ಕೆರೆ-ಕಟ್ಟೆ ಡಿನೋಟಿಫಿಕೇಶನ್‌ ಹಿಂದೆ ಭೂ ಮಾಫಿಯಾ: ಹಿರೇಮಠ

Team Udayavani, Jul 25, 2017, 12:07 PM IST

hub2.jpg

ಹುಬ್ಬಳ್ಳಿ: ರಾಜ್ಯದ ಹಲವು ಕೆರೆ-ಕಟ್ಟೆಗಳನ್ನು ಭೂ ಮಾಫಿಯಾಕ್ಕೆ ನೀಡುವ ಹುನ್ನಾರ ನಡೆದಿದ್ದು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸಿಎಂ ಸಿದ್ದರಾಮಯ್ಯ ಅವರು ತಿಮ್ಮಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಮುಖ್ಯಸ್ಥ ಎಸ್‌. ಆರ್‌. ಹಿರೇಮಠ ಒತ್ತಾಯಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಂದಾಯ ದಾಖಲೆಗಳಲ್ಲಿ ಬರುವ ಹಲವು ಕೆರೆ-ಕಟ್ಟೆ, ಹಳ್ಳಗಳು ತಮ್ಮ ಗುಣಲಕ್ಷಣಗಳನ್ನು ಕಳೆದುಕೊಂಡಿವೆ. ಮೂಲ ಸ್ಥಿತಿಗೆ ತರಲಾಗದ ಸ್ಥಿತಿಯಲ್ಲಿವೆ. ಆ ಪ್ರದೇಶಗಳನ್ನು ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಿಕೊಳ್ಳುವ ದಿಸೆಯಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆ 1964ರ 68ನೇ ಕಲಂ ಅಡಿಯಲ್ಲಿ ಪ್ರಕ್ರಿಯೆ ನಡೆಸಿ ಸಾರ್ವಜನಿಕ ಹಕ್ಕಿನಿಂದ ವಿಹಿತಗೊಳಿಸಲು ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕೂಡಲೇ ರಾಜೀನಾಮೆ ನಿಡಬೇಕೆಂದು ಆಗ್ರಹಿಸಿದರು. 

ಕೆರೆ-ಹಳ್ಳಗಳನ್ನು ರಕ್ಷಿಸುವ ದಿಸೆಯಲ್ಲಿ ಡಿನೋಟಿಫಿಕೇಶನ್‌ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲರು ವಿರೋಧಿಸಿರುವುದು ಸ್ವಾಗತಾರ್ಹ. ನೂರಾರು ವರ್ಷಗಳಿಂದ ಉಳಿಸಿಕೊಂಡು ಬಂದ ಕೆರೆ- ಕಟ್ಟೆ ಸೇರಿದಂತೆ ಜಲಸಂಪನ್ಮೂಲಗಳನ್ನು ಪರಭಾರೆ ಮಾಡುವುದು ಕಾನೂನಿನ ವಿರುದ್ಧವಾಗಿದೆ ಎಂದರು. 

ಕಾಗೋಡು ಹೋರಾಟದ ಹಿನ್ನೆಲೆಯಿಂದ ಬಂದ ಸಚಿವ ತಿಮ್ಮಪ್ಪ ಅವರು ಕಲಂ ತಿದ್ದುಪಡಿಗೆ ಅವಕಾಶ ನೀಡಬಾರದು. ಭೂ ಮಾಫಿಯಾ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಪ್ರಜ್ಞಾವಂತರು ಹೋರಾಟಕ್ಕೆ ಅಣಿಯಾಗಬೇಕು ಎಂದರು. 

ರೈತ ವಿರೋಧಿ ಕೇಂದ್ರ ಸರ್ಕಾರ: ಲೋಕಸಭಾ ಚುನಾವಣೆಗೆ ಮುನ್ನ ನೀಡಿದ ಭರವಸೆಗಳಿಂದ ಬಿಜೆಪಿ ವಿಮುಖವಾಗಿದೆ. ರೈತರ ಒಳಿತಿಗೆ ಹಾಗೂ ಗಾಮಗಳ ಅಭಿವೃದ್ಧಿಗೆ ಆದ್ಯತೆ  ನೀಡುವುದಾಗಿ ಪಕ್ಷ ಹೇಳಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರಿಗಾಗಿ ಯಾವುದೇ ಜನಪರ ಕಾರ್ಯಕ್ರಮ ರೂಪಿಸಿಲ್ಲ ಎಂದರು. 

ಸಮ್ಮೇಳನ: ದಾವಣಗೆರೆಯಲ್ಲಿ ಸೆ.26 ಹಾಗೂ 27ರಂದು  ಜನಸಂಗ್ರಾಮ ಪರಿಷತ್‌ 3ನೇ ಸಮ್ಮೇಳನ ನಡೆಯಲಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ, ನಿವೃತ್ತ ಲೋಕಾಯುಕ್ತ ಸಂತೋಷ ಹೆಗ್ಡೆ ಸೇರಿದಂತೆ ಸಾಹಿತಿಗಳು, ನ್ಯಾಯವಾದಿಗಳು ಪಾಲ್ಗೊಂಡು ವಿಚಾರ ಮಂಡಿಸಲಿದ್ದಾರೆ. ಕೃಷಿ ಸಂಕಟ ಹಾಗೂ ಶಾಶ್ವತ ಪರಿಹಾರ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದರು. 

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.