ಜಿಪಂ ವ್ಯಾಪ್ತಿ ಕೆರೆಗಳು ಗ್ರಾಪಂಗಳ ತೆಕ್ಕೆಗೆ


Team Udayavani, Apr 10, 2021, 3:15 PM IST

ಜಿಪಂ ವ್ಯಾಪ್ತಿ ಕೆರೆಗಳು ಗ್ರಾಪಂಗಳ ತೆಕ್ಕೆಗೆ

ಹುಬ್ಬಳ್ಳಿ: ಜಿಪಂ ವ್ಯಾಪ್ತಿಯ ಕೆರೆಗಳನ್ನು ಗ್ರಾಪಂಗಳಿಗೆ ನೀಡುತ್ತಿದ್ದು, ಜಲಶಕ್ತಿ ಅಭಿಯಾನದ ಮೂಲಕ ಅವುಗಳನ್ನು ಅಭಿವೃದ್ಧಿಪಡಿಸುವ ಕೆಲಸ ಆಗಬೇಕು.ಮುಂದಿನ ಮಳೆಗಾಲ ಆರಂಭವಾಗುವುದರೊಳಗೆ ಈ ಕಾರ್ಯ ಪೂರ್ಣಗೊಳ್ಳಬೇಕು ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಡೆನಿಸನ್ಸ್‌ ಹೋಟೆಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್‌ ಇಲಾಖೆ ಹಾಗೂ ಜಿಪಂ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟನೆ ಮತ್ತುರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಲಶಕ್ತಿ ಅಭಿಯಾನದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ವಿವರವಾದಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ನಿಗದಿತ 100 ದಿನಗಳಲ್ಲಿ ವ್ಯಾಪಕವಾಗಿ ಜಲ ಸಂರಕ್ಷಣಾಕಾಮಗಾರಿಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಜಿಲ್ಲಾ ಧಿಕಾರಿಗಳು, ಜಿಪಂ ಸಿಇಒಗಳಿಗೆ ಸೂಚನೆ ನೀಡಲಾಗಿದೆ. ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಕೆಲವೆಡೆ ಅದ್ಭುತ ಕಾರ್ಯಗಳನ್ನುಕೈಗೊಳ್ಳಲಾಗಿದೆ. ಇವು ರಾಜ್ಯಕ್ಕೆ ಮಾದರಿಯಾಗಿದ್ದು,ಜಲಶಕ್ತಿ ಅಭಿಯಾನವನ್ನು ಕೂಡ ಯಶಸ್ವಿಗೊಳಿಸುವ ಕಾರ್ಯ ಆಗಬೇಕು ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕೇಂದ್ರ ಸರಕಾರ ಜಲಜೀವನ ಮಿಷನ್‌ ಯೋಜನೆಯಡಿಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಿದೆ. ಇದಕ್ಕಾಗಿ 3.6 ಲಕ್ಷ ಕೋಟಿ ಹಣ ಮೀಸಲಿಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 18.5ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರು ನೀಡುವಗುರಿಯಿದೆ. ಜಿಲ್ಲೆಯಲ್ಲಿ ಜಲಜೀವನ ಮಿಷನ್‌ ಅಡಿ334 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಹುಬ್ಬಳ್ಳಿ ಉಣಕಲ್ಲ ಕೆರೆ ಜಲಾನಯನಪ್ರದೇಶ ಗುರುತಿಸಿ ಕಾಪಾಡಿದ್ದರಿಂದ ಕೆರೆಯ ನೀರಿನ ಮೂಲ ಬತ್ತದೆ ಕೆರೆ ಉಳಿದುಕೊಂಡು ಬಂದಿದೆ.2050ರ ವೇಳೆಗೆ ಭಾರತದಲ್ಲಿ ನೀರಿನ ಬವಣೆಹೆಚ್ಚಾಗಬಹುದು. ಇದರಲ್ಲಿ ಹು-ಧಾ ಮಹಾನಗರವೂಒಂದು. ಇಂದಿನಿಂದಲೇ ಇದನ್ನು ತಪ್ಪಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದರು.

ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ನಗರ,ಗ್ರಾಮಗಳು ನೀರಿನ ಸಮಸ್ಯೆ ಎದುರಿಸಲಿವೆ. ಈಗಲೇಎಚ್ಚೆತ್ತುಕೊಂಡು ಜಲಮೂಲಗಳ ಸಂರಕ್ಷಣೆ ಕೆಲಸಆಗಬೇಕು. ಜಲ ಸಂಕಷ್ಟ, ಜಲಮಾಲಿನ್ಯ ಕುರಿತುಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಪರಿಸರ ತಜ್ಞ ಪ್ರೊ| ಎಂ.ಬಿ. ಕುಮಾರಸ್ವಾಮಿ ಮಾತನಾಡಿದರು. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಶಂಕರ ಪಾಟೀಲ ಮುನೇನ ಕೊಪ್ಪ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ವಾಕರಸಾಸಂ ಅಧ್ಯಕ್ಷ ವಿ.ಎಸ್‌. ಪಾಟೀಲ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಎಸ್‌.ಐ. ಚಿಕ್ಕನಗೌಡ್ರ, ಹುಡಾ ಅಧ್ಯಕ್ಷ ಅಧ್ಯಕ್ಷ ನಾಗೇಶ ಕಲಬುರ್ಗಿ, ನಾಗರಾಜ ಗಂಗೊಳ್ಳಿ,ಗ್ರಾಮೀಣಾಭಿವೃದ್ಧಿ ಆಯುಕ್ತ ಅನಿರುದ್ಧ ಶ್ರವಣಇನ್ನಿತರರಿದ್ದರು. ಗ್ರಾಮೀಣಾಭಿವೃದ್ಧಿ ಇಲಾಖೆಯಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ವಾಗತಿಸಿದರು. ಜಿಪಂ ಸಿಇಒ ಡಾ| ಬಿ. ಸುಶೀಲಾ ಜಲಶಕ್ತಿ ಪ್ರತಿಜ್ಞಾವಿಧಿ  ಬೋಧಿಸಿದರು

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.