ಕಾರ್ತಿಕ ಮಾಸದಲ್ಲಿ ಅಲ್ಲೋಲ-ಕಲ್ಲೋಲ: ಕೋಡಿಮಠದ ಶ್ರೀ ಭವಿಷ್ಯ
Team Udayavani, Oct 6, 2022, 10:21 AM IST
ಧಾರವಾಡ: ಕಾರ್ತಿಕ ಮಾಸದಲ್ಲಿ ಪ್ರಕೃತಿಯಲ್ಲಿ ಅಲ್ಲೋಲ-ಕಲ್ಲೋಲ ಆಗಲಿದ್ದು, ಈಗಾಗಲೇ ಸಾಕಷ್ಟು ಮಳೆಯಾಗಿದ್ದರೂ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಲಕ್ಷಣವಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಯೋಗೀಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯೂ ಮಳೆಯ ಲಕ್ಷಣವಿದ್ದು, ಕಾರ್ತಿಕ ಮಾಸದಲ್ಲಿ ಜನರಿಗೆ ತುಸು ಹೆಚ್ಚು ತೊಂದರೆ ಆಗುವ ಸಾಧ್ಯತೆಗಳಿವೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣ ಇದೆ. ಇದಲ್ಲದೆ ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಭೂಮಿಯಲ್ಲಿ ಇರುವ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಪ್ರಕೃತಿ ಅಲ್ಲೋಲ, ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಮಳೆ, ಗಾಳಿ, ಗುಡುಗು, ಜನರಲ್ಲಿ ಅಶಾಂತಿ, ಭೂಮಿ ನಡುಗುವುದು, ಕುಸಿಯುವುದರ ಕುರಿತು ಈ ಹಿಂದೆಯೇ ಹೇಳಿದ್ದೆ. ಮುಂದೆಯೂ ಅದೇ ಪರಿಸ್ಥಿತಿ ಎದುರಾಗಲಿದೆ. ಕಾಡಿನಿಂದ ನಾಡಿನತ್ತ ಪ್ರಾಣಿಗಳು ಬರುತ್ತವೆ. ಈ ಸಂವತ್ಸರದ ಕೊನೆಯವರೆಗೂ ಈ ತೊಂದರೆ ಇದೆ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದ್ದು, ಅಪಮೃತ್ಯು ಹೆಚ್ಚಾಗಲಿವೆ. ಒಂದೆಡೆ ಪ್ರಕೃತಿ ವಿಕೋಪ ಇನ್ನೊಂದೆಡೆ ಮತಾಂಧತೆ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ, ಕಲಹಗಳು ನಡೆಯಲಿವೆ ಎಂದರು.
ಈ ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗಲ್ಲ. ಗುಡ್ಡಗಳ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ನೋವಾಗುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಯುಗಾದಿ ಕೊನೆವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಸಾವು ನೋವು ಸಂಭವಿಸುತ್ತವೆ. ಮುಂದಿನ ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿವೆ ಎಂದರು.
ಇನ್ನೊಂದು ವರ್ಷದಲ್ಲಿ ಕೋವಿಡ್ ವೈರಾಣು ಹೋಗುತ್ತದೆ. ಹೋಗುವಾಗ ವಿಪರೀತ ಕ್ಷಾಮ, ದುಃಖ ಕೊಡುತ್ತದೆ. ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಜಗತ್ತಿನ ಇತಿಹಾಸದಲ್ಲೇ ಇಂತಹ ಕಾಯಿಲೆ ಬಂದಿಲ್ಲ. ಕಷ್ಟ ಬಂದಾಗ ದೇವರನ್ನು ನೆನಸಿಕೊಳ್ಳುತ್ತಾರೆ. ಮಠ-ಮಂದಿರಕ್ಕೆ ಹೋಗುತ್ತಾರೆ. ಆದರೆ ಮಠ, ಮಂದಿರಕ್ಕೂ ಕೋವಿಡ್ ಬಂತು. ಇದು ಬರುವ ಜನವರಿ ನಂತರ ಮತ್ತೂಂದು ರೂಪದ ಲಕ್ಷಣ ತರುತ್ತದೆ. ಆದರೂ ಹೋಗುವಾಗ ಬಹಳ ಕಷ್ಟ ಕೊಡುತ್ತದೆ. -ಕೋಡಿಮಠ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.