ಎರಡು ಸಾವಿರ ಬೆಡ್ ವ್ಯವಸ್ಥೆಗೆ ಕಿಮ್ಸ್‌ಗೆ ಜಗದೀಶ ಶೆಟ್ಟರ ಸೂಚನೆ
ಮುಖ್ಯಸ್ಥರೊಂದಿಗೆ ಶೆಟ್ಟರ ಸಭೆಕಳೆದ ಬಾರಿಗಿಂತಲೂ ದುಪ್ಪಟ್ಟು ಸಿದ್ಧತೆಪ್ರಾಣವಾಯುವಿಗೆ ಮೊದಲ ಆದ್ಯತೆ
Team Udayavani, Apr 24, 2021, 5:30 PM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಎದುರಿಸಲು ಕಳೆದ ಬಾರಿಗಿಂತ ದುಪ್ಪಟ್ಟು ಸಿದ್ಧತೆ ಮಾಡಿಕೊಳ್ಳಲು ಹಾಗೂ ಸುರಕ್ಷತೆ ದೃಷ್ಟಿಯಿಂದ 2000 ಬೆಡ್ ಸಿದ್ಧವಿರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಕೋವಿಡ್ ಸಿದ್ಧತೆಗಳ ಕುರಿತಾಗಿ ಕಿಮ್ಸ್‌ನ ಆಡಳಿತ ಭವನದಲ್ಲಿ ಶುಕ್ರವಾರ ಕಿಮ್ಸ್‌ನ ಎಲ್ಲ ವಿಭಾಗಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇನ್ನು 5-6 ದಿನಗಳಲ್ಲಿ ಕಿಮ್ಸ್ ನಲ್ಲಿ 500ರಿಂದ 1,000 ಹಾಗೂ ಎಸ್‌ಡಿಎಂನಲ್ಲಿ 500 ಬೆಡ್ ಸೇರಿದಂತೆ ಸಿವಿಲ್, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2,000 ಬೆಡ್‌ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ವರೆಗೆ ಒಟ್ಟು 634 ಕೋವಿಡ್ ರೋಗಿಗಳು ದಾಖಲಾಗಿದ್ದಾರೆ.
ಪ್ರತಿದಿನ ಇಲ್ಲವೆ ದಿನಬಿಟ್ಟು ದಿನ ಸೊಂಕಿತರ ಸಂಖ್ಯೆ ಹೆಚ್ಚಳದ ಲೆಕ್ಕಾಚಾರ ಮೇಲೆ ಹಾಗೂ ಮುಂಬರುವ ದಿನಗಳಲ್ಲಿ ಆಕ್ಸಿಜನ್ ಸೌಲಭ್ಯವುಳ್ಳ ಬೆಡ್‌ಗಳ ಕೊರತೆಯಾಗಬಾರದೆಂದು ಕಿಮ್ಸ್ ನಲ್ಲಿ ಬೆಡ್‌ಗಳ ಸಂಖ್ಯೆಯನ್ನು ತಕ್ಷಣವೇ 1 ಸಾವಿರಕ್ಕೆ ವೃದ್ಧಿಸಲು ಹಾಗೂ ಖಾಸಗಿ ಆಸ್ಪತ್ರೆಯವರಿಗೂ ಶೇ. 50 ಬೆಡ್‌ಗಳನ್ನು ಕಾಯ್ದಿರಿಸಲು ಸೂಚಿಸಿದ್ದೇನೆ ಎಂದರು.
ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಕಿಮ್ಸ್‌ನ ಮೆಡಿಸಿನ್, ಅನಸ್ತೇಶಿಯಾ ಮಾತ್ರವಲ್ಲ ಎಲ್ಲ ವಿಭಾಗಗಳ ವೈದ್ಯರು, ಸಿಬ್ಬಂದಿ ಪಾಲ್ಗೊಂಡು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆಯ ದರಪಟ್ಟಿ ಪ್ರದರ್ಶಿಸುವಂತೆ ಹಾಗೂ ಅಲ್ಲಿನ ಸೌಲಭ್ಯ ಪರಿಶೀಲಿಸಲು ನೋಡಲ್ ಅಧಿ ಕಾರಿಗಳನ್ನು ನೇಮಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹು-ಧಾ ಪೊಲೀಸ್ ಆಯುಕ್ತ ಲಾಭೂ ರಾಮ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಪ್ರಾಂಶುಪಾಲ ಈಶ್ವರ ಹೊಸಮನಿ, ಆಡಳಿತಾಧಿ ಕಾರಿ ರಾಜಶ್ರೀ ಜೈನಾಪುರ, ವೈದ್ಯಕೀಯ ಅಧಿಧೀಕ್ಷಕ ಡಾ| ಅರುಣಕುಮಾರ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಯಶವಂತ ಮದೀನಕರ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಇತರೆ ವೈದ್ಯಾ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.