ಸರಕಾರ-ಆರೋಗ್ಯ ಸಚಿವರ ಪ್ರತಿಷ್ಠೆಗೆ ಅಮಾಯಕರು ಬಲಿ


Team Udayavani, Nov 17, 2017, 12:05 PM IST

h3-jagadeesh.jpg

ಹುಬ್ಬಳ್ಳಿ: ಸರಕಾರ ಹಾಗೂ ಆರೋಗ್ಯ ಸಚಿವರ ಪ್ರತಿಷ್ಠೆ ಮತ್ತು ಬೇಜವಾಬ್ದಾರಿಯಿಂದ ರಾಜ್ಯದಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಪ್ರತಿಭಟನಾನಿರತ ವೈದ್ಯರನ್ನು ಕರೆದು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ಮಂಡನೆ ವಿಚಾರದಲ್ಲಿ ಆರೋಗ್ಯ ಸಚಿವರು ಹಾಗೂ ಸರಕಾರ  ಯಾವ ಕಾರಣಕ್ಕಾಗಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಖಾಸಗಿ ವೈದ್ಯರ ಮುಷ್ಕರದಿಂದ ತುರ್ತು ಸೇವೆ ದೊರೆಯದೆ ಅಮಾಯಕರು ಬಲಿಯಾಗುತ್ತಿದ್ದಾರೆ.

ವೈದ್ಯರ ಮುಷ್ಕರ ಮುಂದುವರಿದರೆ ಇನ್ನಷ್ಟು ಸಾವು-ನೋವುಗಳ ಸಂಖ್ಯೆ ಹೆಚ್ಚಲಿದೆ. ಕೂಡಲೇ ಮುಖ್ಯಮಂತ್ರಿಗಳು ವೈದ್ಯರನ್ನು ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಬೇಕಾಗಿದೆ. ಕೆಲ ಕಾರ್ಪೋರೇಟ್‌ ಆಸ್ಪತ್ರೆಗಳು ಜನ ಸಾಮಾನ್ಯರನ್ನು ಸುಲಿಯುವ ಕೆಲಸ ಮಾಡುತ್ತಿವೆ.

ಒಂದಿಷ್ಟು ವೈದ್ಯರು ಮಾಡುವ ತಪ್ಪಿನಿಂದ ಇಡೀ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಶೇ.80ರಷ್ಟು ಖಾಸಗಿ ವೈದ್ಯರ ಮೇಲೆ ಅವಲಂಬನೆಯಾಗಿರುವುದರ ಪರಿಣಾಮ ವೈದ್ಯರ ಮುಷ್ಕರದಿಂದ ತುರ್ತು ಸೇವೆಗೆ ಪರದಾಡುವಂತಾಗಿದೆ.

ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಾರೆ ಎಂಬುವುದು ಸರಕಾರಕ್ಕೆ ಮುಂಚಿತವಾಗಿಯೇ ಗೊತ್ತಿತ್ತು. ಆದರೆ ಪರ್ಯಾಯ ವ್ಯವಸ್ಥೆ ಕೈಗೊಳ್ಳುವಲ್ಲಿ ಸರಕಾರ ವಿಫ‌ಲವಾಗಿದೆ. ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸದೆ ಏಕಾಏಕಿ ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವುದು ಬೇಜವಾಬ್ದಾರಿ ಆಡಳಿತಕ್ಕೆ ಉದಾಹರಣೆ. ಈ ಮಸೂದೆ ಮಂಡನೆಯಾಗುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಚಕಾರ ಎತ್ತುತ್ತಿಲ್ಲ.

ಮಸೂದೆ ಮಂಡನೆಯಾಗುವುದರಿಂದ ದೊಡ್ಡ ಬದಲಾವಣೆ ಆಗುತ್ತದೆ ಎಂಬ ನಂಬಿಕೆ ನನಗಿಲ್ಲ. ಒಬ್ಬ ವ್ಯಕ್ತಿಗಾಗಿ ಎಲ್ಲರೂ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಡಳಿತ ಪಕ್ಷದ ಶಾಸಕರು ನಮ್ಮ ಮುಂದೆ ನೋವು ತೋಡಿಕೊಂಡಿದ್ದಾರೆ. ಕೂಡಲೇ ಸರಕಾರ ಪ್ರತಿಷ್ಠೆಯನ್ನು ಬಿಟ್ಟು ರಾಜ್ಯ ಜನತೆಯ ಹಿತದೃಷ್ಟಿಯಿಂದ ಪ್ರತಿಭಟನಾನಿರತ ವೈದ್ಯರನ್ನು ಕರೆದು ಚರ್ಚೆ ಮಾಡಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.