ಸಿದ್ದು ಭಯದಲ್ಲಿ ಕುಮಾರಸ್ವಾಮಿ: ಜೋಶಿ
•ಸರ್ಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬ ಚಿಂತೆಯಲ್ಲಿ ಸಿಎಂ•ರಾಜ್ಯದ ಜನರ ಬಗ್ಗೆ ಕಿಂಚಿತ್ ಕಾಳಜಿಯಿಲ್ಲ
Team Udayavani, May 8, 2019, 10:15 AM IST
ಧಾರವಾಡ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಮ್ಮ ಮಕ್ಕಳು ಚುನಾವಣೆಯಲ್ಲಿ ಗೆಲ್ತಾರೋ ಇಲ್ಲವೋ, ಸಿದ್ದರಾಮಯ್ಯನವರು ಸರ್ಕಾರಕ್ಕೆ ಏನು ಮಾಡ್ತಾರೋ ಎಂಬ ಗಾಬರಿಯಲ್ಲಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬ ಚಿಂತೆಯಲ್ಲಿ ಸಿಎಂ ಇದ್ದರೆ, ಅವರನ್ನು ಕೆಡವಿ ನಾವು ಹೇಗೆ ಬರೋದು? ಎಂಬ ಚಿಂತೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ. ಸಿಎಂಗೆ ರಾಜ್ಯದ ಬರದ ಬಗ್ಗೆ ಚಿಂತೆ ಇಲ್ಲ. ಸಿಎಂ ಸೇರಿ ಯಾರೂ ಬರಗಾಲದ ಬಗ್ಗೆ ಚಿಂತೆ ಮಾಡುತ್ತಿಲ್ಲ. ದುರ್ದೈವವೆಂದರೆ ಮಳೆ ಬರಲಿ ಅಥವಾ ಒಳ್ಳೆಯದಾಗಲಿ ಎಂದು ಎಲ್ಲರೂ ಪೂಜೆ ಮಾಡಿಸುತ್ತಾರೆ. ಆದರೆ ಇವರು ತಮ್ಮ ಮಕ್ಕಳು ಚುನಾವಣೆಯಲ್ಲಿ ಗೆಲ್ಲಲಿ ಸಿಎಂ ಹೋಮ-ಹವನ ಮಾಡಿಸುತ್ತಾರೆ. ಇಂತಹ ಮೋಜು ಮಸ್ತಿ ಮಾಡುವ ಸರ್ಕಾರದ ನೀತಿಯನ್ನು ನಾವು ಖಂಡಿಸುತ್ತೇವೆ ಎಂದರು.
ಸಿದ್ದರಾಮಯ್ಯನವರು ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಚೋರ್ ಎಂದು ಕರೆದಿದ್ದಾರೆ. ರಾಜೀವಗಾಂಧಿ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್‌ನವರಿಗೆ ಬೆಂಕಿ ಹತ್ತಿದೆ. ನಕಲಿ ಗಾಂಧಿಗಳು ಈ ದೇಶವನ್ನು ಲೂಟಿ ಮಾಡಿದ್ದಾರೆ. ಕಳ್ಳರ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ ಎಂದರು.
ಸಿದ್ದರಾಮಯ್ಯನವರಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಹಿಂದೆ ಜೆ.ಎಚ್. ಪಟೇಲರು ಹಾಗೂ ನೀವು ಸೋನಿಯಾ ಗಾಂಧಿ ಹಾಗೂ ರಾಜೀವಗಾಂಧಿಗೆ ಯಾವ ರೀತಿ ಮಾತನಾಡಿದ್ದೀರಿ ಅಂತಾ ನೆನಪಿಟ್ಟುಕೊಳ್ಳಿ. ಅವರಿಗೆ ಕಳ್ಳರು-ಸುಳ್ಳರು ಅಂತ ಹೇಳಿದ್ರಿ. ಈಗ ಒಬ್ಬ ಧೀಮಂತ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡಿದ್ದು, ಇದಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ. ನಿಮ್ಮಂತೆ ನಮಗೂ ಮಾತನಾಡೋಕೆ ಬರುತ್ತೆ, ಆದರೆ ಅದು ನಮ್ಮ ಸಂಸ್ಕೃತಿ ಅಲ್ಲ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗೆಲ್ಲುತ್ತೇವೆ, ದೇಶದಲ್ಲಿ ನಿಚ್ಚಳ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.