ಬಾಲ ಕಾರ್ಮಿಕ ಪದ್ಧತಿ ತಡೆ ಎಲ್ಲರ ಜವಾಬ್ದಾರಿ
ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ತಿಳಿವಳಿಕೆ
Team Udayavani, Jun 20, 2019, 9:29 AM IST
ಹುಬ್ಬಳ್ಳಿ: ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಂದ ಜಾಥಾ ನಡೆಯಿತು.
ಹುಬ್ಬಳ್ಳಿ: ಮಕ್ಕಳ ಬಾಲ್ಯ ಅಮೂಲ್ಯವಾದದ್ದು, ಪಾಲಕರು ಮಕ್ಕಳನ್ನು ದುಡಿಮೆಗೆ ಹಚ್ಚಿ ಅವರ ಭವಿಷ್ಯ ಹಾಳು ಮಾಡದೆ, ಅವರನ್ನು ಮುಖ್ಯವಾಹಿನಿಗೆ ತರಲು ಮುಂದಾಗಬೇಕು ಎಂದು ಹುಬ್ಬಳ್ಳಿ ನ್ಯಾಯಾಲಯದ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಾದೇಶ ವಿ. ಹೇಳಿದರು.
ಹೊಸೂರಿನ ಸರಕಾರಿ ಪ್ರೌಢಶಾಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಬಾಲ್ಯದಲ್ಲಿಯೇ ಶಾಲೆಗೆ ಬಂದು ಉತ್ತಮ ವಿದ್ಯಾಭ್ಯಾಸ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಆದರೆ ವಿವಿಧ ಕಾರಣಗಳಿಗಾಗಿ ಪಾಲಕರು ಅವರನ್ನು ಶಾಲೆ ಬಿಡಿಸಿ ಚಿಕ್ಕವಯಸ್ಸಿನಲ್ಲೇ ಯಾವುದಾದರು ಕೂಲಿ ಕೆಲಸಕ್ಕೆ ಸೇರುತ್ತಾರೆ. ಸಂವಿಧಾನ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯ. ಎಲ್ಲಾ ಮಕ್ಕಳಿಗೂ ಅವರ ಬಾಲ್ಯ ಸುರಕ್ಷಿತವಾಗಿ ಕಳೆಯುವ ಹಕ್ಕಿದೆ. ಅದಕ್ಕಾಗಿ ಸರಕಾರಗಳು ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ವಿವಿಧ ಸೌಲಭ್ಯಗಳಿದ್ದು, ಕಾರ್ಮಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬಾಲ ಕಾರ್ಮಿಕ ಪದ್ಧತಿ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ, ಬಡತನ ದೇಶಕ್ಕೆ ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಬಡವರೆಲ್ಲ ಬಾಲ ಕಾರ್ಮಿಕರೆ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಬಾಲ ಕಾರ್ಮಿಕತೆಗೆ ಬಡತನ ಜೊತೆ ಜನಸಂಖ್ಯೆ ಸ್ಫೋಟವೂ ಕಾರಣ. ಇದನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಲಾಭದ ಆಸೆ, ಕಡಿಮೆ ವೇತನ ನೀಡುವ ದೃಷ್ಟಿಯಿಂದ ಹಲವಾರು ಉದ್ಯಮಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುತ್ತಾರೆ. ಹೋಟೆಲ್, ಇಟ್ಟಿಗೆ ಭಟ್ಟಿ, ಗಣಿಗಾರಿಕೆ, ಕೈಗಾರಿಕಾ ಕಂಪನಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳು ಕೆಲಸ ಮಾಡುತ್ತಿದ್ದಾರೆ. ಬಾಲಕರನ್ನು ದುಡಿಸಿಕೊಳ್ಳುವವರಿಗೆ ಹಾಗೂ ಮಕ್ಕಳನ್ನು ದುಡಿಸಲು ಕಳುಹಿಸುವ ಪಾಲಕರಿಗೆ 20ರಿಂದ 50 ಸಾವಿರ ರೂ.ವರೆಗೆ ದಂಡ, ಜೊತೆಗೆ 6 ತಿಂಗಳಿನಿಂದ 3 ವರ್ಷದ ವರೆಗೆ ಕಾರಾಗೃಹ ಶಿಕ್ಷೆಯಿದೆ. ಪಾಲಕರು ಮಗು ದುಡಿಸಿ ಬದುಕುವುದು ಅವಶ್ಯವಿಲ್ಲ. ಯಾವುದೇ ಬಾಲಕರು ಶಾಲೆಯಿಂದ ಹೊರಗುಳಿಯಬಾರದು ಎಂದರು.
ತಹಶೀಲ್ದಾರ್ ಸಂಗಮೇಶ ಬಾಡಗಿ, ಸಹಾಯಕ ಸರಕಾರಿ ಅಭಿಯೋಜಕ ಪ್ರಕಾಶ ಸುಂಕದ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ ಮಾತನಾಡಿದರು.
ಸಹಾಯಕ ಸರಕಾರಿ ಅಭಿಯೋಜಕ ಪ್ರಕಾಶ ಸುಂಕದ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ಹಿರಿಯ ಕಾರ್ಮಿಕ ನಿರೀಕ್ಷಕ ಸಿದ್ದಪ್ಪ ಕೈಯನೂರ ಮೊದಲಾದವರಿದ್ದರು. ಜಿ.ಸಿ. ಕೊಲಕಾರ ಸ್ವಾಗತಿಸಿದರು. ವಿ.ಜಿ. ಗಳಬಿ ನಿರೂಪಿಸಿದರು. ಲಲಿತಾ ಸಾತೇನಹಳ್ಳಿ ವಂದಿಸಿದರು. ಕಾರ್ಯಕ್ರಮಕ್ಕೂ ಮೊದಲು ಬಾಲ ಕಾರ್ಮಿಕ ಪದ್ಧತಿ ವಿರೋಧಿಸಿ ಶಾಲಾ ಮಕ್ಕಳಿಂದ ಜಾಥಾ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.