ಆರೋಗ್ಯಪೂರ್ಣ ಭಾರತಕ್ಕೆ ಕೈಜೋಡಿಸಿ: ನಿಂಬಣ್ಣವರ
ಕಲಘಟಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ
Team Udayavani, Apr 27, 2022, 9:57 AM IST
ಕಲಘಟಗಿ: ದೇಶದ ಪ್ರತಿಯೊಬ್ಬರೂ ಆರೋಗ್ಯಪೂರ್ಣವಾಗಿ ಬಲಿಷ್ಠರಾಗಿರಬೇಕೆಂಬ ಪ್ರಧಾನಿ ಮೊದೀಜಿಯವರ ಅಭಿಲಾಷೆಯನ್ನು ಸಾಕಾರಗೊಳಿಸಲು ಆರೋಗ್ಯ ಇಲಾಖೆಯೊಂದಿಗೆ ಸರ್ವರೂ ಕೈ ಜೋಡಿಸಬೇಕಿದೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.
ತಾಲೂಕಾಸ್ಪತ್ರೆಯಲ್ಲಿ ಮಂಗಳವಾರ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ ನಾಲ್ಕನೇ ವರ್ಷದ ಅಂಗವಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಆಯುಷ್ಮಾನ್ ಭಾರತ ಕಾರ್ಯಕ್ರಮವು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಸಾಮೂಹಿಕ ಜನಜಾಗೃತಿ ಮೂಲಕ ಒಂದೇ ಸೂರಿನಡಿ ವಿವಿಧ ರೀತಿಯ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಜನರು ಆರೋಗ್ಯ ಮೇಳದ ಸದುಪಯೋಗ ಪಡೆಯಬೇಕು ಎಂದರು.
ಮತಕ್ಷೇತ್ರಾದ್ಯಂತ ವಿವಿಧ ಕಾಮಗಾರಿಗೆ 100 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಬೊಮ್ಮಾಯಿಯವರು ಬಿಡುಗಡೆಗೊಳಿಸಿದ್ದು, ಎಲ್ಲ ಕಾಮಗಾರಿಗಳು ಆರಂಭಗೊಂಡು ಮತಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುತ್ತಿದೆ. ಅಳ್ನಾವರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಿಸಿ ಲೋಕಾರ್ಪಣೆಗೊಳಿಸಲಾಗಿದೆ.
ಜಿಪಂನ 25 ಕೋಟಿ, ಲೊಕೋಪಯೋಗಿ ಇಲಾಖೆಯ 25 ಕೋಟಿ, ಆಜಾದಿ ಅಮೃತ ಮಹೋತ್ಸವ ಯೋಜನೆಯಡಿ 5 ಕೋಟಿ, ಪಪಂ ವ್ಯಾಪ್ತಿಯಲ್ಲಿನ 10 ಕೋಟಿ ರೂ. ಸೇರಿದಂತೆ ನನೆಗುದಿಗೆ ಬಿದ್ದ 35 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಕಾಮಗಾರಿಗಳು ಜರುಗುತ್ತಲಿವೆ ಎಂದು ಅಂಕಿ ಸಂಖ್ಯೆಗಳ ಮೂಲಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಜಿಪಂ ಸಿಇಒ ಡಾ| ಸುರೇಶ ಇಟ್ನಾಳ ಮಾತನಾಡಿ, ಮೇಳದಲ್ಲಿ ಆರೋಗ್ಯ ಇಲಾಖೆಯ ಎಲ್ಲ ಯೋಜನೆಗಳ ಕುರಿತು ಸಾರ್ವಜನಿಕರಿಗೆ ವಿಸ್ತಾರವಾದ ಮಾಹಿತಿ ನೀಡುವುದರ ಜೊತೆಗೆ ಅವಶ್ಯಕ ಆರೋಗ್ಯ ಪರೀಕ್ಷೆ, ಚಿಕಿತ್ಸೆ ಹಾಗೂ ಔಷಧೋಪಚಾರವನ್ನು ನೀಡಲಾಗುವುದು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಆರೋಗ್ಯ ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುವುದು. ಎಬಿಎಆರ್‌ಕೆ ಕಾರ್ಡ್ ಹಾಗೂ ಹೆಲ್ತ್ ಐಡಿ ಡಿಜಿಟಲ್ ಕಾರ್ಡ್‌ಗಳನ್ನು ಪ್ರತಿಯೊಬ್ಬರೂ ಪಡೆದುಕೊಂಡು ತಮ್ಮ ಆರೋಗ್ಯದ ಎಲ್ಲ ಇತಿಹಾಸವನ್ನು ಒಂದೆಡೆ ಸಂಗ್ರಹಿಸಿಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಸನಗೌಡ ಕರಿಗೌಡರ ಪ್ರಾಸ್ತಾವಿಕ ಮಾತನಾಡಿ, ಸಮಾಜದ ಕಟ್ಟಕಡೆ ವ್ಯಕ್ತಿಗೂ ಉತ್ತಮ ಆರೋಗ್ಯ ಒದಗಿಸಬೇಕೆಂಬ ಸರಕಾರದ ಚಿಂತನೆಯನ್ವಯ ಜಿಲ್ಲಾದ್ಯಂತ ಎಲ್ಲ ತಾಲೂಕುಗಳಲ್ಲಿ ಉಚಿತ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಪ್ರಥಮವಾಗಿ ಕಲಘಟಗಿಯಲ್ಲಿ ಆರಂಭಿಸಲಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಕುಟುಂಬದ ಎಲ್ಲರಿಗೂ ಆರೋಗ್ಯ ರಕ್ಷಣೆ ನೀಡಲಾಗುತ್ತಿದೆ ಎಂದರು.
