ಕವಿಸಂನಲ್ಲಿ ಪರಿಶಿಷ್ಟರಿಗೆ ಅನ್ಯಾಯ ಆರೋಪ

ನೇಮಕಾತಿ-ಪದೋನ್ನತಿ ತಾರತಮ್ಯ

Team Udayavani, Sep 21, 2019, 9:25 AM IST

huballi-tdy-1

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ದೀಪಾ ಚೋಳನ್‌ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ 3ನೇ ತ್ತೈಮಾಸಿಕ ಸಭೆ ಶುಕ್ರವಾರ ಜರುಗಿತು.

ಕರ್ನಾಟಕ ವಿದ್ಯಾವರ್ಧಕ ಸಂಘವು 1977-78ನೇ ಸಾಲಿನಿಂದ ಸರ್ಕಾರದ ಧನಸಹಾಯ ಪಡೆದು ಕಾರ್ಯ ನಿರ್ವಹಿಸುತ್ತಿದೆ. ಆದರೆ ಈವರೆಗೂ ಸಂಘದ ನೇಮಕಾತಿ, ಪದೋನ್ನತಿ, ಮಳಿಗೆಗಳ ಹಂಚಿಕೆ ಹಾಗೂ ಕಾರ್ಯಕಾರಿ ಸಮಿತಿಯಲ್ಲಿ ಪದಾಧಿಕಾರಿಗಳ ಹುದ್ದೆಗಳನ್ನು ನಿಯಮಾನುಸಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ನೀಡಿಲ್ಲ ಎಂದು ಸಮಿತಿಯ ಸದಸ್ಯರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ದೀಪಾ ಚೋಳನ್‌, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಕೋರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಸ್ಮಶಾನಭೂಮಿ ಗುರುತಿಗೆ ಕ್ರಮ: ಜಿಲ್ಲೆಯಲ್ಲಿ ಬೇಡ ಜಂಗಮ ಹೆಸರಿನಲ್ಲಿ ಕಳೆದ 5 ವರ್ಷಗಳಲ್ಲಿ ಒಟ್ಟು 7 ಪರಿಶಿಷ್ಟ ಜಾತಿ ಪ್ರಮಾಣಪತ್ರಗಳನ್ನು ಮಾತ್ರ ವಿತರಿಸಲಾಗಿದೆ. ಅವುಗಳ ನೈಜತೆ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಡಿಸಿ ದೀಪಾ, ಸಮಾಜ ಕಲ್ಯಾಣ ಇಲಾಖೆಯ ಹೊಸ ಸುತ್ತೋಲೆ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕವಾಗಿ ಸ್ಮಶಾನ ಭೂಮಿ ಖರೀದಿಸಬಾರದು. ಸಮಾಜದ ಎಲ್ಲ ವರ್ಗಗಳಿಗೂ ಒಂದೇ ಕಡೆ ಸ್ಮಶಾನ ಭೂಮಿ ಇರಬೇಕು ಎಂದು ನಿರ್ದೇಶನ ನೀಡಿದೆ. ಸ್ಮಶಾನ ಭೂಮಿ ಕೊರತೆ ಇರುವ ಕಡೆ ಭೂಮಿ ಗುರುತಿಸಲು ಸಂಬಂ ಧಿಸಿದ ತಹಶೀಲ್ದಾರ್‌ ಗೆ ಸೂಚಿಸಲಾಗಿದೆ. ಸರ್ಕಾರಿ ಭೂಮಿ ಲಭ್ಯವಿರದಿದ್ದರೆ ಭೂಮಿ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಸ್ಟೆಲ್‌ಗೆ ನಿವೇಶನ ಹಂಚಿಕೆ: ಧಾರವಾಡಕ್ಕೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಎಸ್‌ಸಿ, ಎಸ್‌ಟಿ ಮಾತ್ರವಲ್ಲದೇ ಎಲ್ಲ ಜಾತಿವರ್ಗಗಳ ಮಕ್ಕಳು ವಿದ್ಯಾಭ್ಯಾಸಕ್ಕೆ ಬರುವುದು ಸಾಮಾನ್ಯ. ಎಲ್ಲರಿಗೂ ಹಾಸ್ಟೆಲ್‌ ಒದಗಿಸಿಕೊಡುವುದಕ್ಕೆ ತೊಂದರೆ ಆಗುತ್ತಿರುವ ವಿಷಯವನ್ನು ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ.  ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ ನಿರ್ಮಾಣಕ್ಕೆ  ಬೇಡಿಕೆಯನುಸಾರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳು ಹಾಗೂ ಅವಳಿ ನಗರ ವ್ಯಾಪ್ತಿಯ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆಗಳು ನಿರಂತರವಾಗಿ ನಡೆಯುತ್ತಿವೆ. ಸಭೆ ಬಗ್ಗೆ ಮುಂಚಿತವಾಗಿ ಸ್ಥಳೀಯವಾಗಿ ಇರುವ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿ ಕಾಲಮಿತಿಯೊಳಗೆ ಅನುಸರಣಾ ವರದಿ ನೀಡಬೇಕು ಎಂದು ದೀಪಾ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ನವೀನ ಶಿಂತ್ರೆ ಸಭೆ ನಿರೂಪಿಸಿದರು. ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಎಸಿಪಿ ಎಂ.ಎನ್‌. ರುದ್ರಪ್ಪ, ಸಮಿತಿ ಸದಸ್ಯರಾದ ಅಶೋಕ ದೊಡ್ಡಮನಿ, ಇಂದುಮತಿ ಶಿರಗಾಂವ, ಅರ್ಜುನ ವಡ್ಡರ, ರಮೇಶ ಹುಲಕೊಪ್ಪ, ಸಿದ್ಧಲಿಂಗಪ್ಪ ಕರೆಮ್ಮನವರ, ಕಾಡಯ್ಯ ಹೆಬ್ಬಳ್ಳಿಮಠ, ಕಸ್ತೂರಿ ಹಳ್ಳದ, ವಾರ್ತಾ ಇಲಾಖೆ ಹಿರಿಯ

ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಕವಿವಿ ಸಹಾಯಕ ಪ್ರಾಧ್ಯಾಪಕ ಡಾ| ಸುಭಾಷ ನಾಟೀಕಾರ ಇದ್ದರು.

ಟಾಪ್ ನ್ಯೂಸ್

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.