ಕುಟುಂಬದ ಜತೆ ಕಾಲ ಕಳೆದ ಜೋಶಿ
Team Udayavani, Apr 25, 2019, 2:49 PM IST
ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಲೋಕಸಭೆ ಮತದಾನ ಮುಗಿದ ಮರುದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ನಿರಾಳರಾಗಿದ್ದರು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ಅವರು ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಬುಧವಾರ ಬೆಳಗ್ಗೆ ಯೋಗ ಮಾಡಿ, ದಿನಪತ್ರಿಕೆಗಳನ್ನು ಓದಿದ ನಂತರ ಕುಟುಂಬ ಸದಸ್ಯರೊಂದಿಗೆ ಕೆಲ ಸಮಯ ಕಳೆದ ಅವರು, ಮಡದಿ-ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವನೆ ಮಾಡಿದರು. ಕುಟುಂಬದ ಸದಸ್ಯರಿಗೆ ತಾವೇ ಚಹಾ ಮಾಡಿ ಕೊಟ್ಟರುವುದು ವಿಶೇಷ. ನಂತರ ಮಧ್ಯಾಹ್ನ 12:00ಗಂಟೆವರೆಗೆ ಮನೆಯಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಚರ್ಚಿಸಿದರು. ವಿವಿಧ ಬೂತ್‌ಗಳಲ್ಲಿ ಮತದಾನ ಪ್ರಮಾಣ ಕುರಿತು ಮಾಹಿತಿ ಪಡೆದರು.
ನಂತರ ಆತ್ಮೀಯರಿಬ್ಬರ ಮದುವೆಗಳಲ್ಲಿ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದರು. ಮಧ್ಯಾಹ್ನ 4:00 ಗಂಟೆಗೆ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಮತಗಳ ಲೆಕ್ಕಾಚಾರ ನಡೆಸಿದರು.
ಏ.25ರಂದು ಬೆಂಗಳೂರಿನಲ್ಲಿ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಸಂಜೆ 7:00ಗಂಟೆಯ ವಿಮಾನ ಮೂಲಕ ಬೆಂಗಳೂರಿಗೆ ತೆರಳಿದರು.
ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಿಲ್ಯಾಕ್ಸ್ ಮೂಡ್‌ನಲ್ಲಿದ್ದೇನೆ ಎಂದು ಹೇಳಲ್ಲ. ನಾನು ಸದಾ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡ ವ್ಯಕ್ತಿ. ಬುಧವಾರ ಬೆಳಗ್ಗೆ ಸ್ವಲ್ಪ ತಡವಾಗಿ ಎದ್ದಿದ್ದೇನೆ. ಆದರೂ ಕಾರ್ಯಕರ್ತರು ನಿರಂತರವಾಗಿ ಬರುತ್ತಿದ್ದು, ಅವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.
ಒತ್ತಡ ಹೇರಿ ಶ್ರುತಿ ಬಂಧನ: ವಿನಯ ಕುಲಕರ್ಣಿ ಎಂ.ಬಿ. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ಹೇರಿ, ಪಕ್ಷದ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನು ಬಂಧಿಸಿದ್ದಾರೆ. ಲಿಂಗಾಯತ ಧರ್ಮ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಬಂಧನಕ್ಕೊಳಪಡಿಸಲಾಗಿದೆ. ಲಿಂಗಾಯತ ಧರ್ಮ ಕುರಿತು ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಬೇಕು. ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗ ಅಧಿಕಾರಿ ದೂರು ನೀಡಿದರೆ ಮಾತ್ರ ಕ್ರಮ ಕೈಗೊಳ್ಳಬೇಕು. ಆದರೆ ವೈಯಕ್ತಿಕವಾಗಿ ನೀಡಿದ ದೂರನ್ನಾಧರಿಸಿ ಬಂಧನ ಮಾಡಲಾಗಿದೆ ಎಂದು ಆರೋಪಿಸಿದರು.
ಮಹಿಳೆಯ ಬಂಧನದಿಂದ ದೊಡ್ಡ ಸಾಧನೆ ಮಾಡಿದ್ದೇವೆಂದು ವಿನಯ ಕುಲಕರ್ಣಿ ಹಾಗೂ ಸಚಿವ ಎಂ.ಬಿ.ಪಾಟೀಲ ತಿಳಿದಿದ್ದಾರೆ. ಪ್ರತ್ಯೇಕ ಧರ್ಮಕ್ಕಾಗಿ ನಡೆಸಿದ ಹೋರಾಟಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಮುಂದೆಯೂ ಕೂಡ ನಿಮಗೆ ಸೂಕ್ತ ಪಾಠ ಕಲಿಸುತ್ತಾರೆ. ಬಿಜೆಪಿ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಿದೆ ಎಂದರು.
ಇಲ್ಲಿನ ಪೊಲೀಸ್ ವರಿಷ್ಠಾಧಿಕಾರಿ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.