ಐ.ಜಿ.ಸನದಿ ಬೆಂಬಲ ಕೋರಿದ ಕುಲಕರ್ಣಿ
Team Udayavani, Apr 4, 2019, 4:25 PM IST
ಹುಬ್ಬಳ್ಳಿ: ತೀವ್ರ ಪೈಪೋಟಿಯ ನಡುವೆ ಕೊನೆಯ ಹಂತದಲ್ಲಿ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಮುಖಂಡರು ಬುಧವಾರ ಇಲ್ಲಿನ ವಿಶ್ವೇಶ್ವರ ನಗರದಲ್ಲಿರುವ ಮಾಜಿ ಸಂಸದ ಐ.ಜಿ.ಸನದಿ ಅವರ ನಿವಾಸಕ್ಕೆ ತೆರಳಿ ಬೆಂಬಲ ಕೋರಿದರು.
ಪ್ರಸಕ್ತ ಲೋಕಸಭಾ ಚುನಾವಣೆ ನಿಮ್ಮ ಮುಂದಾಳತ್ವ ಹಾಗೂ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು. ಟಿಕೇಟ್‌ಗಾಗಿ ಬೇಡಿಕೆ ಸಲ್ಲಿಸುವುದು ಪ್ರತಿಯೊಬ್ಬರಿಗೆ ಹಕ್ಕಿದೆ.
ಆದರೆ ಪಕ್ಷ ಗುರುತಿಸುವ ಅಭ್ಯರ್ಥಿ ಪರ ಚುನಾವಣೆ ಮಾಡುವುದು ಪಕ್ಷದ ಪ್ರಾಮಾಣಿಕ ಕಾರ್ಯಕರ್ತರ
ಕರ್ತವ್ಯ. ಟಿಕೆಟ್‌ಗಾಗಿ ನಡೆದ ಕಾದಾಟ ಮನಸ್ಸಿನಲ್ಲಿಟ್ಟುಕೊಳ್ಳದೆ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಮಾಡುವಂತೆ ಮುಖಂಡರು ಶಾಕೀರ ಸನದಿ ಅವರಲ್ಲಿ ಮನವಿ ಮಾಡುವ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದರು.
ಮಾಜಿ ಸಂಸದ ಐ.ಜಿ.ಸನದಿ ಮಾತನಾಡಿ, ನಾವು ಕಾಂಗ್ರೆಸ್‌ನ ಪ್ರಾಮಾಣಿಕ ಕಾರ್ಯಕರ್ತರು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಶಾಕೀರ್‌ಗೆ ಟಿಕೆಟ್ ದೊರಕಿದಷ್ಟೇ ಸಂತಸವಾಗಿದೆ. ಇದು ನನ್ನ ಮಗನ ಚುನಾವಣೆ ಎಂದು ಹಿಂದಿನ ಎರಡು ಚುನಾವಣೆ ಮಾಡಿದಂತೆ ಈ ಚುನಾವಣೆಯನ್ನು ಪ್ರಾಮಾಣಿಕವಾಗಿ ಮಾಡುವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಮಾತನಾಡಿ, ಮುಸ್ಲಿಂ ಸಮಾಜಕ್ಕೆ ದ್ರೋಹ ಮಾಡಬೇಕೆನ್ನುವ ಉದ್ದೇಶ ನನ್ನದಲ್ಲ. ನನ್ನ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದ ಸ್ಥಾನಗಳಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ನನ್ನ ಬಗ್ಗೆ ಯಾವುದೇ ಅಪಾರ್ಥ ಮಾಡಿಕೊಳ್ಳುವುದು ಬೇಡ. ಸನದಿ ಸಾಹೇಬರು ಹಾಗೂ ಶಾಕೀರ್ ಸನದಿ ಅವರ ಪಕ್ಷದಲ್ಲಿನ ಪ್ರಾಮಾಣಿಕ ಸೇವೆ ಪಕ್ಷ ಮಹತ್ವದ ಸ್ಥಾನ ನೀಡುತ್ತದೆ ಎನ್ನುವ
ಭರವಸೆಯಿದೆ ಎಂದರು.
ಬೆಂಬಲಿಗರ ಆಕ್ರೋಶ: ಸನದಿ ಅವರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ ಸಂದರ್ಭದಲ್ಲಿ ಶಾಕೀರ್ ಸನದಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಂ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್‌ನ ಮತ ಬ್ಯಾಂಕಿಗಾಗಿ ಮಾತ್ರ ನಮ್ಮ ಸಮಾಜವನ್ನು ಪರಿಗಣಿಸಿ ತುಳಿಯುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಪಕ್ಷ ನೀಡಿರುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿರಬೇಕು ಎಂದು ಮಾಜಿ ಸಂಸದ ಐ.ಜಿ.ಸನದಿ ಸಮಾಧಾನ ಪಡಿಸಿದರು. ಮುಖಂಡರಾದ ವೀರಣ್ಣ ಮತ್ತಿಕಟ್ಟಿ, ಶಾಕೀರ್ ಸನದಿ, ಬಷೀರ್ ಅಹ್ಮದ್ ಗುಡಮಾಲ್, ಬಂಗಾರೇಶ ಹಿರೇಮಠ, ರಜತ ಉಳ್ಳಾಗಡ್ಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.