Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಶಿಂಧೆ ಕರೆಸಿದ್ದು ಕನ್ನಡಿಗರಿಗೆ ಅವಮಾನ: ಲಾಡ್‌

Team Udayavani, May 3, 2024, 1:18 AM IST

1-weweewq

ಧಾರವಾಡ : ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಆದರ್ಶ ಮತ್ತು ಮಾದರಿ ರಾಜಕಾರಣಿ ಪ್ರಹ್ಲಾದ ಜೋಶಿ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಗೆಲ್ಲಿಸಿ ಕಳುಹಿಸಬೇಕು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿ ಏಕನಾಥ ಶಿಂಧೆ ಮನವಿ‌ ಮಾಡಿದರು.

ನಗರದ ಶ್ರೀ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯ ಮೈದಾನದಲ್ಲಿ ಧಾರವಾಡ ಲೋಕಸಭಾದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮೊದಲು ಮರಾಠಿಯಲ್ಲಿಯೇ ಭಾಷಣ ಆರಂಭಿಸಿ ಆ ಬಳಿಕ ಹಿಂದಿಯಲ್ಲಿ ಅವರು ಮಾತನಾಡಿದರು.

ಶಿವಾಜಿ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದ್ದು, ಶಿವಾಜಿ ಮಹಾರಾಜರು ಹಿಂದೂತ್ವದ ಜತೆಗೆ ದೇಶ ರಕ್ಷಣೆ ಮಾಡಿದಂತೆ ಪ್ರದಾನಿ ನರೇಂದ್ರ ಮೋದಿ ಕೂಡ ಮಾಡಿದ್ದಾರೆ. ಈ ಕಾರಣದಿಂದಲೇ ಜಗತ್ತು ಇಂದು ಭಾರತವನ್ನು ಗೌರವಿಸುವಂತಾಗಿದೆ. ಹೀಗಾಗಿ ದೇಶದ ಒಳಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲೇಬೇಕು. ಮೋದಿ ಅವರಿಂದಲೇ ಪಾಕಿಸ್ತಾನ ಸೇರಿದಂತೆ ಶತ್ರು ರಾಷ್ಟ್ರಗಳು ತಣ್ಣಗಿವೆ. ಅದಕ್ಕಾಗಿ ಮೋದಿ ಗೆಲ್ಲಬೇಕಿದ್ದು, ಅದಕ್ಕೆ ಜೋಶಿ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳೆಲ್ಲರೂ ಗೆಲ್ಲಲೇಬೇಕು ಎಂದು ಮನವಿ ಮಾಡಿದರು.

ಇನ್ನು ಕಳೆದ ನಾಲ್ಕು ಚುನಾವಣೆಯಲ್ಲಿಯೂ ಭಾರೀ ಅಂತರದಿಂದ ಗೆಲ್ಲುತ್ತಲೇ ಬಂದಿರುವ ಪ್ರಹ್ಲಾದ ಜೋಶಿ ಅವರನ್ನು ಮತ್ತೊಂದು ಬಾರಿ ಗೆಲ್ಲಿಸಿರಿ. ಕೇಂದ್ರದಲ್ಲಿ ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಶಿ ಮಾತ್ರ ಶುದ್ದ, ಸ್ವಚ್ಚವಾಗಿದ್ದಾರೆ. ಈ ಹಿಂದಿನವರಂತೂ ಮೈಗೆ ಮಸಿ ಬಳಿಸಿಕೊಂಡಿದ್ದು ಮರೆಯುವ ಹಾಗಿಲ್ಲ. ಹೀಗಾಗಿ ಈಗ ಮತ್ತೆ ಜೋಶಿ ಗೆದ್ದು ಮತ್ತೆ ಮಂತ್ರಿಯಾಗಲಿದ್ದು, ಹೀಗಾಗಿ ಜಿಲ್ಲೆಯ ಅಷ್ಟೇ ಅಲ್ಲದೇ ದೇಶದ ಅಭಿವೃದ್ದಿಗೆ ಕೈ ಜೋಡಿಸಿರಿ ಎಂದರು.

