ಮುಂದಿನ ಪೀಳಿಗೆಗೆ ಸಾಹಿತ್ಯದ ಅಭಿರುಚಿ ಬೆಳೆಸಿ


Team Udayavani, Mar 27, 2017, 1:25 PM IST

hub1.jpg

ಧಾರವಾಡ: ಸಾಹಿತ್ಯ ಸಮ್ಮೇಳನಗಳಲ್ಲಿ ಹಳೇ ಸಾಹಿತಿಗಳು ತೌಡು ಕುಟ್ಟುವುದನ್ನು ನಿಲ್ಲಿಸಿ ಯುವ ಪೀಳಿಗೆಗೆ ಅವಕಾಶ ಕಲ್ಪಿಸಬೇಕು. ಮುಂದಿನ ಪೀಳಿಗೆಗೆ ಸಾಹಿತ್ಯದ ಅಭಿರುಚಿ ಬೆಳೆಸಬೇಕು ಎಂದು ಡಾ|ಮಾಲತಿ ಪಟ್ಟಣಶೆಟ್ಟಿ ಹೇಳಿದರು. ನಗರದಲ್ಲಿ ನಡೆದಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ ಮಾಡಿದರು.

ಹೊಸ ಪೀಳಿಗೆ ಸಾಹಿತಿಗಳನ್ನು ತಯಾರು ಮಾಡುವ ಜವಾಬ್ದಾರಿ ಎಲ್ಲ ಹಿರಿಯ ಸಾಹಿತಿಗಳ ಮೇಲಿದೆ. ಸಾಹಿತ್ಯ ಸಮ್ಮೇಳನಗಳಲ್ಲಿ ಯುವಕರಿಗೆ ಪ್ರಾಧಾನ್ಯತೆ ಸಿಗಬೇಕು ಎಂದರು. ಸಾಹಿತ್ಯ ಕೃಷಿಗೆ ಮುಂದಿನ ಪೀಳಿಗೆಯವರು ಸಿದ್ಧರಾಗಬೇಕು. ಸಮ್ಮೇಳನದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ದಿಸೆಯಲ್ಲಿ ಸಾಹಿತ್ಯ ಸಮ್ಮೇಳನದ ರೂಪರೇಷೆ ಬದಲಾಗಬೇಕು.

ಸ್ವರೂಪದಲ್ಲಿ ಬದಲಾವಣೆಯಾದಾಗ ಮಾತ್ರ ಸಮ್ಮೇಳನ ಅರ್ಥ ಪೂರ್ಣವಾಗಲು ಸಾಧ್ಯ. ವಿದ್ಯಾರ್ಥಿಗಳನ್ನು, ಯುವಕರನ್ನು ಒಳಗೊಳ್ಳುವ ಕಾರ್ಯಕ್ರಮ ರೂಪಿಸಬೇಕು. ಯುವ ಸಮುದಾಯ ಸಾಹಿತ್ಯ ಸಮ್ಮೇಳನದಿಂದ ಯಾಕೆ ದೂರ ಉಳಿದಿದ್ದಾರೆ ಎಂಬ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಿದೆ ಎಂದರು. ವಿದ್ಯಾರ್ಥಿ ಸಮುದಾಯಕ್ಕಾಗಿ ವಿಶೇಷ ಗೋಷ್ಠಿ, ಸಂವಾದ ಆಯೋಜಿಸಬೇಕು. 

ಜ್ವಲಂತ ಸಮಸ್ಯೆಗಳ ಕುರಿತು ಸಮ್ಮೇಳನದ ಸರ್ವಾಧ್ಯಕ್ಷರೊಂದಿಗೆ ಸಂವಾದ ನಡೆಸುವ ಅವಕಾಶ ಸಿಗಬೇಕು. ಸಭಿಕರು ವೇದಿಕೆಗೆ ಕರೆತರುವ ಕ್ರಮ ಜಾರಿಯಾಗಬೇಕು. ಹಿರಿಯ ಸಾಹಿತಿಗಳು ಎದುರಿಗೆ ಕುಳಿತು ಕೇಳುವಂತಾಗಬೇಕು. ಸಮ್ಮೇಳನದಲ್ಲಿ ಇನ್ನಷ್ಟು ಪುಸ್ತಕ ಮಳಿಗೆಗಳಿಗೆ ಆದ್ಯತೆ ಕೊಡಬೇಕು. ಸಮಾಜದಲ್ಲಿ ಅನ್ಯಾಯವಾದರೆ ಸಾಹಿತಿಗಳಿಂದ ಅನ್ಯಾಯದ ವಿರುದ್ಧ ಧ್ವನಿ ಬರಬೇಕು ಎಂದರು.

ಡಾ|ಸೋಮಶೇಖರ ಇಮ್ರಾಪುರ ಮಾತನಾಡಿ, ಕನ್ನಡ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕೆ ಆದ್ಯತೆ ನೀಡುವುದು ಅವಶ್ಯ. ಸಮ್ಮೇಳನಗಳಲ್ಲಿ ಕನ್ನಡ, ಕನ್ನಡಿಗರು ಎದುರಿಸುವ ಸಮಸ್ಯೆಗಳ ಬಗ್ಗೆ ಚರ್ಚಿಸುವ ವೇದಿಕೆ ಗಳಾಗಬೇಕು. ಕನ್ನಡಿಗರಿಗೆ ಕನ್ನಡದ ಬಗ್ಗೆ ಅಭಿಮಾನ ಕಡಿಮೆಯಾಗದಂತೆ, ಕನ್ನಡ ಸಾಹಿತ್ಯದ ಬಗ್ಗೆ ಒಲವು ಹೆಚ್ಚುವಂತೆ ಮಾಡಬೇಕಿದೆ. ಸಂಸ್ಕೃತಿ ಉಳಿಸುವ ಕೆಲಸವಾಗಬೇಕಿದೆ. ಅದು ಸಮಷ್ಟಿಯಾಗಿ ಬೆಳೆಯಬೇಕಿದೆ. 

ಸಂಸ್ಕೃತಿಯಲ್ಲಿರುವ ಒಳ್ಳೆಯ ಸಂಗತಿಗಳನ್ನು ನಾವು ಬಳಸಿಕೊಳ್ಳುವುದು ಮುಖ್ಯ ಎಂದರು. ಸರ್ವಾಧ್ಯಕ್ಷ ವಿ.ಸಿ.ಐರಸಂಗರ ಪುತ್ರಿ ಡಾ|ರತ್ನಾ ಐರಸಂಗ ಅವರು ತಂದೆ ಬರೆದ ಕವನ ವಾಚಿಸಿದರು. ಮೋಹನ ನಾಗಮ್ಮನವರ ಸ್ವಾಗತಿಸಿದರು. ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ|ಲಿಂಗರಾಜ ಅಂಗಡಿ, ಎಂ.ಡಿ.ವಕ್ಕುಂದ, ಎ.ಬಿ.ಉಪ್ಪಿನ, ಶರಣು ಗೋಗೇರಿ, ಮಂಗಲಾ ಮೆಟಗುಡ್ಡ ವೇದಿಕೆ ಮೇಲಿದ್ದರು.  

ಟಾಪ್ ನ್ಯೂಸ್

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.