ಜನ್‌ಧನ್‌ ಸಣ್ಣ ವ್ಯಾಪಾರಿಗೆ ವರದಾನ

Team Udayavani, Sep 2, 2017, 12:54 PM IST

hub5.jpg

ಹುಬ್ಬಳ್ಳಿ: ಜನಧನ ಖಾತೆ ಸಣ್ಣ ವ್ಯಾಪಾರಿಗಳಿಗೆ ವರದಾನವಾಗಿದ್ದು, ಬಡ್ಡಿ ಕುಳಗಳ ಚಕ್ರವ್ಯೂಹದಲ್ಲಿ ಸಿಲುಕಿ ಪಡುತ್ತಿದ್ದ ಸಮಸ್ಯೆಯಿಂದ ನಿಶ್ಚಿಂತವಾಗಲು ಸಹಕಾರಿಯಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಇಲ್ಲಿನ ಗಬ್ಬೂರನ ಶರಣ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನ ಪ್ರಧಾನಮಂತ್ರಿ ಜನ್‌ಧನ್‌ ಯೋಜನೆಯ ಪಾಸ್‌ಬುಕ್‌ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜನ್‌ಧನ್‌ ಖಾತೆ ಹೊಂದಿದ ಸಣ್ಣ ವ್ಯಾಪಾರಿಗಳು ಆರು ತಿಂಗಳ ಕಾಲ ವ್ಯವಹಾರ ಮಾಡಿದರೆ ಬ್ಯಾಂಕ್‌ನವರು ರೂಪೇ ಕಾರ್ಡ್‌ ನೀಡುತ್ತಾರೆ. ಅದರ ಮೂಲಕ ಬಡ್ಡಿ ರಹಿತವಾಗಿ 5 ಸಾವಿರ ರೂ. ಸಾಲ ಪಡೆದು 45 ದಿನದೊಳಗೆ ಅದನ್ನು ಪಾವತಿಸಬಹುದು. ತಪ್ಪಿದರೆ ವರ್ಷಕ್ಕೆ ಶೇ.8 ಇಲ್ಲವೆ 9ರಷ್ಟು ಬಡ್ಡಿದರ ಕಟ್ಟಬೇಕಾಗುತ್ತದೆ. 

ಈ ಸಾಲವನ್ನೆ ಬಂಡವಾಳವನ್ನಾಗಿಸಿ ಉದ್ಯೋಗ ಮಾಡಿಕೊಳ್ಳಬೇಕು. ಅದನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಯಾವುದೇ ಭದ್ರತೆಯಿಲ್ಲದೆ ಮುದ್ರಾ ಯೋಜನೆಯಡಿ ಅತೀ ಕಡಿಮೆ ಬಡ್ಡಿ ದರದಲ್ಲಿ 50 ಸಾವಿರ ರೂ. ಸಾಲ ಪಡೆಯಬಹುದು. ಸಣ್ಣ ವ್ಯಾಪಾರಿಗಳ ಸುಧಾರಣೆಗಾಗಿಯೇ ಪ್ರಧಾನಿಯವರು ಜನ್‌ಧನ್‌ ಖಾತೆ ಯೋಜನೆ ಜಾರಿಗೆ ತಂದಿದ್ದಾರೆ.

ಆ ಮೂಲಕ ಮಧ್ಯವರ್ತಿಗಳು ಹಾಗೂ ಬಡ್ಡಿ ವ್ಯಾಪಾರಿಗಳ ಕಪಿಮುಷ್ಟಿಯಿಂದ ಪಾರಾಗಬಹುದು ಎಂದರು. ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಸೆ.7ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸೆ.5ರಂದು ನೆಹರೂ ಮೈದಾನದಿಂದ ಮಂಗಳೂರು ವರೆಗೆ ಬೈಕ್‌ರ್ಯಾಲಿ ಆಯೋಜಿಸಲಾಗಿದೆ ಎಂದರು. 

ಮಹಾಪೌರ ಡಿ.ಕೆ. ಚವ್ಹಾಣ ಮತ್ತು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿ, ಶರಣ ನಗರದಲ್ಲಿ ಸಂಸದ ಪ್ರಹ್ಲಾದ ಜೋಶಿ, ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಅವರ ಸಹಕಾರದಿಂದಾಗಿ ಅಂದಾಜು 1.70 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಬಿಜೆಪಿ ಆಡಳಿತಾವಧಿಯಲ್ಲಿ ಕೈಗೊಂಡ ಯೋಜನೆಗಳ ಕಾಮಗಾರಿಗಳೇ ಈಗ ನಡೆಯುತ್ತಿವೆ.

ಶರಣ ನಗರದಲ್ಲಿ ನಾಲ್ಕು ಕಡೆ ರಸ್ತೆಗಳ ನಿರ್ಮಾಣಕ್ಕೆ ಶೀಘ್ರವೇ ಭೂಮಿಪೂಜೆ ಮಾಡಲಾಗುವುದು. ಉಜ್ವಲ್‌ ಯೋಜನೆಯಡಿ ಉಚಿತ ಗ್ಯಾಸ್‌ ವಿತರಣೆಯನ್ನು ತಿಂಗಳಾತ್ಯದೊಳಗೆ ಕೈಗೊಳ್ಳಲಾಗುವುದು ಎಂದರು. ಪಾಲಿಕೆ ಸದಸ್ಯರಾದ ಶಿವಾನಂದ ಮುತ್ತಣ್ಣವರ, ಶಿವು ಮೆಣಸಿನಕಾಯಿ, ಧುರೀಣರಾದ ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ರಾಮಣ್ಣ ಕರಗಣ್ಣವರ, ರಂಗಾ ಕಠಾರೆ, ನಾಗಪ್ಪ ರಾಣೋಜಿ ಇದ್ದರು. ಹರೀಶ ಜಂಗಲಿ ನಿರೂಪಿಸಿದರು. 

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.