ವಿರೋಧಿಗಳು ಎಷ್ಟೋ ಬಾಯಿ ಬಡೆದಕೊಂಡರೂ ಗೆಲ್ಲುವುದು ಬಿಜೆಪಿ ಮತ್ತು ಮೋದಿ. ಆದರೆ ಎಷ್ಟೇ ಬಾರಿ ರಾಹುಲ್ ಗಾಂಧಿಯನ್ನು ಹೊಸ ಅವತಾರದಲ್ಲಿ ಲಾಂಚ್ ಮಾಡಿದರೂ ಮೇಲಕ್ಕೆ ಏಳುತ್ತಿಲ್ಲ. ಪಪ್ಪು ಫೇಲ್ ಹೋಗಯಿ ಎಂದು ಟಾಂಗ್ ನೀಡಿದ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜತೆ ಶಿವಸೇನಾ ಸರಕಾರ ಪಲ್ಟಿ ಮಾಡಬೇಕಾಯಿತು. ಮುಂದಿನ ದಿನಗಳಲ್ಲಿ ಇಲ್ಲಿಯೂ ಹಾಗೇ ಆಗಬಹುದು ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು, ಆದರೆ ಅಭಿವೃದ್ದಿ ಕಾರ್ಯಗಳೇ ಮಾಡುತ್ತಿಲ್ಲ. ಈಗ ನಮ್ಮ ಬಳಿ ಹಣವಿಲ್ಲ ಅನ್ನುತ್ತಿದ್ದಾರೆ. ಕರ್ನಾಟಕ ಸರಕಾರವು ರಾವಣ ರೂಪದಲ್ಲಿ ಇದ್ದು, ಈ ಸರಕಾರ ಕಿತ್ತು ಹಾಕಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ
ಆಗಬಹುದು. ಇದು ಈ ಚುನಾವಣೆಯ ಬಳಿಕ ಗೊತ್ತಾಗಲಿದೆ ಎಂದರು.

ಪ್ರಹ್ಲಾದ ಜೋಶಿ ಮಾತನಾಡಿ ವಿಶ್ವದಲ್ಲಿ ಭಾರತ ಇನ್ನಷ್ಟು ಉನ್ನತ ಮಟ್ಟಕ್ಕೆ ಏರಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದು, ಅದಕ್ಕಾಗಿ ಎಲ್ಲರೂ ಕೈ ಜೋಡಿಸಬೇಕು. ಅವರ ಮಾರ್ಗದರ್ಶನದಲ್ಲಿ ಧಾರವಾಡ ಜಿಲ್ಲೆಯನ್ನು ಕೂಡ ದೇಶದಲ್ಲಿ ಉನ್ನತಮಟ್ಟಕ್ಕೆ ಒಯ್ಯುತ್ತೇನೆ. ಇದಕ್ಕಾಗಿ ಈ ಸಲವು ಮತದಾರರು ಆರ್ಶೀವಾದ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಸಂಜಯ ಕಪಟಕರ ಸೇರಿದಂತೆ ಹಲವರು ಇದ್ದರು.

ಶಿಂಧೆ ಕರೆಸಿದ್ದು ಕನ್ನಡಿಗರಿಗೆ ಅವಮಾನ: ಲಾಡ್‌
ಕನ್ನಡ ನಾಡು-ನುಡಿಗೆ ಹಾಗೂ ಕಳಸಾ ಬಂಡೂರಿ, ಮಹದಾಯಿ ಯೋಜನೆಗೆ ಸದಾ ಅಡ್ಡಗಾಲು ಹಾಕುವ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ತಮ್ಮ ಪರ ಮತ ಕೇಳಲು ಕರೆಸಿರುವುದು ಕನ್ನಡಿಗರಿಗೆ ಮಾಡಿರುವ ಅವಮಾನ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.