Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Team Udayavani, Apr 23, 2024, 6:26 PM IST
ಧಾರವಾಡ: ಭಯೋತ್ಪಾದನೆ ಮತ್ತು ಕೋಮುವಾದ ಒಂದೇ ನಾಣ್ಯದ ಎರಡು ಮುಖ. ಇದನ್ನು ಬೇರು ಸಹಿತ ಕಿತ್ತು ಹಾಕುವ ಪ್ರಯತ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಆದರೆ ಇದನ್ನು ಪ್ರೋತ್ಸಾಹಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದು ಸಮಾಜದ ಜನರ ಮೇಲೆ ಹಲ್ಲೆ ಮಾಡುವುದು ಸಾಮಾನ್ಯವಾಗಿದೆ. ಜೈ ಶ್ರೀರಾಮ ಎನ್ನುವವರ ಮೇಲೆ, ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹೀಗೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ಮೇಲೆ ಪ್ರಕರಣ ಸಹ ದಾಖಲಾಗುತ್ತಿಲ್ಲ ಎಂದು ದೂರಿದರು.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪಿಎಫ್ಐ, ಎಸ್ಡಿಪಿಐ ಜತೆಗೂಡಿ ಗಲಾಟೆ ಮಾಡಿದ್ದರು. ದಂಗೆಯಲ್ಲಿ ಬಂಧನವಾದವರ ಬಿಡುಗಡೆ ಮಾಡಿಸಲು ನಿಂತಿದ್ದರು. ದಲಿತ ಸಮುದಾಯಕ್ಕೆ ಸೇರಿದ ಅಖಂಡ ಶ್ರೀನಿವಾಸ ಮನೆ ಮೇಲೆ ದಾಳಿ ಆಗಿತ್ತು. ಆ ಆರೋಪಿಗಳನ್ನು ಸಹ ಬಿಡುಗಡೆ ಮಾಡಿಸಿದರು. ಪಾಕಿಸ್ತಾನ್ ಜಿಂದಾಬಾದ್ ಎಂದಾಗಲೂ ಎಂದಿಲ್ಲ ಎಂದು ವಾದಿಸಿದ ಕಾಂಗ್ರೆಸ್ ನಾಯಕರು, ಕೊನೆಗೆ ಒಬ್ಬರನ್ನು ಬಂಧಿಸಿದರು. ದಿನೇ ದಿನೇ ಕೊಲೆ, ಗಲಭೆ ನಡೆಯುತ್ತಲೇ ಇವೆ. ನಮ್ಮ ಪರ ಸರ್ಕಾರವಿದೆ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ. ಈ ರೀತಿಯ ಪ್ರವೃತ್ತಿ ನಮ್ಮ ಸಂಸತಿ ಮೇಲೆ ಪ್ರಹಾರ ನಡೆದಿದೆ ಎಂದರು.
ತಮ್ಮ ಚಿಹ್ನೆಯ ಧ್ವಜದಲ್ಲಿ ಕೇಸರಿ ಇದೆ ಎಂದು ರಾಹುಲ್ ಗಾಂಧಿ ಅದನ್ನು ಬಿಟ್ಟಿದ್ದಾರೆ. ತಮ್ಮ ಧ್ವಜ ಬಿಟ್ಟು, ಮುಸ್ಲಿಂ ಲೀಗ್ನ ಹಸಿರು ಧ್ವಜ ಹಿಡಿದು ನಾಮಪತ್ರ ಸಲ್ಲಿಸಲು ಹೋಗಿದ್ದಾರೆ. ತಮ್ಮ ಧ್ವಜ, ಚಿಹ್ನೆಯನ್ನೇ ಕೈ ಬಿಟ್ಟಿದ್ದಾರೆ. ಇದೊಂದು ದುರಂತ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.