Waqf Land Issue: ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ
Team Udayavani, Oct 29, 2024, 9:44 PM IST
ಧಾರವಾಡ: ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ ಪ್ರಶ್ನಾತೀತ ಅಧಿಕಾರವೇ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಮೊದಲು ಇದನ್ನು ತೆಗೆದು ಹಾಕಿದರೆ ಎಲ್ಲವೂ ಸರಿ ಹೋಗುತ್ತದೆ ಎಂದರು.
ಪ್ರಸ್ತುತ ಬೆಳವಣಿಗೆ ನೋಡಿದರೆ ಕಡೇ ಪಕ್ಷ ವಕ್ಫ್ ಕಾನೂನು ತಿದ್ದುಪಡಿ ತರುವ ಅವಶ್ಯಕತೆಯಿದೆ. ಅಲ್ಲಾನ ನೆಪದಲ್ಲಿ ವಕ್ಫ್ ಮೂಲಕ ಭೂ ಕಬಳಿಸುವವರಿಗೆ ಕಡಿವಾಣ ಹಾಕಬೇಕಿದೆ. ಜಗತ್ತಿನಲ್ಲೇ ಇಲ್ಲದಂತಹ ವಕ ಕಾನೂನು ನಮ್ಮಲ್ಲಿ ಇದ್ದು, ದೇಶದಲ್ಲಿ ವಕ್ಫ್ ಗೆ ಪರಿಮಿತಿಯೇ ಇಲ್ಲದಾಗಿದೆ. ಜಗತ್ತಿನ ಯಾವ ದೇಶದಲ್ಲೂ ಇಂಥ ವಕ್ಫ್ ಕಾನೂನು ಇಲ್ಲ. ಹಿಂದೂಗಳು, ರೈತರು ಎಚ್ಚೆತ್ತುಕೊಳ್ಳಬೇಕು ಎಂದರು.
ಭಾರತದ ನೆಲವನ್ನು ಅಲ್ಲಾನ ಆಸ್ತಿ ಎನ್ನಲು ಅಲ್ಲಾ ಏನು ಭಾರತದವನೆ? ಎಂದು ಪ್ರಶ್ನಿಸಿದ ಜೋಶಿ, ಅಲ್ಲಾನನ್ನು ಮುಂದಿಟ್ಟು ಆಸ್ತಿ ಕಬಳಿಸುತ್ತಿದೆ. ಮುಂದೊಂದು ದಿನ ನಾವಿರುವ ಮನೆ, ನಿಂತ ನೆಲವನ್ನೇ ವಕ್ಫ್ ತನ್ನ ಆಸ್ತಿ ಎಂದರೂ ಅಚ್ಚರಿಯಿಲ್ಲ. ಅಷ್ಟೊಂದು ಅಪರಿಮಿತ ಅಧಿಕಾರ ಕೊಟ್ಟು ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ಇನ್ನು ರಾಜ್ಯದಲ್ಲಿ ರೈತರ ಜಾಮೀನು, ಮಠ, ದೇವಸ್ಥಾನ ಮತ್ತು ಬಡ ಮುಸ್ಲಿಮರ ಆಸ್ತಿಯನ್ನು ವಕ್ಫ್ ಮೂಲಕ ಕಬಳಿಸಲು ಸಚಿವ ಜಮೀರ್‌ಅಹ್ಮದ್ ಮತ್ತು ಕಾಂಗ್ರೆಸ್ ಪಕ್ಷ ಸಹ ಕುಮ್ಮಕ್ಕು ನೀಡಿದೆ ಎಂದು ದೂರಿದರು.
ರೈತರ ಜಮೀನು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ತಿದ್ದುಪಡಿ ಮಾಡಿದ ತಹಶೀಲ್ದಾರ್ ಮತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕೂಡಲೇ ಅಮಾನತ್ತು ಪಡಿಸಬೇಕು. ವಕ್ಫ್ ಆಸ್ತಿ ಎಂದಿರುವ ಪಗಣಿಗಳನ್ನು ಜಿಲ್ಲಾಧಿಕಾರಿ ಕೂಡಲೇ ಸರಿಪಡಿಸಬೇಕು. ರೈತರು ದಾಖಲೆ ಸಲ್ಲಿಸಲಿ ಎನ್ನುತ್ತಿದ್ದಾರೆ. ವಕ್ಫ್ ಹೆಸರು ನಮೂದು ಮಾಡುವಾಗ ದಾಖಲೆ ಕೇಳಿದ್ದರಾ? ಎಂದ ಸಚಿವ ಜೋಶಿ, ಜಿಲ್ಲಾಧಿಕಾರಿ ತಕ್ಷಣವೇ ಯಾವುದೇ ಸಬೂಬು ನೀಡದೆ, ಕೇಳದೆ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿ ಇರುವ ಎಲ್ಲೆಡೆ ಹಿಂದೂಗಳಿಗೆ ಕಿಮ್ಮತ್ತು ಇಲ್ಲದಾಗಿದೆ. ದಯಮಾಡಿ ಯಾರೂ ಕಾಂಗ್ರೆಸ್‌ನ ಉಚಿತ ಸ್ಕೀಂಗಳಿಗೆ ಮಾರುಳಾಗಿ ಮತ ನೀಡಬಾರದು. ಮುಸ್ಲಿಂ ತುಷ್ಟೀಕರಣದ ಕಾಂಗ್ರೆಸ್ ಅನ್ನು ಬೆಂಬಲಿಸಿ ಕೊನೆಗೆ ಹೀಗೆ ಸ್ವಂತ ಮನೆ-ಮಠ, ಜಮೀನು ಕಳೆದುಕೊಳ್ಳಬೇಡಿ. ಇದು ನನ್ನ ಕಳಕಳಿಯ ಮನವಿ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.