ಬಿಜೆಪಿಯಿಂದ ಟಿಕೆಟ್ ವಿಚಾರದಲ್ಲಿ ಯಾವ ವಿಸ್ಮಯವೂ ನಡೆಯಲಾರದು: Jagadish Shettar
Team Udayavani, Apr 16, 2023, 9:13 AM IST
ಹುಬ್ಬಳ್ಳಿ: ಬಿಜೆಪಿಯಿಂದ ಟಿಕೆಟ್ ವಿಚಾರದಲ್ಲಿ ಯಾವ ವಿಸ್ಮಯವೂ ನಡೆಯಲಾರದು, ನಡೆದರು ಹಿಂದೆ ಹೋಗದ ರೀತಿಯಲ್ಲಿ ನಾನು ಮುಂದೆ ಹೆಜ್ಜೆ ಇರಿಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದರು.
ರವಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಕೊನೆ ಗಳಿಗೆಯ ವಿಸ್ಮಯ ನಡೆಯುವ ಯಾವ ವಿಶ್ವಾಸವೂ ನನಗಿಲ್ಲ.ರಾಜ್ಯದಲ್ಲಿ ಬಿಜೆಪಿ ಪಕ್ಷದ ಉಸ್ತುವಾರಿ ಹಾಗೂ ಚುನಾವಣೆ ಉಸ್ತುವಾರಿ ಪಕ್ಷವನ್ನು ಒಲಿ ಕೊಡುವುದಕ್ಜೆ ನಿರ್ಧರಿಸಿದಂತಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ಇಲ್ಲಿನ ವಾಸ್ತವ ಚಿತ್ರಣ ನೀಡದೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ಹಿತಾಸಕ್ತಿ ಗೆ ಧಕ್ಕೆ ತರುವ ಕೆಲಸಕ್ಕೆ ಮುಂದಾಗಿದ್ದಾರೆ.
ಪಕ್ಷದಲ್ಲಿ ಶಿಸ್ತು, ಹಿರಿಯರಿಗೆ ಗೌರವ ಇಲ್ಲ ಎಂಬುದಕ್ಕೆ ಹಲವು ವಿದ್ಯಮಾನಗಳು ಸಾಕ್ಷಿ ಹೇಳುತ್ತಿವೆ ಎಂದರು.
ಶಿರಸಿ ತರಳಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವೆ.
ಪ್ರಮುಖರ ಸಭೆ ಕರೆದು ಚರ್ಚಿಸಿ ಮುಂದಿನ ನಡೆ ಘೋಷಿಸುವೆ. ಅವಕಾಶಗಳು ಮುಕ್ತವಾಗಿವೆ ಎಂದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ನಂತರದ ಇದುವರೆಗೂ ಪಕ್ಷದ ವರಿಷ್ಠರು, ಪ್ರಮುಖರು ಯಾರೊಬ್ಬರು ನನ್ನನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.