ಅಕಾಡೆಮಿ ಕ್ಯಾಂಪಸ್‌ ಮೂಲನಕ್ಷೆ ಬದಲು


Team Udayavani, Feb 10, 2020, 10:58 AM IST

BNG-TDY-2

ಧಾರವಾಡ: ಜಾಗತಿಕ ಮಟ್ಟದ ಉನ್ನತ ಶಿಕ್ಷಣವನ್ನು ಮನಮುಟ್ಟುವಂತೆ ಬೋಧನೆ ಮಾಡುವ ಮತ್ತು ಪ್ರಾಧ್ಯಾಪಕರಿಗೆ ಬೋಧನಾ ತರಬೇತಿ, ಆಡಳಿತ ನಡೆಸುವ ಪ್ರಾಂಶುಪಾಲರಿಗೆ ಆಡಳಿತ ತರಬೇತಿ ಸೇರಿದಂತೆ ಒಟ್ಟಾರೆ ಉನ್ನತ ಶಿಕ್ಷಣವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೇರಿಸಲು ಸ್ಥಾಪನೆಗೊಂಡಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನೂತನ ಕಟ್ಟಡ ಕಾರ್ಯ ಒಂದು ವರ್ಷ ವಿಳಂಬಗೊಂಡಿದೆ.

ಸತತ ಐದು ವರ್ಷಗಳಿಂದ ನನೆಗುದಿಗೆ ಬಿದ್ದು ಕೊನೆಗೂ ಸ್ವಂತ ಕಟ್ಟಡ ಭಾಗ್ಯ ಪಡೆದುಕೊಂಡಿರುವ ಉನ್ನತ ಶಿಕ್ಷಣ ಅಕಾಡೆಮಿಯ ಸುಂದರ ಕಟ್ಟಡ ಕರ್ನಾಟಕ ವಿಶ್ವವಿದ್ಯಾಲಯ ಆವರಣದ ಹಳಿಯಾಳರಸ್ತೆ ಸಮೀಪ 27 ಎಕರೆ ಜಾಗದಲ್ಲಿ ತಲೆ ಎತ್ತುತ್ತಿದೆ. ಆದರೆ ಮೂಲ ನಕ್ಷೆಯನ್ನು ತಿದ್ದುಪಡಿ ಮಾಡಿದ್ದರಿಂದ ಮತ್ತು ಕಳೆದ ವರ್ಷ ತೀವ್ರ ಮಳೆಗಾಲ ಹಿಡಿದಿದ್ದರಿಂದ ಕ್ಯಾಂಪಸ್‌ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ಸಾಗಿದ್ದು ಪೂರ್ಣಗೊಳ್ಳಲು ಇನ್ನೂ ಒಂದು ವರ್ಷ ಕಾಯಬೇಕಿದೆ.

ಪೂರ್ಣಗೊಂಡ ನಂತರ ಕವಿವಿ ಆವರಣದಲ್ಲಿ ನಿರ್ಮಾಣವಾಗಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರ, ಗಣಿತ ಸಂಶೋಧನಾ ಕೇಂದ್ರ ಮತ್ತು ಮಹನೀಯರ ಪೀಠಗಳಂತೆ ಕಾರ್ಯನಿರ್ವಹಿಸುವ ಪ್ರತ್ಯೇಕ ಮತ್ತು ಸ್ವಾಯತ್ತ ಸಂಸ್ಥೆಗಳ ಪಟ್ಟಿಗೆ ಉನ್ನತ ಶಿಕ್ಷಣ ಅಕಾಡೆಮಿಯೂ ಸೇರ್ಪಡೆಯಾಗಲಿದೆ.

2015ರಲ್ಲಿ ಆರಂಭಗೊಂಡ ಉನ್ನತ ಶಿಕ್ಷಣ ಅಕಾಡೆಮಿ ಈವರೆಗೂ ಸಾವಿರಾರು ಬೋಧಕರಿಗೆ ಮತ್ತು ಪ್ರಾಧ್ಯಾಪಕರಿಗೆ ಬೋಧನಾ ತರಬೇತಿ, ಆಡಳಿತ ಕೌಶಲ್ಯ, ಕಲಿಕಾ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದಕ್ಕೆ ಪೂರಕವಾದ ಬೌದ್ಧಿಕ ಕೌಶಲ್ಯಾಭಿವೃದ್ಧಿ ನೀಡಲು ಪ್ರಯತ್ನಿಸುತ್ತಿದೆ. ಸದ್ಯಕ್ಕೆ ಕವಿವಿಯ ಸುವರ್ಣ ಮಹೋತ್ಸವ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿ ನೂತನ ಕಟ್ಟಡ ಬರೊಬ್ಬರಿ 90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಮೈಸೂರು ಮತ್ತು ಪಾಶ್ಚಿಮಾತ್ಯ ಶಿಕ್ಷಣ ಸಂಸ್ಥೆಗಳ ಮಾದರಿಯ ಸುಂದರ ಕಟ್ಟಡ ಇಲ್ಲಿ ತಲೆ ಎತ್ತಲಿದ್ದು, ಶಿಕ್ಷಣ ಕಾಶಿ ಧಾರವಾಡಕ್ಕೆ ಮತ್ತೂಂದು ಶಿಕ್ಷಣ ಸಂಸ್ಥೆಯ ಮೆರಗಿನ ಗರಿ ಸೇರಿಕೊಂಡಂತಾಗಿದೆ.

