ಮಳೆಗಾಲಕ್ಕೂ ಮುನ್ನ ಸಾಂಕ್ರಾಮಿಕ ರೋಗ ಭೀತಿ
Team Udayavani, Jun 8, 2019, 9:34 AM IST
ಧಾರವಾಡ: ಮಳೆಗಾಲದ ಹೊಸ್ತಿಲಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿದೆ. ಬಿಸಿಲಿನ ಹೊಡೆತಕ್ಕೆ ಕಾವೇರಿರುವ ಭೂಮಿ ಆಗಾಗ ಸುರಿಯುತ್ತಿರುವ ಮಳೆಗೆ ತಣ್ಣಗಾಗುತ್ತಿದ್ದರೂ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಇದೇ ಪ್ರಶಸ್ತ ಸಮಯವಾಗಿದೆ.
ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಚರಂಡಿ ನೀರು ಸೇರುವಿಕೆ, ಪರಿಸರದಲ್ಲಿ ಸ್ವಚ್ಛತೆ ಕೊರತೆ, ತಾಜ್ಯ ನಿರ್ವಹಣೆ ಕೊರತೆ, ಗ್ರಾಮೀಣ ಪ್ರದೇಶದಲ್ಲಿನ ಬಯಲು ಶೌಚಾಲಯ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.
ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಹಾಗೂ ಪಾಲಿಕೆ ಲೋಕಸಭಾ ಚುನಾವಣಾ ಕಾರ್ಯದಲ್ಲಿ ಮಗ್ನಗೊಂಡಿತ್ತು. ಫಾಗಿಂಗ್ ಮಾಡುವ ಕಾರ್ಯಕ್ಕೂ ಪಾಲಿಕೆ ಕೊಕ್ಕೆ ಹಾಕಿತ್ತು. ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮುಖ್ಯ ಕಾರಣವಾಗಿದ್ದು, ಈವರೆಗೂ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಸದ್ಯ ಚುನಾವಣೆ ಕಾರ್ಯ ಮುಗಿದಿದ್ದು, ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮೊದಲೇ ಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.
ನಗರದಲ್ಲಿಯೇ ಹೆಚ್ಚು: ಜೂ.7ರಂದು ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಅನ್ವಯ ಜಿಲ್ಲೆಯಲ್ಲಿ 2019ರ ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗಕ್ಕೆ 4 ಜನ ತುತ್ತಾಗಿದ್ದರೆ ಡೆಂಘೀ 7, ಚಿಕುನ್‌ಗುನ್ಯಾ 8 ಜನರಲ್ಲಿ ಪತ್ತೆ ಆಗಿದೆ. ಸೂಕ್ತ ಚಿಕಿತ್ಸೆ ಲಭಿಸಿದ ಕಾರಣ ಯಾರೂ ಮೃತಪಟ್ಟಿಲ್ಲ. ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲಿಯೇ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರತಿವರ್ಷದಂತೆ ಈ ಸಲವೂ ಕಂಡು ಬಂದಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.