ಆರೋಗ್ಯ ಸಮಸ್ಯೆಗಳತ್ತ ನಿಗಾ ಇಡಿ


Team Udayavani, Apr 17, 2020, 1:23 PM IST

ಆರೋಗ್ಯ ಸಮಸ್ಯೆಗಳತ್ತ ನಿಗಾ ಇಡಿ

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್‌-19 ಹೊರತುಪಡಿಸಿದಂತೆ ಇತರೆ ಜ್ವರ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿ ಮತ್ತು ತಾಯಂದಿರ ಆರೋಗ್ಯ, ಕ್ಷಯ ರೋಗ, ಕುಷ್ಠರೋಗ, ಹೆಚ್‌ ಐವಿ ಏಡ್ಸ್‌, ಮಧುಮೇಹ, ರಕ್ತದೊತ್ತಡದಂತಹ ಉಳಿದ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ನಿರಂತರವಾಗಿ ಚಿಕಿತ್ಸೆಗಳು ದೊರೆಯಬೇಕು. ಈ ಚಿಕಿತ್ಸಾ ಕ್ರಮದಲ್ಲಿ ಯಾವುದೇ ವ್ಯತ್ಯಯಗಳು ಉಂಟಾಗಬಾರದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಕಾರ್ಯಪಡೆಯ ಸಭೆ ಕೈಗೊಂಡು ಮಾತನಾಡಿದ ಅವರು, ಗರ್ಭಿಣಿ ಸ್ತ್ರೀಯರ ನೋಂದಣಿ, ತಾಯಿ ಕಾರ್ಡ್‌, ಚುಚ್ಚುಮದ್ದು ಕಾರ್ಡ್‌ಗಳ ವಿತರಣೆ, ಹೆರಿಗೆಯಾದ ಬಾಣಂತಿಯರ ಆರೋಗ್ಯ ವಿಚಾರಣೆ, ನವಜಾತ ಶಿಶುಗಳಿಗೆ ಬಿಸಿಜಿ, ಹೆಪೆಟೈಟಿಸ್‌, ಓಪಿವಿ ಸೇರಿದಂತೆ ಜನನ ಕಾಲದಲ್ಲಿ ನೀಡಬೇಕಾದ ಎಲ್ಲಾ ಲಸಿಕೆಗಳು ಸಮರ್ಪಕವಾಗಿ ನೀಡಬೇಕು ಎಂದರು.

196 ಮಕ್ಕಳಲ್ಲಿ ಅಪೌಷ್ಟಿಕತೆ: ಜಿಲ್ಲೆಯಲ್ಲಿ ತೀವ್ರತರವಾದ ಅಪೌಷ್ಟಿಕತೆಯಿಂದ ಬಳಲುತ್ತಿರುವ 196 ಮಕ್ಕಳಿಗೆ ಆರೋಗ್ಯ ಇಲಾಖೆಯ ಪೌಷ್ಟಿಕ ಪುನರ್ವಸತಿ ಕೇಂದ್ರಗಳಲ್ಲಿ ದಾಖಲಿಸಿಕೊಂಡು ಅವರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಮನೆಯಲ್ಲಿರುವ 6 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ಪದಾರ್ಥ ಪೂರೈಸಬೇಕು. ತಾಯಂದಿರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳನ್ನು ವೈದ್ಯಾಧಿಕಾರಿಗಳು, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೊದಲಿನಂತೆಯೇ ಮುಂದುವರಿಸಬೇಕು ಎಂದರು.

171 ಕ್ಷಯ ರೋಗಿಗಳು : ಜಿಲ್ಲೆಯಲ್ಲಿರುವ 171 ಕ್ಷಯ ರೋಗಿಗಳಿಗೆ ನೇರ ನಿಗಾ ಚಿಕಿತ್ಸೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ನೀಡಬೇಕು. ಪ್ರತಿದಿನ ದೂರವಾಣಿ ಮೂಲಕ ರೋಗಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ಅನುಷ್ಠಾನಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಇದಲ್ಲದೇ ಜಿಲ್ಲೆಯಲ್ಲಿರುವ ಹೆಚ್‌ಐವಿ/ಏಡ್ಸ್‌ ಸೋಂಕಿತರಿಗೆ ಎಆರ್‌ಟಿ ಕೇಂದ್ರಗಳಲ್ಲಿ ಚಿಕಿತ್ಸೆ ದೊರೆಯಬೇಕು. ಔಷ ಧಗಳನ್ನು ನೀಡಿ ಮೇಲ್ವಿಚಾರಣೆ ಮಾಡುತ್ತ ಕಾಲಕಾಲಕ್ಕೆ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದರು.

