ಕುಂದಗೋಳದಲ್ಲಿ ಸಂಭ್ರಮದ ಕರಿಬಂಡಿ ಉತ್ಸವ
Team Udayavani, Jun 28, 2018, 5:19 PM IST
ಕುಂದಗೋಳ: ಜಯ ಬ್ರಹ್ಮಲಿಂಗೋಮ, ನರಸಿಂಹಲಿಂಗೋಮ ಎಂಬ ಸಾವಿರಾರು ಭಕ್ತರ ಹರ್ಷೋದ್ಘಾರ ಹಾಗೂ ಜಯಘೋಷಗಳ ಮಧ್ಯೆ ಕರಿಬಂಡಿ ಉತ್ಸವ ಪಟ್ಟಣದಲ್ಲಿ ಬುಧವಾರ ಸಂಭ್ರಮದಿಂದ ಜರುಗಿತು. ಮುಂಜಾನೆ ರೈತರು ತಮ್ಮ ಜಾನುವಾರುಗಳನ್ನು ಸಿಂಗರಿಸಿಕೊಂಡು ವಾದ್ಯವೈಭವಗಳೊಂದಿಗೆ ಮೆರವಣಿಗೆ ಮೂಲಕ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಜೆ ಪಂಚಗ್ರಹ ಹಿರೇಮಠದ ಶಿತಿಕಂಠೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ಕಲ್ಯಾಣಪುರದ ಬಸವಣ್ಣಜ್ಜನವರು ಪಟ್ಟಣದ ಬಿಳೆಬಾಳ ಮನೆತನದ ಹಾಗೂ ಅಲ್ಲಾಪೂರ ಮನೆತನದ ಪರಂಪರಾಗತ ಕರಿ ಬಂಡಿಗಳಿಗೆ ಪೂಜಿಸುವ ಮೂಲಕ ಚಾಲನೆ ನೀಡಿದರು.
ಪೂಜೆಗೊಂಡ ಬಂಡಿಗಳು ಬ್ರಹ್ಮಲಿಂಗೇಶ್ವರ ಗುಡಿಗೆ ಆಗಮಿಸಿ ಪ್ರದಕ್ಷಿಣೆ ಹಾಕಿದವು. ನಂತರ ವೀರಗಾರರ ಮನೆಗೆ ತೆರಳಿ 14 ಜನ ವೀರಗಾರರನ್ನು ಬಂಡಿಯಲ್ಲಿ ಮೆರವಣಿಗೆ ಮೂಲಕ ಗುಡಿಗೆ ಕರೆತರುವ ದೃಶ್ಯ ನೋಡುಗರನ್ನು ಭಯ-ಭಕ್ತಿಯಲ್ಲಿ ತೇಲಿಸಿತು. ಭಕ್ತರು ಬ್ರಹ್ಮದೇವರಿಗೆ ದೀಡ ನಮಸ್ಕಾರ, ನೈವೇದ್ಯ, ಹಣ್ಣು, ಕಾಯಿ ಕರ್ಪುರಗಳನ್ನು ಸಲ್ಲಿಸುವ ಮೂಲಕ ಕಾರಹುಣ್ಣಿಮೆ ಕರಿಬಂಡಿ ಉತ್ಸವಕ್ಕೆ ಮೆರುಗು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.