ಅಭಿವೃದ್ಧಿ ಪಥದತ್ತ ಹು-ಧಾ ದಾಪುಗಾಲು
Team Udayavani, Nov 15, 2020, 3:35 PM IST
ಹುಬ್ಬಳ್ಳಿ: ಅವಳಿನಗರ ಅಭಿವೃದ್ಧಿ ಪಥದತ್ತ ದಾಪುಗಾಲು ಇರಿಸುತ್ತಿದ್ದು, ಎಲ್ಲ ರಸ್ತೆಗಳು ಅಭಿವೃದ್ಧಿ ಹೊಂದಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಉಣಕಲ್ಲ-ಮಾರಡಗಿ ಸಿಸಿ ರಸ್ತೆ ಕಾಮಗಾರಿ, ಉಣಕಲ್ಲ ಹೆಬ್ಬಳ್ಳಿ ರಸ್ತೆ ಮಧ್ಯಬರುವ ಎರಡು ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಅವಳಿನಗರದ ವಿವಿಧ ಪ್ರದೇಶಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಶ್ರೀನಗರ ಕ್ರಾಸ್‌ನಿಂದ ಮಾರಡಗಿ ರಸ್ತೆ ರೈಲ್ವೆ ಹಳಿಯವರೆಗೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು, ಈ ಕಾಮಗಾರಿ ಮೂರ್‍ನಾಲ್ಕು ತಿಂಗಳ ಹಿಂದೆಯೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಮಳೆಯ ಕಾರಣ ತಡವಾಗಿದ್ದು, ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದರು.
ಉಣಕಲ್ಲ-ಮಾರಡಗಿ ರಸ್ತೆಯಲ್ಲಿ ಬರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಸುವ ಕುರಿತು ರೈಲ್ವೆ ಖಾತೆ ಸಹಾಯಕ ಸಚಿವರಾಗಿದ್ದ ಸುರೇಶ ಅಂಗಡಿ ಅವರೊಂದಿಗೆ ಚರ್ಚಿಸಲಾಗಿತ್ತು. ಅದು ಅಷ್ಟಕ್ಕೆ ನಿಂತಿದ್ದು, ಮುಂದಿನ ವಾರದಲ್ಲಿ ರೈಲ್ವೆ ಪ್ರಧಾನ ವ್ಯವಸ್ಥಾಪಕರೊಂದಿಗೆಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದರು.
ಸಚಿವ ಜಗದೀಶ ಶೆಟ್ಟರ ಮಾತನಾಡಿ, ವಿವಿಧ ಯೋಜನೆಯಡಿ ಅವಳಿನಗರಕ್ಕೆ ಹೆಚ್ಚಿನ ಅನುದಾನ ತರಲಾಗುತ್ತಿದ್ದು, ಇದೀಗ 7 ಕೋಟಿ ಅನುದಾನದಲ್ಲಿ ಉಣಕಲ್ಲ-ಮಾರಡಗಿ ಸಿಸಿ ರಸ್ತೆ ಹಾಗೂ 5 ಕೋಟಿ ಅನುದಾನದಲ್ಲಿ ಉಣಕಲ್ಲ-ಹೆಬ್ಬಳ್ಳಿ ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದು, ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಭೈರಿದೇವರಕೊಪ್ಪದ ಎರಡು ರಸ್ತೆಗಳ ಕಾಮಗಾರಿ ಉಳಿದಿದ್ದು, ಈ ವರ್ಷ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. ಅವಳಿನಗರದಲ್ಲಿ ಕೈಗಾರಿಕೆಗಳ ಸ್ಥಾಪನೆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಎಫ್ಎಂಸಿಜಿ ವಲಯ ಸ್ಥಾಪನೆ ಆಗುತ್ತಿದೆ. ಜತೆಗೆ ಸುಮಾರು 5-6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ಸಾಧ್ಯತೆ ಇದ್ದು, ಇದರಿಂದ ಸುಮಾರು 30 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.
ಪಾಲಿಕೆ ಮಾಜಿ ಸದಸ್ಯ ಉಮೇಶ ಕೌಜಗೇರಿ ಪ್ರಾಸ್ತಾವಿಕ ಮಾತನಾಡಿದರು.ಮುಖಂಡರಾದ ರಾಜಣ್ಣಾ ಕೊರವಿ, ಮಲ್ಲಿಕಾರ್ಜುನ ಗುಂಡೂರ, ತಿಪ್ಪಣ್ಣ ಮಜ್ಜಗಿ, ಎಸ್.ಬಿ.ಹಿರೇಮಠ, ಬಸಣ್ಣಾ ಹೆಬ್ಬಳ್ಳಿ, ರಾಮಣ್ಣಾ ಕೊಕಾಟೆ, ಪರಣ್ಣ ಮುಳಗುಂದ ಇನ್ನಿತರರಿದ್ದರು.
ನಗರ ವಿಕಾಸ ಯೋಜನೆಯಡಿ ಮಹಾನಗರಕ್ಕೆ 150 ಕೋಟಿ ರೂ. ಬಂದಿದ್ದು, ರಸ್ತೆಗಳ ಸುಧಾರಣೆ ಸೇರಿದಂತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಜನೆವರಿ ತಿಂಗಳಲ್ಲಿ 150 ಕೋಟಿ ರೂ. ಕಾಮಗಾರಿ ಮಾಡಲಾಗುವುದು. ಚನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿಗೆ ಶೀಘ್ರದಲ್ಲಿಯೇ ಭೂಮಿ ಪೂಜೆ ಮಾಡಲಾಗುವುದು. –ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ
ನ್ಯೂ ಕಾಟನ್ ಮಾರ್ಕೆಟ್ ಸಿಸಿ ರಸ್ತೆ ಕಾಮಗಾರಿ ಆರಂಭವಾಗದಿರುವುದಕ್ಕೆ ಹಿಂದಿನ ಸರಕಾರಗಳು ಕಾರಣ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಲಾಗಿತ್ತು. ಬಿಜೆಪಿ ಸರ್ಕಾರ ಬಂದ ನಂತರದಲ್ಲಿ ಕಾಮಗಾರಿ ಆರಂಭವಾಗಿದೆ. –ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.