ರಸ್ತೆ ಕಾಮಗಾರಿಗೆ ಭೂಮಿಪೂಜೆ
Team Udayavani, Nov 17, 2017, 12:04 PM IST
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವಾರ್ಡ್ 60ರ ಹಳೇ ಹುಬ್ಬಳ್ಳಿ ವೃತ್ತದಿಂದ ಜಂಗ್ಲಿಪೇಟೆ ಕಲ್ಮೇಶ್ವರ ನಗರದವರೆಗೆ 15 ಲಕ್ಷ ರೂ. ಹಾಗೂ ಮಸ್ತಾನ ಸೋಫಾ ಮುಖ್ಯರಸ್ತೆಯಿಂದ ಜಂಗ್ಲಿಪೇಟೆ ವೃತ್ತದವರೆಗೆ 15 ಲಕ್ಷ ರೂ. ಸೇರಿದಂತೆ ಒಟ್ಟು 30 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ಗುರುವಾರ ನೆರವೇರಿಸಿದರು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಹಳೇ ಹುಬ್ಬಳ್ಳಿಯಿಂದ ನೇಕಾರ ನಗರ ಹಾಗೂ ಸುತ್ತಲಿನ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಹಳೇ ಹುಬ್ಬಳ್ಳಿ ಭಾಗದ ಅತ್ಯಂತ ಜನ ದಟ್ಟಣೆ ಹೊಂದಿರುವ ರಸ್ತೆಗಳಲ್ಲಿ ಇದು ಒಂದಾಗಿದ್ದು ಈ ರಸ್ತೆ ಅಭಿವೃದ್ಧಿಯಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಪಾಲಿಕೆ ಸದಸ್ಯೆ ರಜೀಯಾಬೇಗಂ ಅಮಟೂರು, ಇಂಟಕ್‌ನ ಪ್ರಧಾನ ಕಾರ್ಯದರ್ಶಿ ಬಸವರಾಜ ಮೆಣಸಗಿ, ಮುಖಂಡರಾದ ಎ.ಆರ್. ಅಮಟೂರು, ಸಿದ್ದಪ್ಪ ಕೋಳೂರು, ಪಾಶ್ವನಾಥ ಕುದುರೆಮೋತಿ, ಬಸವರಾಜ ಚಿಕ್ಕಮಠ, ಸುನೀಲ ತಮಾಟೆ, ಗಣೇಶ ಮೂಲಿಮನಿ, ಮಂಜುನಾಥ, ನಿರಂಜನ ಹಿರೇಮಠ, ನಾಸಿರ ಅಸುಂಡಿ, ನಬೀಸಾಬ್ ಮಾಗಾವಿ, ಬಾಬಾ ಧಾರವಾಡ, ವಲಯ ಕಚೇರಿ ಅ ಧಿಕಾರಿಗಳಾದ ಆನಂದ ಕಾಂಬ್ಳೆ, ಬಸವರಾಜ ಲಮಾಣಿ, ಹಂಚಿನಮನಿ, ಜೆ.ಇ. ಗಣೇಶ ನಾಯ್ಕ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.