ಕಳಸಾ-ಬಂಡೂರಿ: ಶೀಘ್ರ ಈ ಭಾಗದ ಸಂಸದರ ಸಭೆ ಕರೆಯುವೆ
Team Udayavani, May 26, 2017, 3:07 PM IST
ಹುಬ್ಬಳ್ಳಿ: ಕಳಸಾ-ಬಂಡೂರಿ, ಮಹದಾಯಿ ಯೋಜನೆ ಕುರಿತಾಗಿ ಈ ಭಾಗದ ಸಂಸದರ ಸಭೆ ಕರೆದು ಚರ್ಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಕಳಸಾ-ಬಂಡೂರಿ, ಮಹದಾಯಿ ಹೋರಾಟ ಸಮಿತಿಯವರು ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು.
ಯೋಜನೆ ಜಾರಿಗೆ ಒತ್ತಾಯಿಸಿ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಬಿಜೆಪಿ ನಾಯಕರಿಂದ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ಸ್ಥಳೀಯ ಬಿಜೆಪಿ ನಾಯಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರಲ್ಲದೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ವಿವಾದ ನ್ಯಾಯಾಧಿಕರಣದಲ್ಲಿದೆ.
ತೀರ್ಪು ಬರುವವರೆಗೆ ಕಾಯೋಣ ಎಂದು ಯಡಿಯೂರಪ್ಪ ಅವರ ಹೇಳಿದಾಗ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೋರಾಟಗಾರರು, ಪ್ರಧಾನಿ ಮಧ್ಯಸ್ಥಿಕೆಯೊಂದಿಗೆ ರಾಜಿ ಸಂಧಾನ ಮೂಲಕ ಇತ್ಯರ್ಥಕ್ಕೆ ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.
ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರು ಇದೇ ಕಳಸಾ-ಬಂಡೂರಿಗಾಗಿ ಹೋರಾಟ ಮಾಡಿದ್ದು, ಇದೀಗ ಅವರು ಯೋಜನೆ ಕುರಿತಾಗಿ ಮರೆತವರಂತೆ ವರ್ತಿಸುತ್ತಿದ್ದಾರೆ ಎಂದು ಹೋರಾಟಗಾರರು ಆರೋಪಿಸಿದರು. ಪ್ರಧಾನಿ ಮಧ್ಯಪ್ರವೇಶ ಸಾಧ್ಯವಾಗದು.
ಮೊದಲು ಈ ಭಾಗದ ಸಂಸದರ ಸಭೆ ಕರೆದು ಚರ್ಚಿಸುತ್ತೇನೆ. ಅನಂತರ ಕೇಂದ್ರದ ಮನವೊಲಿಕೆ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ರೈತರ ಸಾಲ ಮನ್ನಾ ವಿಚಾರವನ್ನು ಹೋರಾಟಗಾರರು ಪ್ರಸ್ತಾಪಿಸಿದಾಗ, ಯಡಿಯೂರಪ್ಪ ಅವರು ರಾಜ್ಯ ಸರಕಾರ ಮೊದಲು ರೈತರ ಸಾಲ ಮನ್ನಾ ಮಾಡಲಿ ಎಂದಾಗ,
ಹೋರಾಟಗಾರರು ರಾಜ್ಯ ಸರಕಾರದ ಅಡಿಯಲ್ಲಿ ಶೇ.20ರಷ್ಟು ಮಾತ್ರ ರೈತರ ಸಾಲ ಇದ್ದು, ಶೇ.80ರಷ್ಟು ಸಾಲ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಇದ್ದು, ಕೇಂದ್ರ ಸರಕಾರ ಸಾಲ ಮನ್ನಾಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕೇಂದ್ರದ ನಿರ್ಧಾರ ಇಡೀ ದೇಶಕ್ಕೆ ಅನ್ವಯವಾಗುವುದರಿಂದ ಎಲ್ಲ ಸಾಧಕ-ಬಾಧಕ ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು.
ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ, ಬಸವರಾಜ ಬೊಮ್ಮಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಚೈತ್ರಾ ಶಿರೂರು, ಎಸ್.ಐ.ಚಿಕ್ಕನಗೌಡ್ರ, ಹೋರಾಟ ಗಾರರಾದ ಸುಭಾಸಗೌಡ ಪಾಟೀಲ, ವೀರಣ್ಣ ಮಳಗಿ, ಅಮೃತ ಇಜಾರಿ, ಹೇಮನಗೌಡ, ಸಂಜೀವ ದುಮ್ಮಕನಾಳ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.