ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಕೀಲರ ಪ್ರತಿಭಟನೆ
•ಹುಬ್ಬಳ್ಳಿಯ ನೂತನ ನ್ಯಾಯಾಲಯಗಳ ಸಂಕೀರ್ಣಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಒತ್ತಾಯ
Team Udayavani, Jul 3, 2019, 9:27 AM IST
ಹುಬ್ಬಳ್ಳಿ: ನೂತನ ನ್ಯಾಯಾಲಯಕ್ಕೆ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ನೂತನ ನ್ಯಾಯಾಲಯಗಳ ಸಂಕೀರ್ಣಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಕೀಲರು ನ್ಯಾಯಾಲಯದ ಆವರಣ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ವರೆಗೆ ಬಸ್ ಸೌಲಭ್ಯ ಇಲ್ಲದ್ದರಿಂದ ವಿವಿಧ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಗೆ, ನ್ಯಾಯ ಕೋರಿ ಬರುವ ಕಕ್ಷಿದಾರರಿಗೆ, ವಕೀಲರಿಗೆ ಹಾಗೂ ಕೋರ್ಟ್ ಸಿಬ್ಬಂದಿಗೆ ತುಂಬಾ ಸಮಸ್ಯೆ ಆಗುತ್ತಿದೆ. ಕೋರ್ಟ್‌ಗೆ ಹೋಗಲು-ಬರಲು ಖಾಸಗಿ ವಾಹನ ಇಲ್ಲವೆ ಆಟೋರಿಕ್ಷಾಗಳನ್ನೇ ಅವಲಂಬಿಸಬೇಕಾಗಿದೆ. ಅವರು ಕೇಳಿದಷ್ಟು ಹಣ ಕೊಡಬೇಕಾಗಿದೆ. ಹೀಗಾಗಿ ಹೆಚ್ಚಿನ ಹೊರೆ ಆಗುತ್ತಿದೆ. ಕೂಡಲೇ ಕೋರ್ಟ್ ವರೆಗೆ ಬಸ್ ಸೌಲಭ್ಯ ಒದಗಿಸಬೇಕೆಂದು ಪ್ರತಿಭಟನಾಕಾರರು ವಾಕರಸಾ ಸಂಸ್ಥೆಯನ್ನು ಒತ್ತಾಯಿಸಿದರು.
ಸಂಸ್ಥೆಯ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಂಘದ ಮನವಿ ಸ್ವೀಕರಿಸಿ, ಕೋರ್ಟ್ ವರೆಗೆ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಕಾರ್ಯದರ್ಶಿ ಗುರು ಹಿರೇಮಠ, ಎಸ್.ವಿ. ಕೊಪ್ಪರ, ಜಯಪ್ರಕಾಶ ಪಾಟೀಲ, ವಿಠuಲ ಸೋಮನಕೊಪ್ಪ, ಕಾಮಧೇನು, ಶೋಭಾ ಪವಾರ, ಬಿ.ವಿ. ಕೋರಿಮಠ, ಮಂಜುನಾಥ ಕಟ್ಟಿ, ಅಶೋಕ ಅಣವೇಕರ, ಶಿವಾನಂದ ವಡ್ಡಟ್ಟಿ, ಗುರು ಕೆಲಗೇರಿ, ವಿ.ಕೆ. ಹಿರೇಮಠ, ಮಂಜುನಾಥ ಗುಡಗೇರಿ, ವೆಂಕಟೇಶ ಮಲ್ಯಾಲಿ, ಮುರಳಿ ಪೂಜಾರ, ಲಿಂಗರಾಜ ಪಾಟೀಲ, ಸಂತೋಷ ರೆಡ್ಡಿ, ಸವಿತಾ ಪಾಟೀಲ, ಉಮಾ ಹಂಡಿ, ಮಹಾದೇವಿ ಮುತ್ತಗಿ, ರೇಖಾ ಮುತ್ತಗಿ, ಪ್ರಭಾ ಕುಂಬಾರ, ನಂದಾ ಮಾಳವದೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.