BL Santhosh ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ ಶೆಟ್ಟರ್
Team Udayavani, Sep 1, 2023, 11:20 AM IST
ಹುಬ್ಬಳ್ಳಿ: ಬಿ.ಎಲ್.ಸಂತೋಷ ಅವರು ಮೊದಲು ತಮ್ಮ ಪಕ್ಷದಲ್ಲಿ ಇರುವವರನ್ನು ಹಾಗೂ ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಲಿ. ಬೇರೆ ಪಕ್ಷದವರನ್ನು ಕರೆದುಕೊಂಡು ಹೊಸ ಸರಕಾರ ರಚನೆ ದೂರದ ಮಾತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ತು ಸದಸ್ಯ ಜಗದೀಶ ಶೆಟ್ಟರ ಅವರು ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡುವುದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡುವುದೇ. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆ ಎಂಬುವುದನ್ನು ಮೊದಲು ಅವಲೋಕನ ಮಾಡಿಕೊಳ್ಳಬೇಕು. ಕಾಂಗ್ರೆಸ್ ಗೆ ಜನರು 136 ಸೀಟ್ ನೀಡಿದ್ದಾರೆ. ಶಾಸಕರು ಅವರ ಸಂಪರ್ಕದಲ್ಲಿದ್ದರೆ ನಾಳೆಯಿಂದಲೇ ಆಪರೇಶನ್ ಶುರು ಮಾಡಲಿ ಎಂದು ಹರಿಹಾಯದ್ದರು.
ಇದನ್ನೂ ಓದಿ:Free Travel:ಉಚಿತ ಬಸ್ ಪ್ರಯಾಣ ಪ್ರಶ್ನಿಸಿದ್ದ ಕಾನೂನು ವಿದ್ಯಾರ್ಥಿಗಳಿಗೆ ಹೈಕೋರ್ಟ್ ತರಾಟೆ
ಪಕ್ಷದಲ್ಲಿರುವ ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರುವುದು ನಿಮ್ಮ ಕೆಲಸ. ಬೆಳಗ್ಗೆಯಿಂದ ಸಾಯಂಕಾಲವರೆಗೂ ಆಪರೇಶನ್ ಮಾಡುವುದೇ ಕೆಲಸವಾಗಿದೆ. ಜನರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬರುವತ್ತ ಚಿಂತನೆ ಮಾಡುವುದು ಬಿಟ್ಟು ವಾಮಮಾರ್ಗದ ಬಗ್ಗೆ ಹೆಚ್ವು ಯೋಚನೆ ಮಾಡುತ್ತಾರೆ ಅನ್ನಿಸುತ್ತಿದೆ. ಬಿಜೆಪಿ ಮುಳುಗುತ್ತಿರುವ ಹಡಗು. ಅವರ ಪಕ್ಷದ ಬಗ್ಗೆ ನಾನೇಕೆ ಮಾತನಾಡಲಿ ಎಂದರು.
ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಯಾರು ಎಂದು ಹೇಳಿದ್ದೇನೆ. ಹಿಂದೆಯೂ ಅವರ ಬಗ್ಗೆ ಮಾತನಾಡಿದ್ದೇನೆ. ಅಂತಹವರ ಬಗ್ಗೆ ದೆಹಲಿಯಲ್ಲಿ ಕುಳಿತಿರುವ ಬಿಜೆಪಿ ನಾಯಕರು ಯೋಚನೆ ಮಾಡಬೇಕು. ಬಿಜೆಪಿ ಪಕ್ಷವು ಕೆಲವೇ ಜನರ ಕೈಯಲ್ಲಿರುವ ಕಾರಣ ಈ ಸ್ಥಿತಿ ಒದಗಿ ಬಂದಿದೆ. ರಾಜ್ಯ ಬಿಜೆಪಿ ನಾಯಕರ ಪರಿಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಜೊತೆ ನಾನು ಮಾತಾಡಿಲ್ಲ. ಹೈಕಮಾಂಡ್ ಕೂಡಾ ನನಗೆ ಏನೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.