![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 26, 2020, 11:01 AM IST
ಧಾರವಾಡ: ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇರುವ ಟಾಟಾ ಮಾರ್ಕೊಪೊಲೊ ಕಂಪನಿಯನ್ನು ರವಿವಾರದಿಂದ (ಜುಲೈ 26) ಆಗಸ್ಟ್ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಕುರಿತಂತೆ ಡಿಸಿ ನಿತೇಶ್ ಪಾಟೀಲ ಅವರೊಂದಿಗೆ ಕಂಪನಿಯ ಸಿಇಓ ಅವರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು, ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ ಘಟಕದ ಚಟುವಟಿಕೆಗಳನ್ನು ಎಂಟು ದಿನಗಳ ಕಾಲ ಸ್ಥಗಿತಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಯು ಸ್ವಯಂ ಪ್ರೇರಿತರಾಗಿ ನಿರ್ಣಯಿಸಿದ್ದಾರೆ.
ಧೃತಿಗೆಡದಿರಲು ಮನವಿ:
ಕೋವಿಡ್ ಒಂದು ದುರ್ಬಲ ವೈರಾಣುವಾಗಿದೆ. ಸರಳ ಚಿಕಿತ್ಸೆ ಮೂಲಕ ಸೋಂಕು ನಿವಾರಿಸಿಕೊಳ್ಳಬಹುದಾಗಿದೆ. ಕೋವಿಡ್ ಭಯದಿಂದ ಯಾರೊಬ್ಬರೂ ಧೃತಿಗೆಡಬಾರದು, ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸೋಂಕಿತರಿಗೆ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ನಿರಂತರವಾಗಿ ದೂರವಾಣಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ, ದೂರವಾಣಿ ಸಂಪರ್ಕ ಲೈನ್ ಗಳ ಸಂಖ್ಯೆ ಇನ್ನಷ್ಟು ಹೆಚ್ಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.
ಧಾರವಾಡ ಮಾನಸಿಕ ಆರೋಗ್ಯವಿಜ್ಞಾನ ಸಂಸ್ಥೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಮತ್ತು ಆಯುಷ್ ವಿಭಾಗಗಳ ಮೂಲಕ ಮನೋ ಸ್ವಾಸ್ಥ್ಯ ನಿರ್ವಹಣೆಗೆ ವಿಡಿಯೋ ಸಂವಾದದ ಮೂಲಕ ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ, ಯೋಗಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯ ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.