ವಿಶ್ವಕ್ಕೆ ಕೊಡುಗೆ ಕೊಟ್ಟ ಭಾರತ ಬಡ ರಾಷ್ಟ್ರವಲ್ಲ

|ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್‌-ತಾಂತ್ರಿಕ ಮಹಾವಿದ್ಯಾಲಯ 9ನೇ ಘಟಿಕೋತ್ಸವ

Team Udayavani, Jun 9, 2019, 9:13 AM IST

bk-tdy-1..

ಧಾರವಾಡ: ನಗರದ ಎಸ್‌ಡಿಎಂ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 9ನೇ ಪದವಿ ಪ್ರದಾನ ಸಮಾರಂಭದಲ್ಲಿ ರಾಜಶ್ರೀ ಭಟ್‌ಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.ಧಾರವಾಡ: ನಗರದ ಎಸ್‌ಡಿಎಂ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 9ನೇ ಪದವಿ ಪ್ರದಾನ ಸಮಾರಂಭದಲ್ಲಿ ರಾಜಶ್ರೀ ಭಟ್‌ಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.

ಧಾರವಾಡ: ಭಾರತ ಬಡ ರಾಷ್ಟ್ರ ಎಂದು ಮಾಧ್ಯಮ ಹಾಗೂ ಪಠ್ಯಗಳಲ್ಲಿ ಬಿಂಬಿಸುತ್ತಿರುವುದು ಸುಳ್ಳು. ಭಾರತ ವಿಶ್ವದಲ್ಲಿಯೇ ಶ್ರೀಮಂತ ದೇಶ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ಜೈಪುರದ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ| ಉದಯ ಯರಗಟ್ಟಿ ಹೇಳಿದರು.

ನಗರದ ಎಸ್‌ಡಿಎಂ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ 9ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಯುವ ಎಂಜಿನಿಯರಿಂಗ್‌ ಪದವೀಧರರು ಸೂಕ್ತವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.

ವಿಶ್ವಕ್ಕೆ ಸೊನ್ನೆಯ ಕೊಡುಗೆ ನೀಡಿದ್ದು ಭಾರತ. ಮಹಾಭಾರತದಲ್ಲಿ ಕೌರವರು 101 ಅಂತ ಹೇಳಲು ಸಾಧ್ಯವಾಗಿದ್ದು ಈ ಸೊನ್ನೆಯಿಂದ. ರೈಟ್ ಸಹೋದರರು ವಿಮಾನ ಸಂಶೋಧನೆ ಮಾಡುವ ಮೊದಲೇ ಪುಷ್ಪಕ ವಿಮಾನಗಳ ಪರಿಕಲ್ಪನೆ ನಮ್ಮಲ್ಲಿ ಇದೆ. ಸೂರ್ಯನ ಸನ್ನಿಹಿತಕ್ಕೆ ತೆರಳಿ ಅದರ ಶಬ್ದ ಗ್ರಹಿಸಲು ಸಫಲರಾಗಿರುವ ನಾಸಾ, ಸೂರ್ಯನಿಂದ ಕೇಳಿ ಬಂದ ಓಂಕಾರ ಶಬ್ದ ಕಂಡು ಚಕಿತಕ್ಕೆ ಒಳಗಾಗಿದ್ದಾರೆ. ಭಾರತದ ಸಂಸ್ಕೃತಿಯಲ್ಲಿ ಓಂಕಾರ ಇದ್ದು, ಸಾವಿರಾರು ವರ್ಷಗಳ ಹಿಂದೆಯೇ ಓಂಕಾರ ಪ್ರಚಲಿತಗೊಂಡಿದೆ. ಇಂತಹ ಸಾಕಷ್ಟು ಸಾಧನೆಯ ಭಾರತವನ್ನು ಈಗಲೂ ಹಿಂದುಳಿದ ದೇಶ ಎಂದು ಹೇಳುತ್ತಿರುವುದು ವಿಪರ್ಯಾಸ ಎಂದರು.

