ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆ: ಸಿಎಂಗೆ ಹೊರಟ್ಟಿ ಪತ್ರ
Team Udayavani, Aug 11, 2017, 12:31 PM IST
ಹುಬ್ಬಳ್ಳಿ: ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಸರಕಾರ ಆ.13ರೊಳಗೆ ಮಾತುಕತೆಗೆ ಮುಂದಾಗದಿದ್ದಲ್ಲಿ, ಆ.21ರಿಂದ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕರ ಸಮಸ್ಯೆ ಕುರಿತು ಹಲವಾರು ಬಾರಿ ಹೋರಾಟ ಮಾಡಲಾಗಿದೆ ಹಾಗೂ ಸದನದೊಳಗೆ ಮತ್ತು ಹೊರಗೆ ಚರ್ಚಿಸುವ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರೂ ಸರಕಾರದಿಂದ ಸಕಾರಾತ್ಮಕ ಉತ್ತರ ಬಂದಿಲ್ಲ.
ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಸೇರಿ 20ಕ್ಕೂ ಅಧಿಕ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು 2016ರ ಅಕ್ಟೋಬರ್ 24ರಂದು ರೆದು ಮನವಿ ಮಾಡಲಾಗಿತ್ತು. ನಂತರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲೂ ಮನವಿ ಸಲ್ಲಿಸಿದಾಗ ಒಕ್ಕೂಟದ ಪದಾಧಿಕಾರಿಗಳನ್ನು ಕರೆದು ಚರ್ಚಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿದ್ದೇವು.
ಆದರೆ ತಮ್ಮ ಭರವಸೆ ಭರವಸೆಯಾಗಿಯೇ ಉಳಿಯಿತೆ ಹೊರತು ಕಿಂಚಿತ್ತು ಪ್ರಗತಿ ಕಂಡಿಲ್ಲ. ಈ ಬಗ್ಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವರಿಗೂ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದ ಜೀವನಾಡಿಗಳಾಗಿದ್ದು, ಅಕ್ಷರ ದಾಸೋಹದ ಜೊತೆಗೆ ಅನ್ನದಾಸೋಹ ಕೈಗೊಂಡಿರುವ ಮಠ-ಮಾನ್ಯಗಳು,
ಶಿಕ್ಷಣ ಸಂಸ್ಥೆಗಳ ಕುರಿತು ಸರಕಾರದ ಧೋರಣೆ, ಅಧಿಕಾರಗಳ ಅಸಡ್ಡೆ ಮನೋಭಾವ ಸರ್ವತಾ ಸಮರ್ಥನಿಯವಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ಆ.13ರೊಳಗಾಗಿ ಒಕ್ಕೂಟದ ಮನವಿಗೆ ಸ್ಪಂದಿಸಿ, ಪದಾಧಿಕಾರಿಗಳೊಂದಿಗೆ ಮಾತುಕತೆಗೆ ಮುಂದಾಗದಿದ್ದಲ್ಲಿ ಆ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ನಿಶ್ಚಿತ ಎಂಬುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ.
ಜೊತೆಗೆ ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುವುದರ ಮೂಲಕ ಪ್ರತಿಭಟಿಸಲು ನಿಶ್ಚಯಿಸಲಾಗಿದೆ. ಕಾರಣ ಈ ವಿಷಯದ ಗಾಂಭೀರ್ಯತೆ ಅರಿತುಕೊಂಡು ತಕ್ಷಣ ಕಾರ್ಯೋನ್ಮುಖರಾಗದಿದ್ದರೆ ಮುಂದಿನ ಆಗು-ಹೋಗುಗಳಿಗೆ ಸರಕಾರವೇ ಜವಾಬ್ದಾರವಾಗಬೇಕಾಗುತ್ತದೆ. ಆಡಳಿತ ಮಂಡಳಿಗಳ ಹಾಗೂ ಶಿಕ್ಷಕರ ತಾಳ್ಮೆ ಪರೀಕ್ಷಿಸದೆ ಸೌಹಾರ್ದಯುತ ಪರಿಹಾರಕ್ಕೆ ಮುಂದಾಗಬೇಕೆಂದು ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.