ಪಡಿತರ ಸರಿಯಾಗಿ ವಿತರಿಸಲು ಖಾದರ ತಾಕೀತು
Team Udayavani, Mar 18, 2017, 2:50 PM IST
ಹುಬ್ಬಳ್ಳಿ: ಸರಕಾರದಿಂದ ಬಡವರಿಗೆ ತಲುಪಬೇಕಾದ ಆಹಾರಧಾನ್ಯವನ್ನು ಸರಿಯಾಗಿ ವಿತರಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ನೀವು ನಿಷ್ಕಿಯವಾಗಿ ಕುಳಿತುಕೊಂಡರೆ ಇನ್ನು ಸುಮ್ಮನಿರಲು ಸಾಧ್ಯವಿಲ್ಲ.
ಮಾರ್ಚ್ ತಿಂಗಳೊಳಗೆ ಎಲ್ಲ ಸಮಸ್ಯೆ ನಿವಾರಣೆ ಮಾಡಿ ಧಾರವಾಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೆಳಗಾವಿಗೆ ತೆರಳುವ ಮುನ್ನ ಇಲ್ಲಿನ ಪ್ರವಾಸಿ ಮಂದಿರದಲ್ಲಿ ರಾತ್ರಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಫಲಾನುಭವಿಗಳಿಗೆ ಸಮರ್ಪಕ ಪಡಿತರ ಆಹಾರಧಾನ್ಯ, ಸೀಮೆಎಣ್ಣೆ ವಿತರಿಸಲು ಎಷ್ಟು ದಿನಗಳು ಬೇಕು.
ಇನ್ನಿಲ್ಲದ ನೆಪಗಳನ್ನೆ ಇಟ್ಟುಕೊಂಡು ಮುಂದುವರಿಯುತ್ತ ಸಾಗಿದರೆ ಹೇಗೆ. ಈಗಲಾದರೂ ಸುಧಾರಣೆ ಮಾಡಿಕೊಳ್ಳಿ. ಇಲ್ಲವಾದರೆ ನಿಮ್ಮ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇದೇ ವೇಳೆ ಸಚಿವರು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಕರೆ ಮಾಡಿ, ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಸಮರ್ಪಕ ಪಡಿತರಧಾನ್ಯ ವಿತರಣೆ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಗಮನಿಸಬೇಕು.
ಪ್ರತಿ ತಿಂಗಳು ಅಂಕಿ-ಅಂಶ ಪಡೆದುಕೊಳ್ಳಬೇಕು ಹಾಗೂ ಅಧಿಕಾರಿಗಳ ಸಭೆ ನಡೆಸಿ ಬಡವರಿಗೆ ಸರಿಯಾಗಿ ಪಡಿತರ ವಿತರಣೆ ಆಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.
ಶಾಸಕ ಸಿ.ಎಸ್. ಶಿವಳ್ಳಿ, ಆಹಾರ ಇಲಾಖೆಯ ಉಪನಿರ್ದೇಶಕ ಸದಾಶಿವ ಮರ್ಜಿ ಹಾಗೂ ಇಲಾಖೆಯ ಅಧಿಕಾರಿಗಳು, ಪಡಿತರ ಆಹಾರಧಾನ್ಯ ಸರಬರಾಜು ಮಾಡುವ ಟ್ರಾನ್ಸ್‌ಪೊàರ್ಟ್ ಕಂಪನಿಗಳ ಗುತ್ತಿಗೆದಾರರು, ಪಡಿತರ ಆಹಾರ ಧಾನ್ಯಗಳ ಅಂಗಡಿಕಾರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.