ದೇಶಕ್ಕೆ ತಾಂತ್ರಿಕತೆ ಕೊಡುಗೆ ನೀಡಿ: ಪ್ರಸ್ತುತ ಭಾರತಕ್ಕೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಅತ್ಯವಶ್ಯ. ಜ್ಞಾನ ಯುಗವಾದ 21ನೇ ಶತಮಾನದಲ್ಲಿ ಎಂಜಿಯರಿಂಗ್‌ ವೃತ್ತಿಪರರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅವುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ತಮ್ಮ ವೃತ್ತಿ ಜೀವನ ಸಾಗಿಸಬೇಕು. ದೇಶ ಎದುರಿಸುತ್ತಿರುವ ಸವಾಲುಗಳಾದ ನೀರು, ಪರಿಸರ ಸ್ವಚ್ಛತೆ, ವಿದ್ಯುತ್‌ ಕೊರತೆ ಸೇರಿದಂತೆ ಇತರ ಸವಾಲುಗಳ ಬಗ್ಗೆಯೂ ಗಮನಿಸುವ ಮೂಲಕ ಸಮಾಜಕ್ಕೆ ಬೆಂಬಲ ನೀಡಬೇಕು. ಹೊಸ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಾ| ಯರಗಟ್ಟಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ಜೀವನದಲ್ಲಿ ಛಲ ಹೊಂದಿದ್ದರೆ ಎಲ್ಲ ಸಾಧನೆ ಮಾಡಲು ಸಾಧ್ಯ. ಇಂದಿನ ದಿನಗಳಲ್ಲಿ ತಾಂತ್ರಿಕತೆ ಸಾಕಷ್ಟು ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳೂ ಸಾಗಬೇಕು. ಇದರ ಜೊತೆಯಲ್ಲಿ ಸಮರ್ಥ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದರು.

ಪ್ರಾಂಶುಪಾಲರಾದ ಡಾ| ಎಸ್‌.ಬಿ. ವಣಕುದುರೆ ವಾರ್ಷಿಕ ವರದಿಯೊಂದಿಗೆ ಸ್ವಾಗತಿಸಿದರು. ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರ ಕುಮಾರ ಸೇರಿದಂತೆ ಡೀನ್‌ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಸಹನಾ ಪಾಟೀಲ ಪ್ರಾರ್ಥಿಸಿದರು. ಪ್ರೊ| ವಾಸುದೇವ ಪರ್ವತಿ ನಿರೂಪಿಸಿದರು. ಡಾ| ಆರ್‌.ಎಲ್. ಚಕ್ರಸಾಲಿ ಎಲ್ಲ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು. ಇಂದಿರಾ ಉಮರ್ಜಿ ಪರಿಚಯಿಸಿದರು. ಡಾ| ಕೆ.ಗೋಪಿನಾಥ ವಂದಿಸಿದರು.

ಬಲಿಷ್ಠ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ಮಾಜಿ ರಾಷ್ಟ್ರಪತಿ ಡಾ| ಅಬ್ದುಲ್ ಕಲಾಂ ಅವರು ಅನೇಕ ಕೊಡುಗೆ ನೀಡಿದ್ದರು. ಅವರ ಹಾದಿಯಲ್ಲಿರುವ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಾಂತ್ರಿಕ ಸಂಶೋಧನೆಗಳು ಇನ್ನಷ್ಟು ಬೆಂಬಲಕ್ಕೆ ನಿಲ್ಲಬೇಕಿದೆ. ಅಂದಾಗ ನಾವೆಲ್ಲ ಒಂದು ತಾಂತ್ರಿಕ ಉನ್ನತಿ ಪಡೆದ ದೇಶದಲ್ಲಿ ವಾಸಿಸುವ ಪ್ರಜೆಗಳಾಗಲು ಸಾಧ್ಯ. • ಡಾ| ಉದಯ ಯರಗಟ್ಟಿ, ನಿರ್ದೇಶಕರು, ಐಐಟಿ, ಜೈಪುರ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.