ಕಳಸಾ-ಬಂಡೂರಿ: ಸಿಹಿ ಸುದ್ದಿ ನೀಡದಿದ್ದರೆ ಆತ್ಮಹತ್ಯೆ ಎಚ್ಚರಿಕೆ
Team Udayavani, Dec 14, 2017, 10:40 AM IST
ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ಮಾತುಕತೆಯ ಮೂಲಕ ಡಿ.15ರೊಳಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದು, ಹೇಳಿಕೆಗೆ ತಪ್ಪಿದ್ದಲ್ಲಿ ನಾಯಕರ ಮನೆ ಮುಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಎಚ್ಚರಿಸಿದ್ದಾರೆ.
ಬಿಜೆಪಿ ನಾಯಕರ ನಿವಾಸದ ಮುಂದೆ ಧರಣಿ ಮಾಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಡಿ.15ರೊಳಗೆ ಸಿಹಿ ಸುದ್ದಿ ತಿಳಿಸುವುದಾಗಿ ಭರವಸೆ ನೀಡಿದ್ದರು. ಬಿಜೆಪಿ ಮುಖಂಡರು ಸ್ಪಷ್ಟ ನಿರ್ಧಾರ ತಿಳಿಸದಿದ್ದಲ್ಲಿ ಡಿ.16ರಂದು ನರಗುಂದದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ನಿವಾಸ ಮುಂಭಾಗದಲ್ಲಿ ವಿಷ ಸೇವಿಸುವ ಮೂಲಕ ಆತ್ಮಹತ್ಯೆಗೆ ಮುಂದಾಗುತ್ತೇವೆ. ನಮ್ಮ ಸಾವಿಗೆ ಅವರೇ ಹೊಣೆಯಾಗುತ್ತಾರೆ ಎಂದು ವೀರೇಶ ಸೊಬರದಮಠ ಸ್ವಾಮೀಜಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.