ಪಪಂ ಅಧ್ಯಕ್ಷೆ ಅನಸೂಯಾ ಹೆಬ್ಬಳ್ಳಿಮಠ, ಉಪಾಧ್ಯಕ್ಷೆ ಯಲ್ಲವ್ವ ಶಿಗ್ಲಿ, ಸದಸ್ಯರಾದ ಗಂಗಾದರ ಗೌಳಿ, ಸುನೀಲ ಗಬ್ಬೂರ, ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣನವರ, ತಾಪಂ ಇಒ ಎಸ್.ಸಿ. ಮಠಪತಿ, ಪಪಂ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ತಾಲೂಕು ಆರೋಗ್ಯಾಧಿಕಾರಿ ಡಾ| ಬಸವರಾಜ ಬಾಸೂರ, ಮುಖ್ಯ ವೈದ್ಯಾಧಿಕಾರಿ ಡಾ| ಗಿರೀಶ ಮರಡ್ಡಿ, ಡಾ| ಎಸ್.ಬಿ. ನಿಂಬಣ್ಣವರ ಇನ್ನಿತರರಿದ್ದರು.
ಮುಖ್ಯ ಶಿಕ್ಷಕ ಉಳ್ಳಾಗಡ್ಡಿ ನಿರೂಪಿಸಿದರು. ಡಾ| ಎಸ್.ಎನ್. ಗಿಡ್ಡಣ್ಣವರ ಸ್ವಾಗತಿಸಿದರು. ಡಾ| ರವಿ ಸೋಮಣ್ಣವರ ವಂದಿಸಿದರು.
ಶಿಬಿರದಲ್ಲಿ 1554 ಜನರಿಂದ ನೋಂದಣಿ: ಶಿಬಿರದಲ್ಲಿ 1554 ಜನರು ಹೆಸರನ್ನು ನೋಂದಾಯಿಸಿದ್ದರು. 618 ಜನರಿಗೆ ಎಬಿಎಆರ್‌ಕೆ ಕಾರ್ಡ್ ವಿತರಣೆ, 170 ಜನರ ಹೆಲ್ತ್ ಐಡಿ ಕಾರ್ಡ್ ವಿತರಣೆ, 570 ಜನರ ವಿವಿಧ ರೀತಿಯ ರಕ್ತಪರೀಕ್ಷೆ, 343 ಜನರ ಬಿಪಿ-ಶುಗರ್ ಪರೀಕ್ಷೆ, 43 ಜನರ ಚರ್ಮರೋಗ ತಪಾಸಣೆ, 109 ಮಹಿಳೆಯರ ಪ್ರಸೂತಿ ಮತ್ತು ಸ್ತ್ರೀರೋಗ ಪರೀಕ್ಷೆ, 50 ಜನರ ದಂತಚಿಕಿತ್ಸೆ, 109 ಜನರ ಕಣ್ಣು ತಪಾಸಣೆ ನಡೆಸಿ 38 ಜನರಿಗೆ ಕನ್ನಡಕ ನೀಡಿ 35 ಜನರಿಗೆ ಕಣ್ಣಿನ ಪೊರೆ ಚಿಕಿತ್ಸೆಗೆ ಸೂಚಿಸಲಾಯಿತು.
ನಾಳೆ ಕುಂದಗೋಳದಲ್ಲಿ ಆರೋಗ್ಯ ಮೇಳ:
ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ ನಾಲ್ಕನೇ ವರ್ಷದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಆರೋಗ್ಯ ಮೇಳವನ್ನು ಏ. 28ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆ ವರೆಗೆ ಕುಂದಗೋಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆ, ರೋಗ ಪತ್ತೆ, ಚಿಕಿತ್ಸೆ ಹಾಗೂ ಆರೋಗ್ಯ ವರ್ಧಕ ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು. ಮೇಳದಲ್ಲಿ ನೋಂದಣಿ, ಡಿಜಿಟಲ್ ಐಡಿ ರಚನೆ ಉಚಿತವಾಗಿ ಮಾಡಲಾಗುವುದು. ತಜ್ಞ ವೈದ್ಯರು, ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞರಿಂದ ಟೆಲಿಕನ್ಸಲ್ಟೆàಶನ್ ಮೂಲಕ ಉಚಿತ ಸಲಹೆ ದೊರೆಯಲಿದೆ. ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಗರ್ಭಕೋಶ ಕಂಠ ಮತ್ತು ಸ್ತನ ಕ್ಯಾನ್ಸರ್ ಮುಂತಾದವುಗಳ ಉಚಿತ ನೋಂದಣಿ, ತಪಾಸಣೆ ಮತ್ತು ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಬಸನಗೌಡ ಕರಿಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.