ಬೀಜ-ಗೊಬ್ಬರ ಕೊರತೆ ಬರದಂತೆ ನೋಡಿಕೊಳ್ಳಿ
Team Udayavani, Jun 6, 2017, 1:20 PM IST
ಧಾರವಾಡ: ಮುಂಗಾರು ಹಂಗಾಮಿನಲ್ಲಿ ಬೀಜ, ಗೊಬ್ಬರಗಳ ಕೊರತೆ ಎದುರಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಪಂ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ ಹಾಗೂ ಇಒ ಜೆ.ಡಿ.ಜೋಶಿ ತಾಕೀತು ಮಾಡಿದರು. ಇಲ್ಲಿಯ ಧಾರವಾಡ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ಮುಂಗಾರು ಹಂಗಾಮಿನ ತಯಾರಿ, ಮಳೆಯ ಮಾಹಿತಿ ಪಡೆದು ಕಳಪೆ ಬೀಜಗಳ ಕುರಿತು ಸಮಗ್ರವಾಗಿ ಪರಿಶೀಲನೆ ಕೈಗೊಳ್ಳಬೇಕು. ಅಂತಹ ಬೀಜಗಳ ಮಾರಾಟ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರೈತ ಕೇಂದ್ರಗಳಲ್ಲಿ ದಾಸ್ತಾನಾಗಿರುವ ಬೀಜ, ಗೊಬ್ಬರಗಳ ಕುರಿತ ಸಮಗ್ರ ಮಾಹಿತಿಯನ್ನು ಎಲ್ಲ ಗ್ರಾಮಗಳಲ್ಲಿ ಸರಿಯಾಗಿ ಪ್ರಚಾರ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಾಡಿಕೆಯಂತೆ ತಾಲೂಕಿನಲ್ಲಿ 143.5 ಮಳೆ ಆಗಬೇಕಿತ್ತು. ಆದರೆ 75.4 ಮಾತ್ರ ಆಗಿದೆ. ಈ ಮಳೆ ಬಿತ್ತನೆಗೆ ಉಪಯೋಗವಾಗುವುದಿಲ್ಲ. ಸದ್ಯ 200 ಹೆಕ್ಟೇರ್ ನೀರಾವರಿ ಭೂಮಿಯಲ್ಲಿ ಮಾತ್ರ ಬಿತ್ತನೆಯಾಗಿದೆ. ಧಾರವಾಡ, ಗರಗ, ನರೇಂದ್ರ, ಅಳ್ನಾವರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೀಜ ದಾಸ್ತಾನು ಕೇಂದ್ರಗಳನ್ನು ಆರಂಭಿಸಲಾಗಿದೆ.
ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಬೀಜಗಳ ಕೊರತೆ ಇಲ್ಲ. ಇದಲ್ಲದೇ ಮನಗುಂಡಿ ಗ್ರಾಮದಲ್ಲಿ ಹೆಚ್ಚುವರಿ ಮಾರಾಟ ಕೇಂದ್ರವನ್ನೂ ಆರಂಭಿಸಲಾಗಿದೆ. ಈ ಬಾರಿ ಮಧ್ಯಪ್ರದೇಶದಿಂದ ಸುಮಾರು 6 ಸಾವಿರ ಟನ್ ಸೋಯಾಬಿನ್ ಬೀಜ ಸರಬರಾಜು ಮಾಡಿಕೊಂಡು ರೈತರಿಗೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಕೆ. ಹಿರೇಮಠ ಸಭೆಗೆ ಮಾಹಿತಿ ನೀಡಿದರು.
ಅಧಿಕಾರಿಗೆ ತರಾಟೆ: ಮಾಹಿತಿ ನೀಡಲು ಬಂದ ಭೂ ಸೇನಾ ನಿಗಮದ ಅಧಿಕಾರಿಯನ್ನು ತಾಪಂ ಅಧ್ಯಕ್ಷರು ಹಾಗೂ ಇಒ ತರಾಟೆಗೆ ತೆಗೆದುಕೊಂಡರು. ನೀವು ಸ್ಥಾಪಿಸಿದ ಶುದ್ಧ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ನಿಮ್ಮ ಇಲಾಖೆಯಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ. ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯಲು ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಇದು ನಿಮಗೆ ಅಂತಿಮ ಗಡುವು.
ಮುಂದಿನ ಸಭೆಯಲ್ಲಿ ಘಟಕಗಳ ಬಗ್ಗೆ ಸದಸ್ಯರಿಂದ ದೂರು ಬರದಂತೆ ಕ್ರಮ ವಹಿಸುವಂತೆ ಎಚ್ಚರಿಕೆ ನೀಡಿದರು. ಕೆಎಸ್‌ಆರ್‌ಟಿ ಡಿಪೋ ವ್ಯವಸ್ಥಾಪಕರು ಸಭೆಗೆ ತಮ್ಮ ಕೆಳ ಅಧಿಕಾರಿಯನ್ನು ಕಳುಹಿಸಿದ ಮಾಹಿತಿ ತಿಳಿದ ಇಒ ಜೋಶಿ, ಸಭೆಗೆ ವ್ಯವಸ್ಥಾಪಕರು ಬರಬೇಕು. ಈ ಹಿಂದೆನೂ ಇದೇ ರೀತಿ ಮಾಡಿದ್ದರು.
