದ ಸೂಚನೆ ಬಂದಿದೆ
Team Udayavani, Dec 2, 2019, 8:30 PM IST
ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆಯವರು ನೋಟಿಸ್ ನೀಡಿದ್ದಾರೆ. ನನಗೆ ಸ್ವಲ್ಪ ಉಸಿರಾಡಲು ಬಿಡಿ ಎಂದು ಕೇಳಿಕೊಂಡಿದ್ದೆ, ಆದರೆ ಕೂಡಲೇ ಬನ್ನಿ ಎಂದು ತಿಳಿಸಿದ್ದರಿಂದ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು ಕಾನೂನು ಅವರ ಕೈಯಲ್ಲಿದೆ, ಏನು ಬೇಕಾದರೂ ಮಾಡಬಹುದು. ಉಪಚುನಾವಣೆಯಲ್ಲಿ ಕಾಗವಾಡ ಚುನಾವಣಾ ಪ್ರಚಾರಕ್ಕೆ ಅನುಮತಿ ಕೊಟ್ಟಿಲ್ಲ. ಅ ಧಿಕಾರ ಅವರದ್ದಿದೆ, ಹೇಗೆ ಬೇಕು ಹಾಗೆ ಮಾಡಲಿ. ದುಡ್ಡಿನ ಮೇಲೆಯೇ ರಾಜಕಾರಣ ಮಾಡಲು ಸಾಧ್ಯವಿಲ್ಲ, ಮತದಾರರು ಬಿಜೆಪಿ ಬಳಿ ಹಣ ಪಡೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರದಲ್ಲಿ ಎಲ್ಲರೂ ಅವರದೇ ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕುರಿತು ಎಐಸಿಸಿಯಿಂದ ಕೆಲ ಸೂಚನೆಗಳು ಬಂದಿದ್ದು, ನೋಡೋಣ ಎಂದರು.
ಎಚ್‌ಡಿಕೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಹೊರಟ್ಟಿದ್ದ ಕುಮಾರಸ್ವಾಮಿ ಅವರು ಕೆಲಹೊತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದು ನಂತರ ಪ್ರಯಾಣ ಬೆಳೆಸಿದರು. ಇದೇ ಸಮಯದಲ್ಲಿ ಡಿ.ಕೆ.ಶಿವಕುಮಾರ ಬೆಂಗಳೂರಿಗೆ ತೆರಳಬೇಕಿತ್ತು. ಅವರು ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ ಪರಸ್ಪರ ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಉಪಚುನಾವಣೆ ಕುರಿತು ಚರ್ಚಿಸಿದರು. ಇಬ್ಬರೂ ನಾಯಕರು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ನಂತರ ಪ್ರತ್ಯೇಕ ಹೆಲಿಕಾಪ್ಟರ್‌ಗಳ ಮೂಲಕ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.