ಯಲ್ಲಾಪುರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಜೆಡಿಎಸ್ ತಯಾರಿ
Team Udayavani, Jul 19, 2018, 5:46 PM IST
ಜೆಡಿಎಸ್ ಕ್ಷೇತ್ರಾಧ್ಯಕ್ಷ ಅರುಣಕುಮಾರ ಗೊಂದಳಿ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಯನ್ನು ತಾಲೂಕು ಮುಖಂಡರ ನೇತೃತ್ವದಲ್ಲಿ ಎದುರಿಸುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಎ. ರವೀಂದ್ರನಾಥ ನಾಯ್ಕರನ್ನು ದೂರವಿಟ್ಟು, ಜಿಲ್ಲಾಧ್ಯಕ್ಷರ ಮಾರ್ಗದರ್ಶನದಂತೆ ಪಕ್ಷಕ್ಕಾಗಿ ದುಡಿದ ಕಾರ್ಯರ್ಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆದ್ಯತೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ. ಇದರಿಂದ ಸ್ಥಳೀಯ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿಯ ಕುರಿತು ರಾಜ್ಯದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ನಡೆದುಕೊಂಡ ರೀತಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೇಸರ ಉಂಟುಮಾಡಿದೆ. ಕಾರ್ಯಕರ್ತರನ್ನು ಸರಿಯಾಗಿ ಬಳಸಿಕೊಳ್ಳದೇ ಮತ್ತು ತಮ್ಮ ವೈಯಕ್ತಿಕ ಕೆಲವು ತಪ್ಪು ನಿರ್ಧಾರಗಳಿಂದ ಅಲ್ಪ ಮತಗಳಿಸಲು ಕಾರಣವಾಗಿದೆ. ಅದಕ್ಕೆ ಅಭ್ಯರ್ಥಿಯೇ ನೇರ ಹೊಣೆಯಾಗಿದ್ದಾರೆ. ಹೋರಾಟ ಮನೋಭಾವನೆಯಿಂದ ಬೆಳೆದ ವ್ಯಕ್ತಿ ಎಂಬ ಕಾರಣಕ್ಕೆ ರವೀಂದ್ರನಾಥ ನಾಯ್ಕರನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಅದನ್ನು ಅವರು ಸದುಪಯೋಗ ಪಡೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಸಂಘಟನೆ ಮಾಡಬೇಕಿದೆ ಎಂದರು.
ತಾಲೂಕು ಕಾರ್ಯಾಧ್ಯಕ್ಷ ಎನ್.ವಿ. ಭಟ್ಟ ದೇವಸ, ನಗರ ಘಟಕಾಧ್ಯಕ್ಷ ರವಿಚಂದ್ರ ನಾಯ್ಕ, ಕಾರ್ಮಿಕ ಘಟಕಾಧ್ಯಕ್ಷ ಚೂಡಾಮಣಿ ನಾಯ್ಕ, ಪ್ರಮುಖರಾದ ನಿಸ್ಸಾರ ಅಹಮ್ಮದ್ ಶೇಖ್, ಸರಸ್ವತಿ ಗುನಗಾ, ಫಾರುಖ್ ಖಾನ್, ರೇವಣಸಿದ್ಧ, ರಾಘು ದೇವಾಡಿಗ, ನೂರ್ ಅಹಮ್ಮದ್ ಕಿರವತ್ತಿ, ಜಾಫರ್ ಹಂಡಿ, ಸುಧಾಕರ ನಾಯ್ಕ, ರಾಘವೇಂದ್ರ ರಾಯ್ಕರ, ನಾಗೇಶ ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.