ಕನಕವಾಡ ಶಾಲೆಯಲ್ಲಿ ಶಿಕ್ಷಕರೂ ಇಲ್ಲ, ಕಟ್ಟಡವೂ ಸರಿ ಇಲ್ಲ!
Team Udayavani, Jun 27, 2018, 5:04 PM IST
ಶಿರಹಟ್ಟಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯವನ್ನು ಒದಗಿಸಲಾಗುತ್ತದೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು
ಭಾಷಣ ಮಾಡುತ್ತಾರೆ. ಆದರೆ ಸರ್ಕಾರಿ ಶಾಲೆಯಲ್ಲಿ ಮೂಲ ಸೌಲಭ್ಯಗಳು ಇವೆಯೋ, ಇಲ್ಲವೋ ಎನ್ನುವುದರತ್ತ ಗಮನ ಹರಿಸುವುದಿಲ್ಲ.
ಕನಕವಾಡದ ಸರಕಾರದ ವಿದ್ಯಾಕೇಂದ್ರ ಈಗ ಹಲವು ಸಮಸ್ಯೆಗಳ ಆಗರವಾಗಿದೆ. ಸಮಸ್ಯೆಗಳನ್ನು ಪರಿಹರಿಸುವ ಗೋಜಿಗೆ ಯಾರು ಹೊಗುವುದಿಲ್ಲ. ಆದ್ದರಿಂದ ಸರ್ಕಾರಿ ಶಾಲೆಗಳ ಸ್ಥಿತಿ ದೇವರಿಗೆ ಪ್ರೀತಿ ಎಂಬುದಕ್ಕೆ ಸಮೀಪದ ಕನಕವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಂದು ಉತ್ತಮ ನಿದರ್ಶನ.
ಈ ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ನೂರಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಮಕ್ಕಳಿಗೆ ಅನುಸಾರವಾಗಿ ಶಿಕ್ಷಕರು ಇಲ್ಲದೆ ಕೇವಲ ಇಬ್ಬರು ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ 1, 2, 3ನೇ ತರಗತಿ ಮಕ್ಕಳಿಗೆ ಒಬ್ಬರು ಹಾಗೂ 4, 5ನೇ ತರಗತಿಗೆ ಇನ್ನೊಬ್ಬರಂತೆ ಕೇವಲ ಇಬ್ಬರು ಶಿಕ್ಷಕರು ಎಲ್ಲ ವಿಷಯಗಳನ್ನು ಬೋಧಿಸುತ್ತಾರೆ.
ಇದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯದೆ ನವೊದಯ, ಮೊರಾರ್ಜಿ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ಪಾಸಾಗಲು ಆಗುತ್ತಿಲ್ಲ, ಕೇವಲ ಕಾಟಾಚಾರಕ್ಕೆ ಶಾಲೆಯನ್ನು ತೆರೆಯಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ
ವ್ಯಕ್ತಪಡಿಸಿದರು. ಒಂದು ಕೊಠಡಿಯ ಛಾವಣಿ ಕಟ್ಟಿಗೆ ಮುರಿದು ಹಂಚುಗಳು ಬಿದ್ದು ಪುಡಿ ಪುಡಿಯಾಗಿವೆ. ಇನ್ನೆರಡು ಕೊಠಡಿಯಲ್ಲಿ 1 ರಿಂದ 5ನೇ ತರಗತಿಯವರೆಗೆ ಪಾಠ ಬೋಧನೆ ಮಾಡುತ್ತಿರುವುದು ವಿಷಾದಕರ ಸಂಗತಿ.
ಈ ಕುರಿತು ಹಲವಾರು ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೆ ಪ್ರಯೋಜನವಾಗಿಲ್ಲ. ಆದ್ದರಿಂದ ಕೂಡಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಶಾಲೆಯ ಜೀರ್ಣೋದ್ಧಾರಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಾಲೆಯನ್ನು ಸ್ಥಗಿತಗೊಳಿಸಿ ಉಗ್ರ
ಹೋರಾಟ ಮಾಡಲಾಗುವುದು ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಶಾಲೆಗೆ ಈಗಾಗಲೇ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದ್ದು. ಶಿಥಿಲಗೊಂಡ ಕೊಠಡಿ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೇ ಈ ಕುರಿತು ಶಾಸಕರೊಂದಿಗೆ ಮಾತನಾಡಿದ್ದು, ಸದ್ಯದಲ್ಲೆ ನೂತನ ಕಟ್ಟಡಕ್ಕೆ ಚಾಲನೆ
ನೀಡಲಾಗುವುದು. ಮತ್ತು ಶಿಕ್ಷಕರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ವಿ.ವಿ. ಶಾಲಿಮಠ ಪ್ರತಿಕ್ರಿಯಿಸಿದರು.
ಕೇವಲ 2 ಕೊಠಡಿಗಳಿರುವುದರಿಂದ ಮಕ್ಕಳಿಗೆ ಸರಿಯಾಗಿ ಪಾಠ ಮಾಡಲಾಗುತ್ತಿಲ್ಲ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಅಲ್ಲದೇ ಶಾಲೆಗೆ ಇನ್ನೂ
3 ಕೊಠಡಿಗಳು ನಿರ್ಮಾಣವಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವೀರೇಶರಡ್ಡಿ ಕಾಮರಡ್ಡಿ ಪ್ರತಿಕ್ರಿಯಿಸಿದರು.
ಅನೇಕ ವರ್ಷಗಳ ಹಿಂದೆಯೇ ಒಂದು ಕೊಠಡಿ ಶಿಥಿಲಗೊಂಡು ಬಿದ್ದು ಹೋಗಿದೆ. ಅಲ್ಲದೆ ಮಕ್ಕಳು ಅಲ್ಲಿಯೇ ಆಡುತ್ತಾರೆ. ಮೈ ಮರೆತರೆ ಅನಾಹುತ ಖಚಿತ. ಆದ್ದರಿಂದ ಕೂಡಲೆ ಅಧಿಕಾರಿಗಳು ಇತ್ತ ಗಮನ ಹರಿಸಿ ಶಿಥಿಲಗೊಂಡ ಕೊಠಡಿಗಳನ್ನು ತೆರವುಗೊಳಿಸಿ ಹೊಸ ಕೊಠಡಿ ನಿರ್ಮಿಸಬೇಕು.
ಗೋವಿಂದಪ್ಪ ನಿಚ್ಚಳದ,
ಮುಖ್ಯೋಪಾಧ್ಯಾಯ.
ಪ್ರಕಾಶ.ಶಿ.ಮೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.