ಹಸಿರು ಕ್ಯಾಂಪಸ್‌: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ದೇಶದಲ್ಲಿಯೇ ಮೊದಲ ಹಸಿರು ಐಐಟಿ ಎಂಬ ಹೆಗ್ಗಳಿಕೆ ಪಡೆದುಕೊಂಡು ನಿರ್ಮಾಣವಾಗುತ್ತಿದೆ. ಅದೇ ಮಾದರಿಯಲ್ಲಿಯೇ ಉನ್ನತ ಶಿಕ್ಷಣ ಅಕಾಡೆಮಿಯ ಕ್ಯಾಂಪಸ್‌ ಕೂಡ ಪ್ರಾಕೃತಿಕವಾಗಿ ಉತ್ತಮ ಸ್ಥಳದಲ್ಲಿದ್ದು, ಹಸಿರು ಕ್ಯಾಂಪಸ್‌ ಮತ್ತು ಮಳೆನೀರು ಸಂಗ್ರಹಣೆಗೆ ಹೇಳಿ ಮಾಡಿಸಿದಂತಿದೆ. ಮೂಲನಕ್ಷೆಯಲ್ಲಿ ಹಸಿರೀಕರಣಕ್ಕೆ ಒತ್ತು ನೀಡಲಾಗಿದೆ.

ಸದ್ಯಕ್ಕೆ ಇಲ್ಲಿ ಉನ್ನತ ಶಿಕ್ಷಣ ಅಕಾಡೆಮಿ ಪ್ರಧಾನ ಕಟ್ಟಡ, ಹೈಟೆಕ್‌ ಬೋಧನಾ ಕೊಠಡಿಗಳು, ಕಾರ್ಯಕ್ರಮ ಸಭಾಂಗಣ, ಕಂಪ್ಯೂಟರ್‌ ಹೈಟೆಕ್‌ ಲ್ಯಾಬೋರೆಟರಿ, ಸಿಬ್ಬಂದಿಗೆ ವಸತಿ ನಿಲಯಗಳು, ಕ್ರೀಡಾ ಸಮುಚ್ಛಯ, ಯೋಗ ಮತ್ತು ಜಿಮ್‌ ಹಾಲ್‌ ಸೇರಿದಂತೆ ಸುಸಜ್ಜಿತವಾದ ಪ್ರತ್ಯೇಕವಾಗಿ ಮತ್ತು ಸ್ವತಂತ್ರವಾಗಿ ಅಕಾಡೆಮಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಈವರೆಗೂ ಅಕಾಡೆಮಿಯು ಧಾರವಾಡ ಮಾತ್ರವಲ್ಲ, ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಕೂಡ ಬೋಧನಾ ಕೌಶಲ್ಯ ಮತ್ತು ಸಂಶೋಧನೆಗೆ ಅಗತ್ಯವಾದ ಮಾಹಿತಿ ಮತ್ತು ತರಬೇತಿಗಳನ್ನು ನಡೆಸಿಕೊಂಡು ಬಂದಿದೆ.

ಒಂದಿಷ್ಟು ವಿಳಂಬ: ಅಕಾಡೆಮಿಯ ಒಂದಿಷ್ಟು ಕಟ್ಟಡಗಳ ನಿರ್ಮಾಣ ಕಾರ್ಯ ಮುಗಿಯುವ ಹಂತದಲ್ಲಿದ್ದರೆ, ಇನ್ನಷ್ಟು ಕಟ್ಟಡಗಳ ನಿರ್ಮಾಣ ಕಾರ್ಯ ಇನ್ನೂ ಒಂದು ವರ್ಷ ವಿಳಂಬವಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಮೊದಲ ಹಂತದಲ್ಲಿ ವಿದ್ಯಾರ್ಥಿ ನಿಲಯ ಕಟ್ಟಡ ಪೂರ್ಣಗೊಂಡು ಇದೀಗ ಬಣ್ಣ ಬಳೆಯಲಾಗುತ್ತಿದೆ. ನಿರ್ಮಾಣ ಕಂಪನಿಗೆ ಗುತ್ತಿಗೆ ನೀಡುವ ಸಂದರ್ಭದಲ್ಲಿ 18 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಇದೀಗ 18 ತಿಂಗಳು ಮುಗಿಯುತ್ತ ಬಂದರೂ ಅಕಾಡೆಮಿ ಕ್ಯಾಂಪಸ್‌ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ.

ಒಂದೂವರೇ ವರ್ಷದಲ್ಲಿ ಅಕಾಡೆಮಿಯ ನಿರ್ಮಾಣ ಕಾರ್ಯ ಮುಗಿಯಬೇಕಿತ್ತು. ಈಗ ಶೇ.50 ರಷ್ಟು ಕೆಲಸ ಮುಗಿದಿವೆ. ಆದರೆ ಆರಂಭದಲ್ಲಿಯೇ ಅಕಾಡೆಮಿಯ ಮೂಲನಕ್ಷೆ ಬದಲಿಸಿ ಹೊಸ ನಕ್ಷೆ ಸಿದ್ದಗೊಳಿಸಬೇಕಾಯಿತು. ಕಳೆದ ವರ್ಷ ತೀವ್ರ ಮಳೆಗಾಲದಿಂದ ನಿರ್ಮಾಣ ಕಾರ್ಯ ವಿಳಂಬವಾಯಿತು. ಹೀಗಾಗಿ ಇನ್ನು ಒಂದು ವರ್ಷದಲ್ಲಿ ಅಕಾಡೆಮಿ ಪರಿಪೂರ್ಣ ಕ್ಯಾಂಪಸ್‌ ಹೊಂದಲಿದೆ. ಡಾ| ಎಸ್‌.ಎಂ. ಶಿವಪ್ರಸಾದ್‌, ನಿರ್ದೇಶಕರು,ಉನ್ನತ ಶಿಕ್ಷಣ ಅಕಾಡೆಮಿ

 

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.