Hubli; ಹಿಂದುಳಿದ ವರ್ಗದವರಲ್ಲಿ ನಾಯಕತ್ವದ ಕೊರತೆಯಿದೆ: ಎನ್.ಎಲ್. ನರೇಂದ್ರ ಬಾಬು
Team Udayavani, Aug 26, 2024, 3:57 PM IST
ಹುಬ್ಬಳ್ಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತು 76 ವರ್ಷವಾದರೂ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರರ ಆಸೆ ಇನ್ನೂ ಈಡೇರಿಲ್ಲ. ದೇಶದಲ್ಲಿ ಹಿಂದುಳಿದ ವರ್ಗದವರು ಶೇ.60ರಷ್ಟು ಜನಸಂಖ್ಯೆ ಹೊಂದಿದ್ದರೂ ಸರಿಯಾಗಿ ಮೀಸಲಾತಿ ಜಾರಿಯಾಗಿಲ್ಲ. ಇದಕ್ಕೆಲ್ಲಾ ಸಮಾಜವು ಸಂಘಟಿತವಾಗುವಲ್ಲಿ ತೋರಿದ ನಿರ್ಲಕ್ಷ್ಯ ಹಾಗೂ ಮುಖಂಡರು ಗಟ್ಟಿ ಧ್ವನಿ ಎತ್ತುವಲ್ಲಿ ವಿಫಲವಾಗಿರುವುದೇ ಕಾರಣ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಎನ್.ಎಲ್. ನರೇಂದ್ರ ಬಾಬು ಹೇಳಿದರು.
ಇಲ್ಲಿನ ಕೇಶ್ವಾಪುರ ರಸ್ತೆಯ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕರ ಕಚೇರಿ ಎದುರಿನಲ್ಲಿ ಅಖಿಲ ಭಾರತ ಒಬಿಸಿ ರೈಲ್ವೆ ನೌಕರರ ಸಂಘದ (ಎಐಒಬಿಸಿಆರ್‌ಇಎ) ನವೀಕೃತ ವಲಯ ಕಚೇರಿ ಉದ್ಘಾಟನೆ ಹಾಗೂ ಬಿ.ಪಿ. ಮಂಡಲ 106ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದರು.
ಕೌಶಲ್ಯ ಇರುವುದೇ ಹಿಂದುಳಿದ ವರ್ಗದವರಲ್ಲಿ. ಆದರೆ ನಮ್ಮ ಭವಿಷ್ಯ ರೂಪಿಸುವ ನಾಯಕತ್ವದ ಕೊರತೆ ಇದೆ. ಸಮಾಜವು ಎಲ್ಲಾ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರಬೇಕು. ಸಮಾನತೆ, ಸಮಾನ ಅವಕಾಶ ಸಿಗಬೇಕು. ಹಿಂದುಳಿದವರೆಂದು ಕೈಕಟ್ಟಿ ಕುಳಿತರೆ ಆಗದು. ಸುಶಿಕ್ಷಿತರಾಗಿ ಸಂಘಟಿತರಾಗಬೇಕಿದೆ. ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಬೇಕಿದೆ ಎಂದರು.
ಎಐಒಬಿಸಿಆರ್‌ಇಎ ಪ್ರಧಾನ ಕಾರ್ಯದರ್ಶಿ ಗೋವರ್ಧನ ವೈ., ಹುಬ್ಬಳ್ಳಿ ವಿಭಾಗದ ಮುಖ್ಯ ಕಾರ್ಯಾಗಾರ ವ್ಯವಸ್ಥಾಪಕ ವಿಜಯ ಸಿಂಗ್ ಯಾದವ, ಅನಂತ ಗುರುಸ್ವಾಮಿ, ಜಿ.ಬಿ. ವೆಂಕಟ ರಾವ್., ಗೋಪಿನಾಥ, ರಾಜೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.