91 ಕುಷ್ಠ ರೋಗಿಗಳು: ಜಿಲ್ಲೆಯಲ್ಲಿ 91 ಕುಷ್ಠರೋಗ ಪೀಡಿತರಿದ್ದಾರೆ. ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲಾ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್‌ ಪೀಡಿತರ ಸಮೀಕ್ಷಾ ಕಾರ್ಯ ಕೈಗೊಂಡು ಅವರಿಗೆ 1 ತಿಂಗಳಿಗೆ ಸಾಕಾಗುವಷ್ಟು ಈಗಾಗಲೇ ಔಷಧ ನೀಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಧಿಕಾರಿಗಳು ಮುಂಬರುವ ದಿನಗಳಲ್ಲಿ ಬೇಕಾಗಬಹುದಾದ ಔಷಧಿ ನಿರೀಕ್ಷಿತ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಬೇಕು. ಇದರ ಜತೆಗೆ 125 ಜನ ಹಿಮೋಫಿಲಿಯಾ, 56 ಜನ ತಲಸ್ಸಿಮಿಯಾ ಸಮಸ್ಯೆಗಳಿಂದ ಬಳಲುತ್ತಿರುವವರ ಬಗ್ಗೆ ದಾಖಲೆಗಳಿವೆ. ಅವರಿಗೆ ಅಗತ್ಯ ಚಿಕಿತ್ಸೆ ನೀಡಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಸಮೀಕ್ಷಾ ಕಾರ್ಯ: ಜಿಲ್ಲೆಯಲ್ಲಿರುವ 1025 ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯಾದ್ಯಂತ ಪ್ರತಿ ಮನೆಗಳಿಗೂ ತೆರಳಿ, ವಿದೇಶಗಳಿಂದ, ಬೇರೆ ರಾಜ್ಯಗಳಿಂದ ಬಂದವರು, ಜ್ವರ, ಕೆಮ್ಮು, ಶ್ವಾಸಕೋಶದ ಸಮಸ್ಯೆ ಇರುವವರನ್ನು ಗುರುತಿಸಿ, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಬೇಕು. ಜ್ವರದ ಜತೆಗೆ ಕೆಮ್ಮು ಮತ್ತು ಶ್ವಾಸಕೋಶದ ತೊಂದರೆಗಳಿದ್ದರೆ ಮಾತ್ರ ಮುಂದಿನ ಹಂತದ ಪರೀಕ್ಷೆಗೆ ಶಿಫಾರಸು ಮಾಡಬೇಕು. ಕೋವಿಡ್‌-19 ಹೊರತುಪಡಿಸಿದ ಉಳಿದ ಕಾರ್ಯಕ್ರಮಗಳು ಯಥಾವತ್ತಾಗಿ ಮುಂದುವರಿಯಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಜಿಲ್ಲೆಯಾದ್ಯಂತ ಪ್ರತಿ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡುವ ಕಾರ್ಯ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾ ಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ್‌ ಮಾತನಾಡಿ, ಮುಂಬರುವ ದಿನಗಳಲ್ಲಿ ಬೇಕಾಗಬಹುದಾದ ಔಷಧ ಮತ್ತು ಆರೋಗ್ಯ ಸಾಮಗ್ರಿಗಳನ್ನು ಸರ್ಕಾರದ ನಿಯಮಾವಳಿಗಳ ಪ್ರಕಾರ ಖರೀದಿಸಿ ಸಾಕಷ್ಟು ಪ್ರಮಾಣದಲ್ಲಿ ಕಾಯ್ದಿರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶಿವಕುಮಾರ್‌ ಮಾನಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಸುಜಾತಾ ಹಸವೀಮಠ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ|ಎಸ್‌.ಎಂ. ಹೊನಕೇರಿ, ವಿವಿಧ ಕಾರ್ಯಕ್ರಮ ಅಧಿಕಾರಿಗಳಾದ ಡಾ|ಶಶಿ ಪಾಟೀಲ, ಡಾ|ತನುಜಾ ಸೇರಿದಂತೆ ವೈದ್ಯಾಧಿಕಾರಿಗಳು ಇದ್ದರು.

ಕೋವಿಡ್ 19 ವಿರುದ್ಧ ಹೋರಾಟದಲ್ಲಿ ಕಂಟೈನ್‌ ಮೆಂಟ್‌ ಪ್ರದೇಶ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳಗಳಲ್ಲಿ ಮಾಹಿತಿ ಸಂಗ್ರಹಿಸಲು ಹಾಗೂ ಲಾಕ್‌ಡೌನ್‌ ಜಾರಿಗೊಳಿಸಲು ಶ್ರಮಿಸುತ್ತಿರುವ ಆರೋಗ್ಯ, ಪೊಲೀಸ್‌, ಕಂದಾಯ ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಮತ್ತು ಪಟ್ಟಣಗಳ ನೈರ್ಮಲ್ಯಕ್ಕೆ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಆರೋಗ್ಯ ರಕ್ಷಣೆಗಾಗಿ ಮುಂಜಾಗೃತಾ ಕ್ರಮವಾಗಿ ಹೈಡ್ರಾಕ್ಸಿ ಕ್ಲೋರೊಕ್ವಿನ್‌ ಮಾತ್ರೆಗಳನ್ನು ವೈದ್ಯಕೀಯ ಸಲಹೆ ಮೇರೆಗೆ ನೀಡಬೇಕು. ಮಾಸ್ಕ್, ಸ್ಯಾನಿಟೈಸರ್‌ ಹಾಗೂ ಕೈಗವಸುಗಳನ್ನು ನೀಡಬೇಕು. – ದೀಪಾ ಚೋಳನ್‌, ಡಿಸಿ, ಧಾರವಾಡ

ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಅವಶ್ಯವಿರುವವರಿಗೆ ಸೇವೆ ಲಭ್ಯವಾಗುತ್ತಿದೆ. ಜಿಲ್ಲೆಯಲ್ಲಿ ತುರ್ತು ಆರೋಗ್ಯ ಸೇವೆ ನೀಡುವ 108 ಯೋಜನೆಯ 22 ವಾಹನಗಳು ಕಾರ್ಯ ನಿರ್ವಹಿಸುತ್ತಿವೆ. ಆರೋಗ್ಯ ಇಲಾಖೆಯ 18 ಆಂಬ್ಯುಲನ್ಸ್‌ಗಳಿವೆ. ಅವುಗಳಲ್ಲಿ 5 ವಾಹನಗಳನ್ನು ಕೋವಿಡ್‌-19 ಶಂಕಿತರ ಚಿಕಿತ್ಸೆಗೆ ಮೀಸಲಿರಿಸಲಾಗಿದೆ. -ಡಾ|ಯಶವಂತ ಮದೀನಕರ, ಜಿಲ್ಲಾ ಆರೋಗ್ಯಾಧಿಕಾರಿ, ಧಾರವಾಡ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.