ಭಾರತ ಮಾತೆ ತಾಯಿಗೆ ಸಮಾನ


Team Udayavani, Jul 24, 2017, 12:21 PM IST

hub5.jpg

ಧಾರವಾಡ: ಭಾರತೀಯ ಸಂಸ್ಕೃತಿ ಪ್ರಕಾರ ಈ ನಾಡಿನಲ್ಲಿ ಜನಿಸಿದ ಪ್ರತಿಯೊಬ್ಬ ಮನುಷ್ಯನು ತನ್ನ ಹೆತ್ತ ತಾಯಿಯನ್ನು ಎಷ್ಟು ಗೌರವಿಸುತ್ತಾನೋ ಅದರಷ್ಟೆ ಭಾರತ ಮಾತೆಯನ್ನೂ ಗೌರವಿಸಿ ಪೂಜಿಸಬೇಕು ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. 

ಇಲ್ಲಿಯ ಚರಂತಿಮಠ ಗಾರ್ಡನ್‌ದಲ್ಲಿರುವ ಶ್ರೀ ಬನಶಂಕರಿ ಭವನದಲ್ಲಿ ಆಯೋಜಿಸಿದ್ದ ಭಾರತ ಮಾತಾ ಪೂಜೆ ಸಮಾರಂಭದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು. ಈ ನೆಲದ ಮೇಲೆ ಜನಿಸಿದ ಪ್ರತಿಯೊಬ್ಬರು ಭಾರತ ಮಾತೆಯ ಋಣದಲ್ಲಿದ್ದೇವೆ.

ಆಹಾರ, ನೀರು, ಗಾಳಿ ಸೇರಿದಂತೆ ಮನುಷ್ಯನಿಗೆ ಬದುಕಲು ಅನುಕೂಲ ಮಾಡಿಕೊಟ್ಟು ತನ್ನ ಕಷ್ಟಗಳ ಮಧ್ಯೆಯೂ  ಜನರಿಗೆ ಸುಖ ನೀಡುತ್ತಿದ್ದಾಳೆ. ಮಾತೆಗೆ ಸಹನಾ ಶಕ್ತಿ ಜಾಸ್ತಿ ಇರುತ್ತದೆ. ಹೀಗಾಗಿ ಭೂಮಿಯನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತಿದ್ದು, ಅಂತಹ ಮಾತೆಯನ್ನು ನಿತ್ಯ ನೆನೆಯಬೇಕು ಎಂದರು.

ಮೇಯರ್‌ ಡಿ.ಕೆ. ಚವ್ಹಾಣ ಮಾತನಾಡಿ, ಮಾನವರು ಇತ್ತೀಚೆಗೆ ಭೂಮಿ ತಾಯಿಗೆ ಹೆಚ್ಚು ಕಷ್ಟ ನೀಡುತ್ತಿದ್ದಾರೆ ಎನಿಸುತ್ತಿದೆ. ಸಸಿಗಳನ್ನು ನೆಡುವ  ಬದಲಾಗಿ ಮರಗಳನ್ನು ಹೆಚ್ಚು ಕಡಿಯಲಾಗುತ್ತಿದೆ. ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದರೂ ಅನೇಕ ಕಾರಣದಿಂದ ಪರಿಸರ ನಾಶದತ್ತ ಸಾಗುತ್ತಿದೆ ಎಂದರು. 

ಮಳೆ-ಬೆಳೆಗಾಗಿ ಇಂದು ನಾವು ಭೂತಾಯಿಗೆ ಮೊರೆ ಹೋಗುತ್ತಿದ್ದು, ಸಕಾಲದಲ್ಲಿ ಮಳೆ-ಬೆಳೆ ನೀರು ದೊರಕುವಂತೆ ಮಾಡಲು ಭಗವಂತನಲ್ಲಿ ಪ್ರಾರ್ಥನೆ  ಮಾಡುತ್ತಿದ್ದೇವೆ. ಭಾರತ ಮಾತೆಯನ್ನು ಪೂಜಿಸುವುದರ ಜೊತೆಗೆ ನಮ್ಮಲ್ಲಿರುವ ಮೌಲ್ಯಗಳನ್ನು ಅನುಷ್ಠಾನಗೊಳಿಸಿಕೊಳ್ಳಬೇಕು ಎಂದರು. 

ಪಾಲಿಕೆ ಸದಸ್ಯ ಶಂಕರ ಶೇಳಕೆ, ನಿರ್ಮಲ ಜವಳಿ, ಮಾಜಿ ಶಾಸಕಿ ಸೀಮಾ ಮಸೂತಿ, ಭಾರತಿ ಮಗದುಮ್‌, ನಾಗೇಶರಾವ ಕಲಬುರ್ಗಿ, ಶಿವಾನಂದ ಲೋಲೆನವರ, ವೀರೇಶ ಅಂಚಟಗೇರಿ, ಈರಣ್ಣ ಹಪ್ಪಳಿ, ಮೋಹನ ರಾಮದುರ್ಗ, ಗೀತಾ ನವಲೆ ಇದ್ದರು. ರಾಘವೇಂದ್ರ ಸ್ವಾಗತಿಸಿದರು. ರವಿಕುಮಾರ ನಿರೂಪಿಸಿದರು. ಮಂಜುನಾಥ ವಂದಿಸಿದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.