23ರಂದು ಕುಮಾರ ಪಥ-2018
Team Udayavani, Jul 18, 2017, 12:50 PM IST
ಹುಬ್ಬಳ್ಳಿ: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಭಾಗದ ಜನರ ಜೊತೆ ಸಂವಾದ ನಡೆಸುವ “ಕುಮಾರ ಪಥ-2018 ಚಿಂತನ-ಮಂಥನ’ ಕಾರ್ಯಕ್ರಮವನ್ನು ಜು. 23ರಂದು ಬೆಳಗ್ಗೆ 9 ಗಂಟೆಗೆ ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಕಾಲೇಜು ಆವರಣದ ಸನ್ನಿಧಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಜೆಡಿಎಸ್ ಮುಖಂಡ ರಾಮನಾಥ ಶೆಣೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಅಭಿಮಾನಿ ಬಳಗದ ಸಾಮಾಜಿಕ ಜಾಲತಾಣಗಳ ಕಾರ್ಯಕರ್ತರ ವೇದಿಕೆ ಚಿಂತನ-ಮಂಥನ ಸಂವಾದ ಹಮ್ಮಿಕೊಂಡಿದ್ದು, ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಾದ ಮಹದಾಯಿ, ಕಳಸಾ-ಬಂಡೂರಿ, ರೈತರ, ಶೈಕ್ಷಣಿಕ, ಉದ್ಯೋಗ, ಕೈಗಾರಿಕೆ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ. ಆಸಕ್ತರು https://goo.gl/forms/ MdFPUibipuLmowOE2 ಆನ್‌ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಸಬೇಕು.
ಈವರೆಗೆ 2200 ಜನ ನೋಂದಣಿ ಮಾಡಿಸಿದ್ದು, 4000 ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಂದು ದಿನ ಮುಂಚಿತವಾಗಿ ನೋಂದಣಿ ಸ್ಥಗಿತಗೊಳ್ಳಲಿದೆ. ಮುಂದಿನ ದಿನಗಳಲ್ಲಿ ರಾಯಚೂರು, ಕಲಬುರಗಿ ಮುಂತಾದೆಡೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ನಾಗನಗೌಡ ಪಾಟೀಲ, ಮೋಹನ ಅರ್ಕಸಾಲಿ, ರೋಷನ್ ಬಾವಜಿ, ನವೀನ ಮುನಿಯಪ್ಪನವರ, ಶ್ರೀಧರ ಬಿಡಕಣ್ಣವರ, ಅಶಕ ಮುಲ್ಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.