ಸಭೆಗೆ ಬಂದವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಎಲ್ಲ ಇಲಾಖೆ ಅಧಿಕಾರಿಗಳು ಇದೇ ರೀತಿ ಮಾಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಮಹತ್ವದ ವಿಷಯಗಳನ್ನು ಚರ್ಚಿಸಲು ಸಭೆ ನಡೆಸುತ್ತೇವೆ ಹೊರತು ಮೋಜು ಮಾಡಲು ಅಲ್ಲ. ಮುಂದಿನ ಸಭೆಗೆ ಸರಿಯಾಗಿ ಹಾಜರಾಗುವಂತೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚಿಸಿದರು.
ವಾಟ್ಸ್ ಆ್ಯಪ್ ಗ್ರುಪ್ ರಚನೆ: ತಾ.ಪಂ. ಕೆಡಿಪಿ ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ. ಇದು ಕಾಟಾಚಾರಕ್ಕೆ ನಡೆಯುವ ಸಭೆಯಲ್ಲ ಎಂಬುದಾಗಿ ಎಚ್ಚರಿಸಿದ ತಹಶೀಲ್ದಾರ ಪ್ರಕಾಶ ಕುದರಿ, ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಒಂದು ವಾಟ್ಸ್‌ಆ್ಯಪ್ ಗ್ರುಪ್ ರಚನೆ ಮಾಡಲಾಗುತ್ತಿದ್ದು, ಆ ಮೂಲಕ ತಾಲೂಕಿನ ಸಮಸ್ಯೆ ಹಾಗೂ ಬೇಕು ಬೇಡಗಳ ಪರಿಶೀಲನೆ ನಡೆಯಲಿದೆ ಎಂದರು.
ಇನ್ನೇನು ರೈತರು ಬಿತ್ತನೆ ಪ್ರಕ್ರಿಯೆಯಲ್ಲಿ ತೊಡಗಲಿದ್ದು, ಎಲ್ಲೆಡೆ ಬೀಜ-ಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಈ ಪ್ರಯತ್ನಕ್ಕೆ ಕೈಜೋಡಿಸಬೇಕಿದ್ದು, ಯಾವುದೇ ಕಾರಣಕ್ಕೂ ತಮ್ಮ ಮೊಬೈಲ್‌ಗಳನ್ನು ಸ್ವೀಚ್‌ಆಪ್ ಮಾಡಬಾರದೆಂದು ಎಚ್ಚರಿಕೆ ನೀಡಿದರು. ಅಳ್ನಾವರದಲ್ಲಿ ವಿದ್ಯಾರ್ಥಿನಿಯರಿಗೆ ನಿರ್ಮಿಸಿರುವ ಹಾಸ್ಟೆಲ್ ಕಾಮಗಾರಿ ಪೂರ್ಣಗೊಂಡು 8-10 ತಿಂಗಳು ಕಳೆದರೂ ಅದನ್ನು ಬಳಕೆಗೆ ನೀಡುತ್ತಿಲ್ಲ.
ಕೂಡಲೇ ಅಧಿಕಾರಿಗಳು ಅಲ್ಲಿನ ಸಮಸ್ಯೆಯನ್ನು ಅರಿತು ಆದಷ್ಟು ಬೇಗ ಅದನ್ನು ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು. ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ತಾಲೂಕಿನಾದ್ಯಂತ ಹೆಚ್ಚು ಪ್ರಚಾರ ಪಡಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಬೇಕಿದೆ.ಈ ವಿಷಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಬಿಇಒ, ಹೆಸ್ಕಾಂ ಸೇರಿದಂತೆ ಎಲ್ಲ ಗ್ರಾಪಂ, ತಾಪಂ ಸದಸ್ಯರು ಹಾಗೂ ಅಧಿಕಾರಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮಾತನಾಡಿ, ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಭಾಗ್ಯಲಕ್ಷ್ಮೀ ಯೋಜನೆ ಸೌಲಭ್ಯ ಪಡೆಯಲು ಸಾಧ್ಯ. ಆದರೆ ಬಿಪಿಎಲ್ ಕಾರ್ಡ್‌ಗಳ ವಿತರಣೆ ಸ್ಥಗಿತವಾಗಿರುವ ಕಾರಣದಿಂದ ಕೆಲ ಫಲಾನುಭವಿಗಳು ಇದರ ಲಾಭ ಪಡೆಯಲು ಸಾಧ್ಯವಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.
ಶಿಕ್ಷಣ ಇಲಾಖೆ ಅಧಿಕಾರಿ ಮಾತನಾಡಿ, ಯೂನಿಫಾರ್ಮ್, ಪಠ್ಯಪುಸ್ತಕಗಳು ಹಾಗೂ ಸೈಕಲ್‌ಗಳು ಈಗಾಗಲೇ ಬಂದಿವೆ. ಈ ವಾರದಲ್ಲಿ ಎಲ್ಲ ಶಾಲೆಗಳಿಗೂ ತಲುಪಿಸಲಾಗುವುದು ಎಂದರು. ಉಳಿದಂತೆ ತೋಟಗಾರಿಕೆ, ಲೋಕೋಪಯೋಗಿ, ಸಣ್ಣ ನೀರಾವರಿ, ರೇಶೆ, ಆರೋಗ್ಯ, ಹೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.