ಮಾಹಿತಿ-ಭಾಷಣ-ಪ್ರಸಾದ
Team Udayavani, Oct 24, 2017, 12:52 PM IST
ಧಾರವಾಡ: ಸೌಲಭ್ಯಗಳ ವಿತರಣಾ ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡು ಕಾಂಗ್ರೆಸ್ ಸರ್ಕಾರದ ಸಾಧನೆಗಳಿಗೆ ಜೈಕಾರ ಹಾಕಿದರು. ಒಂದರ್ಥದಲ್ಲಿ ಚುನಾವಣೆಗೆ ಸಿದ್ಧತಾ ಸಮಾವೇಶದಂತೆ ಕಂಡುಬಂತು. ಈ ಜನಸ್ತೋಮಕ್ಕೆ ಅಗತ್ಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.
ಏಳು ಜಿಲ್ಲೆಗಳಿಂದ 35 ಸಾವಿರ ಫಲಾನುಭವಿಗಳನ್ನು ಕರೆ ತರಲಾಗಿತ್ತು. ಆಯಾ ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳಿಗೆ ತಮ್ಮ ಕ್ಷೇತ್ರದಿಂದ ಜನ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರುವಂತೆ ಹೇಳಿದ್ದರಿಂದ ಅವರ ಬ್ಯಾನರ್ ಅಡಿಯ ವಾಹನಗಳಲ್ಲೂ ಜನರನ್ನು ಕರೆ ತರಲಾಗಿತ್ತು.
ಮಾಹಿತಿ ಮಳಿಗೆಗಳು: ಸರಕಾರದ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗಳು ಜನರನ್ನು ಸೆಳೆದವು. ಮುಖ್ಯ ವೇದಿಕೆಯ ಬಳಿ ನಿರ್ಮಿಸಲಾಗಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಪಣೆ ಮಾಡಿದರು.
ಬಳಿಕ ಏಳು ಜಿಲ್ಲೆಗಳ ಸಾಧನೆ ಬಿಂಬಿಸುವ ಮಾಹಿತಿ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಹಾವೇರಿಯ ಕುರಿ ಉಣ್ಣೆಯಿಂದ ತಯಾರಿಸಿದ ರಜಾಯಿಗಳು, ತುಂಗಾ ಮೇಲ್ದಂಡೆ ಯೋಜನೆಯ ನೀರಾವರಿ ಯೋಜನೆಯ ಪ್ರತಿಕೃತಿ ವೀಕ್ಷಿಸಿ ಮಾಹಿತಿ ಪಡೆದರು. ಸಿಆರ್‌ಸಿ ಯೋಜನೆಯಡಿ ಪೌಷ್ಟಿಕ ಬಿಸ್ಕಿಟ್‌ಗಳನ್ನು ತಯಾರಿಸಿ ವಿತರಿಸುವ ಮಾಹಿತಿ ಕೇಳಿದ ಸಿದ್ದರಾಮಯ್ಯ, ಸಚಿವ ಆರ್.ವಿ.ದೇಶಪಾಂಡೆ ಅವರಿಂದ ಬಿಸ್ಕಿಟ್ ಪಡೆದು ಸವಿದರು.
ಬೃಹತ್ ಎಲ್‌ಇಡಿ ಪರದೆ ಬಳಸಿ ಸರ್ಕಾರದ ಯೋಜನೆಗಳ ಬಗ್ಗೆ ತಯಾರಿಸಿದ ಸಾಕ್ಷéಚಿತ್ರಗಳ ಪ್ರದರ್ಶನ ನಡೆಯಿತು. ಕೃಷಿ ವಿವಿಗೆ ತೆರಳುವ ಮುಖ್ಯ ಮಾರ್ಗದಲ್ಲಿ ಧಾರವಾಡ ಜಿಲ್ಲೆಯ ಹತ್ತಕ್ಕೂ ಹೆಚ್ಚು ಇಲಾಖೆಗಳು ಸ್ಥಾಪಿಸಿದ್ದ ಮಳಿಗೆಗಳಲ್ಲಿ ಜನರಿಗೆ ಯೋಜನೆಗಳ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಅಚ್ಚುಕಟ್ಟು ವ್ಯವಸ್ಥೆ: ಎರಡು ಕಡೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಒಂದೆಡೆ 101 ಹಾಗೂ ಮತ್ತೂಂದೆಡೆ 70 ಕೌಂಟರ್‌ಗಳ ಪೈಕಿ ಒಟ್ಟು 150 ಕೌಂಟರ್‌ಗಳನ್ನು ಬೆಳಗ್ಗೆಯಿಂದಲೇ ತೆರೆಯಲಾಗಿತ್ತು. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಜನದಟ್ಟಣೆ ತಡೆಯಲು ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿದ್ದು ಕಂಡು ಬಂತು. ಕೌಂಟರ್ ಗಳ ಪಕ್ಕದಲ್ಲಿಯೇ ಅಡುಗೆ ತಯಾರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಜೊತೆಗೆ ಅಗತ್ಯ ಸ್ವತ್ಛತಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಅಲ್ಲಲ್ಲಿ ಸಿದ್ಧ ಶೌಚಾಲಯಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಪಾರ್ಕಿಂಗ್ ವ್ಯವಸ್ಥೆ: ಸಾರಿಗೆ ಹಾಗೂ ಖಾಸಗಿ ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಕಲ್ಲಿಸಲಾಗಿತ್ತು.
ಸಿಎಂ ಆಗಮನ ಹಾಗೂ ನಿರ್ಗಮನ ವೇಳೆ ಸಂಚಾರದಲ್ಲಿ ಅಸ್ತವ್ಯಸ್ತ ಆಗಿದ್ದು ಬಿಟ್ಟರೆ ಉಳಿದಂತೆ ಅಚ್ಚುಕಟ್ಟಾಗಿತ್ತು. ಕೃಷಿ ವಿವಿಯಿಂದ ಹಿಡಿದು ಬೆಳಗಾವಿ ಹೋಗುವ ಬೈಪಾಸ್‌ವರೆಗೂ ಸೇರಿದಂತೆ ಟೋಲ್‌ಗೇಟ್ ಬಳಿಯ ಜಾಗದಲ್ಲೂ ಸಾರಿಗೆ ಬಸ್‌ಗಳನ್ನು ಪಾರ್ಕಿಂಗ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.