ಕುಪ್ಪೇಲೂರ್ ಲಖನೌ ಪೊಲೀಸರ ವಶಕ್ಕೆ
Team Udayavani, Nov 10, 2019, 11:01 AM IST
ಹುಬ್ಬಳ್ಳಿ: ಉತ್ತರ ಪ್ರದೇಶದ ಬಿಜೆಪಿ ಮುಖಂಡ ಅಖೀಲೇಶ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಹಳೇಹುಬ್ಬಳ್ಳಿ ಅರವಿಂದ ನಗರ ನಿವಾಸಿ ಮಹಮ್ಮದಜಾಫರಸಾದಿಕ್ ಕುಪ್ಪೇಲೂರ್‌ನನ್ನು ಶನಿವಾರ ಲಖನೌ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆಗೆ ಲಖನೌಗೆ ಕರೆದೊಯ್ದಿದ್ದಾರೆ.
ಅಖೀಲೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೆ. 21ರಂದು ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ)ದವರು ವಶಕ್ಕೆ ಪಡೆದಿದ್ದರು. ಈಗ ಲಖನೌ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿ ಮಹಮ್ಮದಜಾಫರಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ರೈಲ್ವೆ ವರ್ಕ್‌ಶಾಪ್‌ನ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದಜಾಫರಸಾದಿಕ್‌ನನ್ನು ಸೆ. 21ರಂದು ಐಎಸ್‌ಡಿಯವರು ವಶಕ್ಕೆ ಪಡೆದು, ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದವರಿಗೆ ಒಪ್ಪಿಸಿದ್ದರು.
ಅವರು ಸೆ. 22ರಂದು ವಿಚಾರಣೆ ಮಾಡಿ ಕಳುಹಿಸಿದ್ದರು. ಈ ವೇಳೆ ಇದೇ ಅಖೀಲೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಗ್ಪುರದಲ್ಲಿ ಬಂಧನವಾಗಿರುವ ಪ್ರಮುಖ ಆರೋಪಿ ಸಯ್ಯದ್ ಆಸಿಂ ಅಲಿ ಜೊತೆ ಮಹಮ್ಮದಜಾಫರಸಾದಿಕ್ ನಿಕಟ ಸಂಪರ್ಕ ಹೊಂದಿದ್ದ ಮಾಹಿತಿ ತನಿಖಾ ತಂಡಕ್ಕೆ ದೊರೆಕಿತ್ತು. ಅಲ್ಲದೆ ಈತ ಸಹ ಈ ಪ್ರಕರಣದಲ್ಲಿ ಭಾಗಿಯಾಗಿದ್ದನೆಂಬ ಅನುಮಾನದಡಿ ಲಖನೌ ಪೊಲೀಸರು ಮಹಮ್ಮದಜಾಫರಸಾದಿಕ್‌ನನ್ನು ಶನಿವಾರ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿ, ವೈದ್ಯಕೀಯ ತಪಾಸಣೆಗೊಳಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಲಖನೌಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ರೈಲ್ವೆ ಇಲಾಖೆಯು ಮಹಮ್ಮದಜಾಫರಸಾದಿಕ್‌ನನ್ನು ಸೆ. 23ರಂದು ಸೇವೆಯಿಂದ ಅಮಾನತುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.