25 ಸಾವಿರ ಮತಗಳ ಅಂತರದಿಂದ ಕುಸುಮಾವತಿ ಗೆಲ್ಲಿಸಿ: ಎಚ್ಕೆ
Team Udayavani, May 4, 2019, 11:26 AM IST
ಕುಂದಗೋಳ: ಮೈತ್ರಿ ಸರ್ಕಾರದ ನಾಯಕರೆಲ್ಲ ಒಗ್ಗೂಡುವುದರೊಂದಿಗೆ 25 ಸಾವಿರ ಮತಗಳ ಅಂತರದಲ್ಲಿ ಕುಸುಮಾವತಿ ಅವರನ್ನು ಗೆಲ್ಲಿಸಲು ಶ್ರಮಿಸೋಣ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಸಂಶಿಯ ಎಸ್‌ಜಿಎಫ್‌ಎಸ್ ಶಾಲಾವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಶಿವಳ್ಳಿ ಅವರ ಅಪಾರ ನಂಬಿಕೆ, ಅಭಿಮಾನ, ಪ್ರೀತಿಯನ್ನು ಎಲ್ಲರೂ ಮರಳಿ ಪಡೆಯಬೇಕಾದರೆ ಅವರ ಪತ್ನಿ ಕುಸುಮಾವತಿ ಅವರಿಗೆ ಮತ ನೀಡಿ ಗೆಲ್ಲಿಸಬೇಕಾಗಿದೆ. ಸಿದ್ದರಾಮಯ್ಯನವರ ಅನೇಕ ಭಾಗ್ಯಗಳನ್ನು ತಮ್ಮೆಲ್ಲರ ಮನೆಬಾಗಿಲಿಗೆ ತಲುಪಿಸಿದ ಶಿವಳ್ಳಿ ಅವರ ಕಾರ್ಯಕ್ಕೆ ಎಲ್ಲರೂ ಋಣಿಯಾಗಬೇಕಾಗಿದೆ ಎಂದರು.
ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕಳೆದ ಅವಧಿ ಕಾಂಗ್ರೆಸ್ ಸರ್ಕಾರದಲ್ಲಿ 160 ಭರವಸೆಗಳನ್ನು ನಾವು ಈಡೇರಿಸಿದ್ದೆವು. ಮೋದಿ ಅವರು ನೂರರಷ್ಟು ಸುಳ್ಳು ಭರವಸೆ ನೀಡಿ ಒಂದೂ ಈಡೇರಿಸಿಲ್ಲ ಎಂದು ಹರಿಹಾಯ್ದರಲ್ಲದೆ ಶಿವಳ್ಳಿ ಅವರ ಬೆಂಬಲಕ್ಕೆ ಪ್ರತಿಯೊಬ್ಬ ಕಾರ್ಯಕರ್ತ ನಿಂತು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ವಿನಯ ಕುಲಕರ್ಣಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು 10 ಮನೆ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಪರವಾಗಿ ಮತ ಹಾಕಿಸಲು ಅಣಿಯಾಗಬೇಕು ಎಂದರು.
ಮಾಜಿ ಶಾಸಕ ಎಂ.ಎಸ್. ಅಕ್ಕಿ, ಎಂ.ಡಿ. ಲಕ್ಷ್ಮೀನಾರಾಯಣ, ಅಭ್ಯರ್ಥಿ ಕುಸುಮಾವತಿ ಶಿವಳ್ಳಿ, ವೀರಣ್ಣ ಮತ್ತಿಕಟ್ಟಿ, ಆರ್.ಬಿ. ತಿಮ್ಮಾಪುರ, ವಿನಯಕುಮಾರ ಪಾಟೀಲ, ಪ್ರಸಾದ ಅಬ್ಬಯ್ಯ, ಅರವಿಂದ ಕಟಗಿ ಮಾತನಾಡಿದರು. ಉಮೇಶ ಹೆಬಸೂರ, ಸುರೇಶಗೌಡ ಪಾಟೀಲ, ಷಣ್ಮುಖ ಶಿವಳ್ಳಿ, ದಯಾನಂದ ಕುಂದೂರ, ಬೀರಪ್ಪ ಕುರುಬರ, ಸಕ್ರು ಲಮಾಣಿ ಇನ್ನಿತರರಿದ್ದರು.
ಚಿಂಚೋಳಿ ಕ್ಷೇತ್ರದ ಉಮೇಶ ಜಾಧವ ಅವರು ತಮ್ಮನ್ನು ತಾವು ಬಿಜೆಪಿಗೆ ಮಾರಿಕೊಂಡರು. ಆದರೆ, ಶಿವಳ್ಳಿ ಅವರು ಮಾರಿಕೊಳ್ಳದೆ ಪಕ್ಷದ ನಿಷ್ಠತೆಗೆ ಬದ್ಧರಾದರು. ಅಂಥವರ ಪತ್ನಿ ಕುಸುಮಾವತಿ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ನಾವೂ ಸಹ ನಿಮ್ಮೊಂದಿಗಿರುತ್ತೇವೆ.
•ದಿನೇಶ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಮೋದಿ ಅವರು ಸುಳ್ಳು ಹೇಳುವ ನೋಬೆಲ್ ಪ್ರಶಸ್ತಿಗೆ ಅರ್ಹರಾದ ಪ್ರಧಾನಿ. ಸಬ್ ಕಾ ಸಾಥ್ ಸಬ್ ಕಾ ಸತ್ಯನಾಶ ಮಾಡಿದ ವಿಶೇಷ ಪ್ರಧಾನಿ. ಸೈನಿಕರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದು, ಸುಳ್ಳಿನ ಕಥೆಗಾರನ ಮಾತು ನಮಗೆಲ್ಲ ಗೊತ್ತಿದೆ. ಅಂತಹ ಸುಳ್ಳಿನ ಸರದಾರನ ಪಕ್ಷವಾದ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಗೆಲ್ಲಿಸಿ ಸತ್ಯಕ್ಕೆ ಜಯ ಸಿಗುವಂತಾಗಲಿ.
•ಎ.ಎಂ. ಹಿಂಡಸಗೇರಿ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.