ಕಾಲಮಿತಿ ಮೀರಿದರೆ ಕಪ್ಪು ಪಟ್ಟಿಗೆ
ತುಪ್ಪರಿ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ 150 ಕೋಟಿ ಟೆಂಡರ್ ಪ್ರಕ್ರಿಯೆ ಪೂರ್ಣ
Team Udayavani, Jun 21, 2022, 12:46 PM IST
ನವಲಗುಂದ: ನೂರಾರು ಕೋಟಿ ರೂ.ಅನುದಾನ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದ್ದು, ಗುತ್ತಿಗೆದಾರರು ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಬೇಕು. ಇಲ್ಲವಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಕೈಮಗ್ಗ ಮತ್ತು ಜವಳಿ ಕಬ್ಬು ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಾಕೀತು ಮಾಡಿದರು.
ತಾಪಂ ಸಭಾಭವನದಲ್ಲಿ ಸೋಮವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಗ್ರಾಮ ಸಡಕ್ ರಸ್ತೆ ಹಾಗೂ ಮುಖ್ಯ ಗ್ರಾಮೀಣ ರಸ್ತೆಗಾಗಿ 45 ಕೋಟಿಕ್ಕಿಂತಲೂ ಹೆಚ್ಚು ಕಾಮಗಾರಿಗಳ ಪ್ರಗತಿಯಲ್ಲಿದ್ದು, ಇದರ ಜತೆಗೆ ರೈತರಿಗೆ ಅವಶ್ಯವಾಗಿ ಬೇಕಿರುವ ಬೀಜ, ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ ಮಷಿನ್ ಕಾಮಗಾರಿ 72 ಗ್ರಾಮಗಳಲ್ಲಿ ಶೇ.80 ಮುಗಿದಿರುತ್ತದೆ. 400 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರಕ್ಕೆ ರೈತರ ಮನೆ ಬಾಗಿಲಿಗೆ ಕುಡಿಯುವ ನೀರು ತಲುಪಿಸಲಾಗುವುದು. ತುಪ್ಪರಿಹಳ್ಳ ಶಾಶ್ವತ ಪರಿಹಾರಕ್ಕಾಗಿ 321 ಕೋಟಿ ರೂ.ಗಳಲ್ಲಿ 150 ಕೋಟಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದು ಹೇಳಿದರು.
ತುಪ್ಪರಿಹಳ್ಳದಿಂದ 1 ಟಿಎಂಸಿ ನೀರು ಬಳಕೆ ಮಾಡಿ ಕೃಷಿ ಹಾಗೂ ಇತರೆ ಕೆಲಸಗಳಿಗೂ ಬಳಸಲು ಅನುಮೋದನೆ ಪಡೆಯಲಾಗಿದೆ. ಪಟ್ಟಣದ ವಾಲ್ಮೀಕಿ ಭವನಕ್ಕೆ 1 ಕೋಟಿ ರೂ. ಸೇರಿದಂತೆ ವಿವಿಧ ಸಮುದಾಯ ಭವನಗಳಿಗೆ ಹಣ ಮಂಜೂರು ಮಾಡಲಾಗಿದೆ ಎಂದರು.
ಅಣ್ಣಿಗೇರಿ ಪಟ್ಟಣಕ್ಕೆ 24?7 ಕುಡಿಯುವ ನೀರಿನ ಯೋಜನೆಗೆ 54 ಕೋಟಿ ರೂ.ಅನುದಾನ ಮಂಜೂರಾಗಿದೆ. ಗ್ರಾಮ ಸಡಕ್ ಯೋಜನೆಯಲ್ಲಿ ಹೊಲಗಳ ರೈತರ ರಸ್ತೆಗಳಿಗೆ 50 ಕೋಟಿ ರೂ. ಗಳನ್ನುವ್ಯಯಿಸಲಾಗಿದೆ ಎಂದರು.
ಈ ಮುಂಚೆ 265 ಶಾಲೆಗಳ ಹೊಸ ಕಟ್ಟಡಗಳ ಕಾಮಗಾರಿ ಶೇ.80 ಮುಗಿದಿರುತ್ತವೆ. ಶಲವಡಿ, ಹೆಬ್ಟಾಳ, ಅಣ್ಣಿಗೇರಿ, ನವಲಗುಂದ ಸೇರಿ ಉಳಿದ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಹಣ ವ್ಯಯಿಸಲಾಗಿದೆ ನವಲಗುಂದ ತಾಲೂಕಿನಲ್ಲಿ 4, ಅಣ್ಣಿಗೇರಿ ತಾಲೂಕಿನಲ್ಲಿ 8 ರುದ್ರಭೂಮಿಗಳಿಗೆ ಜಾಗೆ ಖರೀದಿಸಲಾಗಿದೆ. ಇನ್ನು 4 ರುದ್ರಭೂಮಿಗಳಿಗೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈಗಾಗಲೇ ವಿದ್ಯುತ್ 110 ಕೆ.ವಿ ಸ್ಟೇಷನ್ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೊಳ್ಳಲಿದೆ ಎಂದರು.
ಕೆ.ಡಿ.ಬಿ ಸಭೆಯಲ್ಲಿ ಇಒ ಎಸ್.ಎಮ್.ಕಾಂಬಳೆ, ತಹಶೀಲ್ದಾರ್ ಅನೀಲ ಬಡಿಗೇರ, ಅಣ್ಣಿಗೇರಿ ತಹಶೀಲ್ದಾರ್ ಮಂಜುನಾಥ ಅಮಾಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಮಾಯಾಚಾರ್ಯ, ಶಿವಯೋಗಿ ಬೆಳಹಾರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.