ಎಚ್.ಡಿ. ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಗಿರಾಕಿ: ಸಿದ್ದರಾಮಯ್ಯ
Team Udayavani, Oct 18, 2021, 5:36 AM IST
ಹುಬ್ಬಳ್ಳಿ ನಾನು ಅಲ್ಪಸಂಖ್ಯಾಕರ ವಿರೋಧಿ ಎಂದು ಎಚ್.ಡಿ. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದು. ಇವುಗಳಿಗೆಲ್ಲ ಪ್ರತಿಕ್ರಿಯೆ ನೀಡದಿರಲು ನಿರ್ಧರಿಸಿದ್ದೇನೆ. ಎಚ್‌ಡಿಕೆ ಯಾವಾಗಲೂ ಹಿಟ್ ಆ್ಯಂಡ್ ರನ್ ಗಿರಾಕಿ ಎಂದು ಸಿದ್ದರಾಮಯ್ಯ ಟೀಕಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕುಮಾರಸ್ವಾಮಿ ಹೇಳಿಕೆ ಯಿಂದ ನನಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದರು.
ಆರೆಸ್ಸೆಸ್ ಕೋಮುವಾದಿ ಸಂಘಟನೆ. ನಾನು ರಾಜಕೀಯಕ್ಕೆ ಬಂದಾಗಿನಿಂದ 1971ರಿಂದಲೇ ಆರೆಸ್ಸೆಸ್ಸನ್ನು ವಿರೋಧಿಸುತ್ತಿದ್ದೇನೆ. 1925ರಿಂದ ಇಲ್ಲಿಯವರೆಗೆ ಅವರ ಇತಿಹಾಸ ನೋಡಿದರೆ ದೇಶ ಮತ್ತು ಸಮಾಜ ವಿಭಜನೆ ಕೆಲಸ ಮಾಡುತ್ತಿದ್ದಾರೆ ವಿನಾ ಒಗ್ಗೂಡಿಸುವವರಲ್ಲ. ಬಿಜೆಪಿಯಲ್ಲಿ ಒಬ್ಬ ಮುಸ್ಲಿಂ ಎಂಎಲ್‌ಎ ಇದ್ದಾರೆಯೇ? ಆರೆಸ್ಸೆಸ್‌ನಲ್ಲಿ ಮುಸ್ಲಿಂ-ಕ್ರಿಶ್ಚಿಯನ್‌ರನ್ನು ಸದಸ್ಯರನ್ನಾಗಿ ಮಾಡಿಕೊಂಡಿಲ್ಲ. ಇದು ಅಲ್ಪಸಂಖ್ಯಾಕರ ವಿರೋಧಿಯಾಗಿದೆ ಎಂದರು.
ಇದನ್ನೂ ಓದಿ:ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್ ಭರ್ಜರಿ ಗೆಲುವು
ತೈಲ ದರಕ್ಕೆ ಜಿಎಸ್‌ಟಿ ಸಲ್ಲದು
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿದಿದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕರ ಕಡಿಮೆ ಮಾಡುತ್ತಿಲ್ಲ. ಕಚ್ಚಾತೈಲ ದರ ಕಡಿಮೆ ಇದ್ದರೂ ಹೆಚ್ಚುವರಿಯಾಗಿ ಅಬಕಾರಿ ಸುಂಕ ಹೆಚ್ಚಿಸಿದ್ದು, ಅದನ್ನು ಶೇ.50 ಕಡಿಮೆ ಮಾಡಬೇಕು. ಪೆಟ್ರೋಲ್ ಮೇಲೆ ಮಾರಾಟ ತೆರಿಗೆ ವಿಧಿಸುವುದು ರಾಜ್ಯದ ಅಧಿಕಾರ. ಅದನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿದರೆ ಅದು ಕೇಂದ್ರ ಸರಕಾರದ ವ್ಯಾಪ್ತಿಗೆ ಹೋಗುತ್ತದೆ. ಆದ್ದರಿಂದ ತೈಲ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.