ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ, ಹೇಳಿಕೆಗಳಿಗೆ ಇತಿಮಿತಿ ಇರಬೇಕು: ಜಗದೀಶ್ ಶೆಟ್ಟರ್
Team Udayavani, Jan 26, 2023, 1:01 PM IST
ಹುಬ್ಬಳ್ಳಿ: ನನ್ನ ರಾಜಕೀಯ ಜೀವನದಲ್ಲೇ ಪ್ರಸ್ತುತ ದ ಕೀಳುಮಟ್ಟದ ಹೇಳಿಕೆಗಳನ್ನು ಕೇಳಿಲ್ಲ. ರಾಜಕೀಯದಲ್ಲಿ ಹೇಳಿಕೆಗಳಿಗೂ ಒಂದು ಮಿತಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭಿಪ್ರಾಯ ಪಟ್ಟರು.
ಗಣರಾಜ್ಯೋತ್ಸವ ಅಂಗವಾಗಿ ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.
ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ, ಹೇಳಿಕೆಗಳಿಗೆ ಇತಿಮಿತಿ ಇರಬೇಕು. ಕೀಳುಮಟ್ಟದ ಹೇಳಿಕೆಗಳಿಗೆ ಯಾರು ಮುಂದಾಗಬಾರದು. ಚುನಾವಣೆ ದೃಷ್ಟಿಕೋನದೊಂದಿಗೆ ಕಾಂಗ್ರೆಸ್ ಕೀಳುಮಟ್ಟದ ಹೇಳಿಕೆಗಳನ್ನು ಆರಂಭಿಸಿತು.ಬಹುತೇಕ ರಾಜ್ಯಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಸೋಲಿನ ಭೀತಿಯಿಂದ ಹತಾಶೆಗೊಂಡು ಇಂತಹ ಕೀಳುಮಟ್ಟದ ಹೇಳಿಕೆಗಳಿಗೆ ಮುಂದಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿಟಿ ರವಿ
ಕಾಂಗ್ರೆಸ್ ನ ಹೇಳಿಕೆಗಳಿಗೆ ನಮ್ಮವರು ಪ್ರತಿಕ್ರಿಯೆ ನೀಡಬೇಕಾಗಿದೆ ಇಲ್ಲವಾದರೆ, ಕಾಂಗ್ರೆಸ್ ಒಂದು ಸುಳ್ಳನ್ನು ನೂರು ಬಾಎಇ ಹೇಳಿ, ಅದನ್ನೇ ಸತ್ಯವಾಗಿಸಲು ಮುಂದಾಗಲಿದೆ. ಪಕ್ಷದ ಕೆಲವರು ನೀಡಿದ ಕೀಳುಮಟ್ಟದ ಹೇಳಿಕೆಗಳನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಅವಕಾಶ ಸಿಕ್ಕರೆ ಪಕ್ಷ ವೇದಿಕೆಯಲ್ಲಿ ಇದನ್ನು ಪ್ರಸ್ತಾಪಿಸುವುದಾಗಿ ಶೆಟ್ಟರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.